೦೩

೦೦೦ ಸೂ ಬರುತ ...{Loading}...

ಸೂ. ಬರುತ ಕಂಡನು ಕಣ್ವನಾಶ್ರಮ
ವರದ ಜಂಬೂಫಲವ ಮಾರುತಿ
ತರಲು ಯಮಸುತ ಹಲುಬೆ ಮುರರಿಪು ಶಾಖೆಗಡರಿಸಿದ ॥ 0 ॥

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಯಮಸುತ ಮುನಿಜನಂಗಳ
ಮೇಳದಲಿ ಹೊರವಂಟು ತನ್ನನುಜಾತರೊಡಗೂಡಿ
ತಾಳಿಗೆಯ ತಲ್ಲಣದ ಗಿರಿಗಳ
ಮೇಲೆ ಚರಿಸುತ ಬಂದು ವಿಪಿನ
ವ್ಯಾಳ ಗಜ ಶಾರ್ದೂಲ ಸಿಂಹಾದಿಗಳನೀಕ್ಷಿಸುತ ॥1॥

೦೦೨ ಬರಬರಲು ಮುನ್ದೊನ್ದು ...{Loading}...

ಬರಬರಲು ಮುಂದೊಂದು ವನದೊಳು
ಚರಿಪ ಪಕ್ಷಿ ಮೃಗಾಳಿ ತಳಿತಿಹ
ಬಿರಿಮುಗುಳನೀಕ್ಷಿಸುವ ಮರಿದುಂಬಿಗಳ ಮೇಳವದ
ಪರಿಪರಿಯ ಮರ ಪೂ ಫಲಂಗಳ
ನಿರದೆ ಕೊಡುತಿರೆ ಪಕ್ಷಿಮೃಗಕುಲ
ವೆರಸಿ ಮೆರೆದವು ಬನದ ಸುತ್ತಲು ರಾಯ ಕೇಳ್ ಎಂದ ॥2॥

೦೦೩ ತುಮ್ಬುರರಳಿ ಲವಙ್ಗ ...{Loading}...

ತುಂಬುರರಳಿ ಲವಂಗ ಪಾದರಿ
ನಿಂಬೆ ಚೂತ ಪಲಾಶ ಪನಸಸು
ಜಂಬು ಗುಗ್ಗುಳಶೋಕ ವಟ ಪುನ್ನಾಗ ಚಂಪಕದ
ಕುಂಭಿನಿಯೊಳುಳ್ಳಖಿಲ ವೃಕ್ಷಕ
ದಂಬದಲಿ ವನ ಮೆರೆದುದದನೇ
ನೆಂಬೆನೀ ಪರಿವಾರ ತುಂಬಿತು ಲಲಿತ ನಂದನದ ॥3॥

೦೦೪ ತಿಳಿಗೊಳನ ಮಧ್ಯದಲಿ ...{Loading}...

ತಿಳಿಗೊಳನ ಮಧ್ಯದಲಿ ಮೆರೆದಿಹ
ನಳಿನ ನೃಪನಿದಿರಿನಲಿ ಮಧುಪಾ
ವಳಿ ರವದ ಗಾಯಕರ ಪಿಕಪಾಠಕರ ನೃತ್ಯಗಳ
ಲಲಿತ ನವಿಲಿನ ವಾದ್ಯಗಳ ಘುಳು
ಘುಳಿಪ ಕೊಳರ್ವಕ್ಕಿಗಳ ಲಕ್ಷ್ಮೀ
ಲಲನೆಯರಮನೆಯೆನಲು ಮೆರೆದುದು ಭೂಪ ಕೇಳ್ ಎಂದ ॥4॥

೦೦೫ ಬನ್ದು ಭೂಪತಿ ...{Loading}...

ಬಂದು ಭೂಪತಿ ಕೊಳನ ತೀರದೆ
ನಿಂದು ತಮಗಾಶ್ರಮದ ಠಾವಹು
ದೆಂದು ಭೀಮಂಗರುಹಲಾ ಕ್ಷಣವಾತನೈತಂದು
ತಂದು ತಳಿರನು ಪರ್ಣಶಾಲೆಗ
ಳಂದದಲಿ ರಚಿಸಿದನು ಭೂಸುರ
ವೃಂದ ಬಿಟ್ಟುದು ಧರ್ಮಪುತ್ರನ ಸುತ್ತುವಳಯದಲಿ ॥5॥

೦೦೬ ದಿನಪನಪರಾಮ್ಬುಧಿಯನೈದಲು ವನಜ ...{Loading}...

ದಿನಪನಪರಾಂಬುಧಿಯನೈದಲು
ವನಜ ಮುಗಿದವು ಚಕ್ರವಾಕದ
ಮನಕೆ ಖತಿ ಕುಮುದಿನಿಗೆ ಮುದ ಯಾಮಿನಿಗೆ ಸುಮ್ಮಾನ
ಕನಕಮಯವರ ರಥವನಡರಿದು
ದನುಜರನು ಸಂಹರಿಸೆ ಕಮಲಿನಿ
ಮನದೊಳುತ್ಸಾಹಿಸಲು ರವಿಯುದಯಾಚಲಕೆ ಬಂದ ॥6॥

೦೦೭ ಋಷಿಗಳೊಳು ಮೇಳವು ...{Loading}...

ಋಷಿಗಳೊಳು ಮೇಳವು ವರಾಸನ
ಮೆಸೆವ ಬನದೊಳು ಬಳಿಕ ಗಂಗಾ
ಪ್ರಸರದಲ್ಲಿ ಸ್ನಾನ ಭೋಜನ ಕಾಲದಲಿ ಪಾನ
ಮಿಸುಪ ಸುತಿಯ ವಿಲಾಸಗಳ ಸಂ
ತಸದಿ ಕೇಳ್ವ ಸಮಾಸಪೂರಿತ
ವಸುಮತೀಧರ ಯಮಜನೆಸೆದನು ಭೂಪ ಕೇಳ್ ಎಂದ ॥7॥

೦೦೮ ಇರುತಿರಲು ಕಲಿಭೀಮ ...{Loading}...

ಇರುತಿರಲು ಕಲಿಭೀಮ ಮೃಗಯಾ
ತುರದಲಖಿಳ ಕಿರಾತರುಗಳೊಡ
ವೆರಸಿ ಹೊಕ್ಕನು ಗಿರಿತರುವ್ರಜ ಬಹಳ ಕಾನನವ
ವರಹ ಮರೆ ಸಾರಂಗ ಪೆರ್ಬುಲಿ
ಕರಡಿ ವೃಕ ಶಾರ್ದೂಲ ಕೇಸರಿ
ಕರಿ ಕಳಭವೋಡಿದವು ದೆಸೆದೆಸೆಗೈದಿ ತಲ್ಲಣಿಸಿ ॥8॥

೦೦೯ ಹಾಸಗಳವಿಡಿದೆಳೆವ ನಾಯ್ಗಳ ...{Loading}...

ಹಾಸಗಳವಿಡಿದೆಳೆವ ನಾಯ್ಗಳ
ಬೀಸುವಲೆಗಳ ಕಾಲಗಣ್ಣಿಯ
ಸೂಸುವಲೆಗಳ ಧನು ಸರಳ ಭಾಸುರದ ಕುಪ್ಪಸದ
ಕೇಶದಲಿ ತಳಿರುಗಳ ಬಿಗಿದು ವಿ
ಳಾಸದಲಿ ಹೊರವಂಟು ಹೆಬ್ಬಲೆ
ಬೀಸಿದರು ಬೇಂಟೆಗರು ಬಹಳ ಮೃಗಂಗಳನು ಕೆಡಹಿ ॥9॥

೦೧೦ ಕೊಡಹಿ ಬಿಸುಟನು ...{Loading}...

ಕೊಡಹಿ ಬಿಸುಟನು ಕೇಸರಿಯ ಕಾ
ಲ್ವಿಡಿದು ಸೀಳಿದ ಕರಿಗಳನು ಬೆಂ
ಬಿಡದೆ ಹಿಡಿದಪ್ಪಳಿಸಿದನು ಶಾರ್ದೂಲ ಹೆಬ್ಬುಲಿಯ
ಅಡಗೆಡಹಿ ಪೇರ್ಮರಿ ವರಾಹನ
ಮಡದಲುರೆ ಘಟ್ಟಿಸಿ ವಿನೋದದಿ
ನಡೆಯೆ ಧರೆ ಕಂಪಿಸಿತು ಭೀಮನ ಪದದ ಘಲ್ಲಣೆಗೆ ॥10॥

೦೧೧ ಬನ್ದನತಿ ಬೇಣ್ಟೆಯಲೆ ...{Loading}...

ಬಂದನತಿ ಬೇಂಟೆಯಲೆ ಚರಿಸುತ
ನಿಂದು ಹತವಾದಖಿಳ ಮೃಗಗಳ
ನಂದು ವ್ಯಾಧರ ನಿಕರಕಿತ್ತನು ಪವನಜಾತ್ಮಜನು
ತಂದರವದಿರು ತವತವಗೆ ಪರಿ
ತಂದು ತರು ಶಿಖಿಯಿಂದ ದಹಿಸಿದ
ರಂದು ಮಾಂಸವನೊಲಿದು ಭಕ್ಷಿಸಿದರು ವಿನೋದದಲಿ ॥11॥

೦೧೨ ಮುನ್ದೆ ಕಣ್ಡನು ...{Loading}...

ಮುಂದೆ ಕಂಡನು ದೂರದಲ್ಲಿಹ
ನಂದನದ ಮೆಳೆ ತರು ನಿಕಾಯದ
ಸಂದಣಿಯ ಪೂಗೊಂಚಲಿನ ಪಲ್ಲವ ನಿಕಾಯದಲಿ
ಗೊಂದಣದ ತರು ಮಧ್ಯದಲ್ಲಿಹು
ದೊಂದು ಜಂಬೂವೃಕ್ಷ ಮೆರೆದಿರೆ
ನಿಂದು ನೋಡಿದು ಭೀಮ ವಿಸ್ಮಯಗೊಂಡನಾ ಕ್ಷಣಕೆ ॥12॥

೦೧೩ ಇದು ವಿಚಿತ್ರದ ...{Loading}...

ಇದು ವಿಚಿತ್ರದ ಫಲವು ತಾನೊಂ
ದಿದೆ ಮತಂಗಜ ಗಾತ್ರದಲಿ ತಾ
ನಿದನು ಕೊಂಡೊಯ್ವೆನು ಮಹೀಪಾಲಕನ ದರುಶನಕೆ
ಗದೆಯ ಕಕ್ಷದಲೌಕಿ ಮಾರುತಿ
ಮಧುರಿಪುವ ನೆನೆವುತ್ತಲಾನಂ
ದದಲಿ ವೃಕ್ಷವನಡರಿ ಕೊಯ್ದಿಳುಹಿದನು ನಿಮಿಷದಲಿ ॥13॥

೦೧೪ ಫಲವ ಕೊಣ್ಡಾ ...{Loading}...

ಫಲವ ಕೊಂಡಾ ಭೀಮ ಬೇಗದಿ
ನಲವಿನಲಿ ನಡೆತಂದು ಭೂಪನ
ನಿಳಯದಲಿ ತಂದಿಳುಹಿದರೆ ಯಮಸೂನು ಬೆರಗಾಗಿ
ಕೆಲದಲಿದ್ದನುಜರಿರ ಋಷಿ ಜನ
ಗಳಿರ ನೋಡಿರೆಯೆನಲು ಶಿವಶಿವ
ನಳಿನನಾಭನೆ ಬಲ್ಲನೆಂದರು ಸಕಲ ಋಷಿವರರು ॥14॥

೦೧೫ ಎನಲು ಸಹದೇವನ ...{Loading}...

ಎನಲು ಸಹದೇವನ ಯುಧಿಷ್ಠಿರ
ಜನಪ ಬೆಸಗೊಳುತಿರಲು ಬಿನ್ನಹ
ದನುಜರಿಪು ಹರ ಕಮಲಭವರಿಗೆ ಕೊಡುವ ಶಾಪವನು
ಅನುವ ಕಾಣೆನು ಕಣ್ವಮುನಿ ತಾ
ಮುನಿದನಾದರೆ ಶಪಿಸುವನು ಯೆಂ
ದನು ತ್ರಿಕಾಲಜ್ಞಾನಿ ಮಾದ್ರೀಸುತನು ಭೂಪತಿಗೆ ॥15॥

೦೧೬ ವರುಷಕೊನ್ದೇ ಫಲವಹುದು ...{Loading}...

ವರುಷಕೊಂದೇ ಫಲವಹುದು ಅದ
ನರಿತು ಯೋಗಧ್ಯಾನದಲಿ ಕಂ
ದೆರೆದು ಕರ ಸಂಪುಟವನರಳಿಚಲಾಗಲಾ ಫಲವು
ಇರದೆ ಹಸ್ತದೊಳಿಳಿಯಲಾ ಮುನಿ
ಹರುಷದಿಂದದ ತಳೆದು ಕೊಂಬನು
ಪರಶಿವಧ್ಯಾನೈಕ ದೃಷ್ಟಿಯೊಳಿಪ್ಪನಾ ಮುನಿಪ ॥16॥

೦೧೭ ಕನ್ದೆರೆದು ಮುನಿ ...{Loading}...

ಕಂದೆರೆದು ಮುನಿ ನೋಡಿದೊಡೆ ತಮ
ಗಿಂದು ಹರುವಹುದೆನುತ ಧರ್ಮಜ
ನೊಂದು ಫಲುಗುಣ ಭೀಮ ಸಹದೇವಾದಿಗಳು ಸಹಿತ
ಬಂದನತಿ ವೇಗದಲಿ ಪವನಜ
ನಂದು ವೃಕ್ಷವ ತೋರಿಸಿದನೇ
ನೆಂದು ಬಣ್ಣಿಪೆ ಬಹಳ ಕೊನೆಗಳ ಗಗನ ಚುಂಬಿತವ ॥17॥

೦೧೮ ಕಣ್ಡು ಯಮಸುತನತಿ ...{Loading}...

ಕಂಡು ಯಮಸುತನತಿ ಭಯದಿನಿದ
ಖಂಡಪರಶುವೆ ಬಲ್ಲ ನಾವ್ ಮುಂ
ಕೊಂಡು ಮಾಡಿದ ದುಷ್ಕೃತದ ಫಲವೆನುತ ಬಿಸುಸುಯ್ದ
ಚಂಡವಿಕ್ರಮ ಭೀಮನದ ಕೈ
ಕೊಂಡು ತಾನವಿವೇಕದಲಿಯು
ದ್ದಂಡತನದಿಂ ತಂದ ಹತ್ತಿಸಲರಿದು ನಮಗೆಂದ ॥18॥

೦೧೯ ಹೇಳಿರೈ ಭೂಸುರರು ...{Loading}...

ಹೇಳಿರೈ ಭೂಸುರರು ಋಷಿಗಳು
ಮೇಲೆ ಹತ್ತುವುಪಾಯವನು ಋಷಿ
ಜಾಲದೊಳಗೆಂದೆನಲು ನುಡಿದನು ಧೌಮ್ಯ ನಸುನಗುತ
ಹೇಳಲರಿದಿದ ನಿಮ್ಮ ಸಲಹುವ
ಬಾಲಕೇಳಿಯ ಕೃಷ್ಣ ಬಲ್ಲನು
ಕಾಲವನು ನೂಕದೆ ಮಹಾತ್ಮನ ಭಜಿಸು ನೀನೆಂದ ॥19॥

೦೨೦ ಎನಲು ಭೂಪತಿ ...{Loading}...

ಎನಲು ಭೂಪತಿ ಕೃಷ್ಣ ರಕ್ಷಿಸು
ದನುಜರಿಪು ಗೋವಿಂದ ರಕ್ಷಿಸು
ವನಜನಾಭ ಮುಕುಂದ ರಕ್ಷಿಸು ರಾವಣಾಂತಕನೆ
ಮನಸಿಜನ ಪಿತ ರಾಮ ರಕ್ಷಿಸು
ಘನಮಹಿಮ ಕೇಶವನೆ ರಕ್ಷಿಸು
ನೆನೆವ ಭಕ್ತರ ಭಾಗ್ಯನಿಧಿ ಮಾಧವನೆ ರಕ್ಷಿಪುದು ॥20॥

೦೨೧ ಎನ್ದು ಭಜಿಸುತ್ತಿರಲು ...{Loading}...

ಎಂದು ಭಜಿಸುತ್ತಿರಲು ನೃಪ ಗೋ
ವಿಂದನಮಳಜ್ಞಾನದಲಿ ಸಾ
ನಂದದಿಂದಲೆ ಸತ್ಯಭಾಮಾದೇವಿಯರ ಕೂಡೆ
ಮಂದಮತಿ ಪವಮಾನಜನ ಕತ
ದಿಂದ ಪಾಂಡುಕುಮಾರರಿಗೆ ಕೇ
ಡಿಂದು ಬಹುದಾ ಋಷಿಯ ಶಾಪದಿ ಶಿವಶಿವಾಯೆಂದ ॥21॥

೦೨೨ ಎನುತ ಸಿಂಹಾಸನವನಿಳಿದಾ ...{Loading}...

ಎನುತ ಸಿಂಹಾಸನವನಿಳಿದಾ
ದನುಜರಿಪು ಕಮಲಾಕ್ಷಿ ನೀ ನಿ
ಲ್ಲೆನುತ ಮನವೇಗದಲಿ ಬಂದನು ಧರ್ಮಜನ ಹೊರೆಗೆ
ನೆನೆಯೆ ಲಕ್ಷ್ಮೀಕಾಂತ ಬಂದನು
ಘನ ದುರಿತದಾವಾಗ್ನಿ ಬಂದನು
ಯೆನುತ ಮೈಯಿಕ್ಕಿದನು ಮುನಿಜನ ಸಹಿತ ಯಮಸೂನು ॥22॥

೦೨೩ ತೆಗೆದು ತಕ್ಕೈಸಿದನು ...{Loading}...

ತೆಗೆದು ತಕ್ಕೈಸಿದನು ಭೂಪನ
ಮಿಗೆ ಹರುಷದಲಿ ಭೀಮ ಪಾರ್ಥರ
ನೆಗಹಿ ಮೈದಡವಿದನು ಮಾದ್ರೀಸುತರ ದ್ರೌಪದಿಯ
ನಗುತ ಋಷಿಜನ ವಿಪ್ರ ಧೌಮ್ಯಾ
ದಿಗಳನುಚಿತೋಕ್ತಿಯಲಿ ಮನ್ನಿಸು
ತಗಧರನು ನೋಡಿದನು ಜಂಬೂಫಲದ ಘನತರುವ ॥23॥

೦೨೪ ಕಾಳು ಮಾಡಿದಿರಕಮ್ಕಟ ...{Loading}...

ಕಾಳು ಮಾಡಿದಿರಕmಕಟ ನೀವ್
ಮೇಲನರಿಯದೆ ಋಷಿಯ ಶಾಪವ
ನಾಲಿಸದೆ ವರ ಮೂರ್ಖತನದಲೆ ನೆನೆದಿರನುಚಿತವ
ಏಳಿ ಫಲವನು ತೊಟ್ಟ ಸರಿಸಕೆ
ಕಾಲದಲಿ ತಂದಿರಿಸಿ ನಿಮ್ಮನು
ಕೂಲ ಧರ್ಮಂಗಳನು ಬೇಗದಿ ಹೇಳಿ ನೀವೆಂದ ॥24॥

೦೨೫ ಎನಲು ತನ್ದಿರಿಸಿದರು ...{Loading}...

ಎನಲು ತಂದಿರಿಸಿದರು ಫಲವನು
ವನಜನಾಭನ ಹೇಳಿಕೆಯಲಾ
ಕ್ಷಣಕೆ ಕುಂತೀತನುಜ ಹೇಳೆನೆ ಕೈಗಳನು ಮುಗಿದು
ಇನ ಶಶಿಗಳಿಂದ್ರಾನಲಾಂತಕ
ದನುಜ ವರುಣ ಸಮೀರ ಹರಸಖ
ಮನುಮಥಾರಿಯೆ ನೀವು ಚಿತ್ತವಿಸೆನುತಲಿಂತೆಂದ ॥25॥

೦೨೬ ಪರಸತಿಯೆ ನಿಜಜನನಿ ...{Loading}...

                                       ಪರಸತಿಯೆ ನಿಜಜನನಿ ಪರ ಧನ  

ವಿರದೆ ಲೋಷ್ಠವು ಜೀವರಾಶಿಯ
ಪರರ ನೋವನು ತನ್ನ ನೋವೆಂದೆನುತ ಭಾವಿಸುವೆ
ನಿರುತವೆನೆ ಫಲ ಧರೆಯ ಬಿಟ್ಟಂ
ತರದೊಳೊಮ್ಮೊಳ ನೆಗೆಯೆ ಮುರಹರ
ಮರುತಸುತ ಬಾರೆನಲು ನುಡಿದನು ಮುಗಿದು ಕರಯುಗವ ॥26॥

೦೨೭ ಜೀವವೀ ಕ್ಷಣವಳಿದು ...{Loading}...

ಜೀವವೀ ಕ್ಷಣವಳಿದು ಹೋಗಲಿ
ಕಾವುದಭಿಮಾನವನು ನಿತ್ಯದ
ಭಾವವಾಗಿಹುದಾತ್ಮವಾಚಂದ್ರಾರ್ಕವಭಿಮಾನ
ನಾವು ಬೇರೊಂದರಿಯೆವಿದ್ದುದ
ದೇವರಿಗೆ ಬಿನ್ನವಿಸಿದೆವುಯೆನ
ಲಾವ ಬೇಗದಲಡರಿದುದೊ ಫಲವರಸ ಕೇಳ್ ಎಂದ ॥27॥

೦೨೮ ಏನು ನಿನ್ನಭಿಮತವು ...{Loading}...

ಏನು ನಿನ್ನಭಿಮತವು ಪಾರ್ಥ ನಿ
ಧಾನವನು ನುಡಿಯೆನಲು ಹೇಳುವೆ
ಮಾನನಿಧಿ ನಿಮಗರುಹುವೆನು ಚಿತ್ತವಿಸಿ ನೀವೆನುತ
ಧ್ಯಾನದಲಿ ಕೈಮುಗಿದು ಶಂಕರ
ನೀನೆ ಗತಿಯೆಂದೆನುತಲಾ ಶಶಿ
ಭಾನು ದಿಗುಪಾಲರಿಗೆ ನಮಿಸುತ ಕೇಳಿ ನೀವೆಂದ ॥28॥

೦೨೯ ಪರಗೃಹದ ಭೋಜನಕೆ ...{Loading}...

ಪರಗೃಹದ ಭೋಜನಕೆ ವಿಪ್ರರು
ಪರಿಣಮಿಸುವೋಲ್ ಪಶು ಸಮೂಹವು
ಇರದೆ ನವತೃಣದಿಂದ ತುಷ್ಟಿಯನೈದುವಂದದಲಿ
ವರಸತಿಯು ನಿಜಪತಿಯ ಕಂಡಾ
ಹರುಷವಹುದೆನಗಾಹವದಲೆಲೆ
ಹರಿಯೆಯೆನೆ ಬೇಗದಲಿ ಫಲವಡರಿತ್ತು ನಿಮಿಷದಲಿ ॥29॥

೦೩೦ ಧರ್ಮವನು ನೆರೆ ...{Loading}...

ಧರ್ಮವನು ನೆರೆ ಜಯಿಸಲರಿಯದ
ಧರ್ಮ ಸತ್ಯವ ಮೀರಲರಿವುದೆ
ನಿರ್ಮಳದ ಸೈರಣೆಯ ಗೆಲುವುದೆ ಕ್ರೋಧ ಭಾವಿಸಲು
ಕರ್ಮಹರ ಕೃಷ್ಣನನು ಗೆಲುವರೆ
ದುರ್ಮತಿಗಳಹ ಅಸುರರೆನಲಾ
ಧರ್ಮತತ್ವವ ನಕುಲ ವಿರಚಿಸಲೈದಿತಾ ಫಲವು ॥30॥

೦೩೧ ಸತ್ಯವೇ ನಿಜಮಾತೆ ...{Loading}...

ಸತ್ಯವೇ ನಿಜಮಾತೆ ಜ್ಞಾನವೆ
ನಿತ್ಯವಹ ಪಿತ ಧರ್ಮವನುಜನು
ಮತ್ತೆ ದಯವೇ ಮಿತ್ರ ಶಾಂತಿಯೆ ಪತ್ನಿ ಕ್ಷಮೆ ಸೂನು
ಸತ್ಯವನು ಸಹದೇವ ನುಡಿಯಲಿ
ಕತ್ಯಧಿಕಫಲ ಮೇಲೆ ಚಿಗಿಯಲು
ಮತ್ತೆ ಮುರರಿಪು ದ್ರುಪದಸುತೆ ಬಾಯೆಂದನುಚಿತದಲಿ ॥31॥

೦೩೨ ಭಾವವಹ ಪುರುಷರನು ...{Loading}...

ಭಾವವಹ ಪುರುಷರನು ಕಾಣುತ
ಭಾವಿಸಲು ಪಿತ ಸುತರ ಅನುಜರ
ಠಾವಿನಲಿಯಾದರೆಯು ಯೋನಿದ್ರ್ರವಣ ಸತಿಯರಿಗೆ
ಭಾವದಲಿ ಮರೆವಿಡಿದು ನುಡಿಯಲಿ
ಕಾ ವಿಗಡ ಫಲವಡರದಿರುತಿರೆ
ದೇವ ನುಡಿದನು ವಂಚಿಸದೆ ನಿಶ್ಚಯವ ಹೇಳೆಂದ ॥32॥

೦೩೩ ಪತಿಗಳೀಶ್ವರನಾಜ್ಞೆಯಿನ್ದವೆ ...{Loading}...

ಪತಿಗಳೀಶ್ವರನಾಜ್ಞೆಯಿಂದವೆ
ಯತಿಶಯದಲೈವರು ಮನಸ್ಸಿನ
ಮತದಲಾರಾಗಿಹುದು ಬೇರೊಂದಿಲ್ಲ ಚಿತ್ತದಲಿ
ಪೃಥಿವಿಯಲಿ ಪರಪುರುಷರನು ದು
ರ್ಮತಿಯಲೊಡಬಡುವವಳು ಸತಿಯೇ
ಸತತ ಕರುಣಾಕರಯೆನಲು ಫಲ ಠಾವನಡರಿದುದು ॥33॥

೦೩೪ ಹರುಷ ಮಿಗೆ ...{Loading}...

ಹರುಷ ಮಿಗೆ ಋಷಿಜನಕೆ ಧೌಮ್ಯನು
ಕರಗಳನು ನೆಗಹುತ ಯುಧಿಷ್ಠಿರ
ಧರಣಿಪತಿ ಕೇಳ್ ಕೃಷ್ಣನಿರೆ ನಿನಗಾವುದರಿದೆಂದು
ಇರದೆ ದೇವನ ಪಾದ ಪಂಕಜ
ಕೆರಗಿದುದು ಮುನಿ ನಿಕರ ಬುಧಜನ
ನಿರತ ಪರಮಾನಂದದಿಂದೈದಿದರು ತದ್ವನವ ॥34॥

೦೩೫ ಮುನಿಪ ಕಣ್ವನು ...{Loading}...

ಮುನಿಪ ಕಣ್ವನು ಕಣ್ದೆರೆದು ಪರ
ಮನನು ಜಾನಿಸಿ ಕರವನರಳಿಚ
ಲೊನದು ಬಿದ್ದುದು ಪಣ್ಣು ಕಂಡನು ನಗುತ ಮನದೊಳಗೆ
ವನಜನಾಭನ ತಂತ್ರವಿದು ಪಾ
ವನ ಸುರೂಪನ ನೋಳ್ಪೆನೆಂದಾ
ಮುನಿಪ ಫಲಸಹ ಬಂದು ಕಂಡನು ಕೃಷ್ಣ ಪಾಂಡವರ ॥35॥

೦೩೬ ಇದಿರೊಳಿರಿಸಿದನಾ ಫಲವ ...{Loading}...

ಇದಿರೊಳಿರಿಸಿದನಾ ಫಲವ ಸಂ
ಮುದದಿ ಹೊಂಪುಳಿಯೋಗಿ ಮುನಿಯಾ
ಪದುಮನಭಂಗೆರಗಿ ತೆಗಿ ನೀ ಫಲವನೆಂದೆನಲು
ಮದನಪಿತ ನಸುನಗುತ ಮುನಿಪನ
ಹದುಳ ಮಿಗೆ ಸೈಪಿಟ್ಟು ನೆಗಹಿದ
ನುದಿತ ಫಲವನು ಹಂಚ ಹೇಳಿದನಾ ನೃಪಾಲಂಗೆ ॥36॥

೦೩೭ ಬರಿಸಿ ಋಷಿಗಳನವರವರ ...{Loading}...

ಬರಿಸಿ ಋಷಿಗಳನವರವರ ತರ
ವರಿದು ಕೊಡಿಸಿದನುಳಿದುದನು ಭೂ
ಸುರ ಸಹೋದರರಿಂಗೆ ಮುನಿಸತಿಯರಿಗೆ ದ್ರೌಪದಿಗೆ
ಮುರಹರಗೆ ತನ್ಮುನಿಪ ಕಣ್ವಂ
ಗಿರಿಸಿ ಕೈವೀಸಿದೊಡೆ ಫಲವನು
ಹರುಷ ಮಿಗೆ ಭುಂಜಿಸಿತು ಭೂಪತಿ ಕೇಳು ಕೌತುಕವ ॥37॥

೦೩೮ ಪಾರಣೆಯನುರೆ ಮಾಡಿ ...{Loading}...

ಪಾರಣೆಯನುರೆ ಮಾಡಿ ಮುನಿಪ ಮ
ಹೀರಮಣನನು ಬೀಳುಕೊಟ್ಟನು
ದಾರ ಲಕ್ಷ್ಮೀಕಾಂತನನು ಬೀಳ್ಕೊಂಡು ಮತ್ತೊಂದು
ಸಾರವಹ ಸುಸ್ಥಾನಕೈದಿದ
ನಾರು ಭಾವಿಸಬಲ್ಲರಾ ಮುರ
ವೈರಿಯನುಪಮ ಮಹಿಮೆಗಳ ಭೂಪಾಲ ಕೇಳ್ ಎಂದ ॥38॥

೦೩೯ ದೇವ ನಿಮ್ಮಡಿಯಙ್ಘ್ರಿ ...{Loading}...

ದೇವ ನಿಮ್ಮಡಿಯಂಘ್ರಿ ಕಮಲವ
ನಾವ ನೆನೆವನವಂಗೆ ಜಪತಪ
ಸಾವು ಹುಟ್ಟಿಲ್ಲೆಂಬುದೈ ವರ ವೇದಶಾಸ್ತ್ರಗಳು
ನಾವಲೇ ಕೃತಕೃತ್ಯರಿಂದೀ
ದೇವ ಸಾಕ್ಷಾತ್ಕಾರ ದರ್ಶನ
ಭಾವವೋಯಿದು ನಮಗೆನುತ ಹೊಗಳಿದನು ಸಹದೇವ ॥39॥

೦೪೦ ಹರಿಯೊಲಿದು ಮೈದಡವಿಯೈವರ ...{Loading}...

ಹರಿಯೊಲಿದು ಮೈದಡವಿಯೈವರ
ತರುಣಿಯನು ಸಂತೈಸಿಯಾ ಮುನಿ
ವರರನುಪಚರಿಸಿದನು ಬುದ್ಧಿಯನೊರೆದು ಧರ್ಮಜಗೆ
ಉರುತರೋತ್ತರ ಸಿದ್ಧಿ ನಿಮಗಿ
ನ್ನಿರದೆ ಫಲಿಸುವದೆಂದು ಸೂಚಿಸಿ
ಮರಳಿ ತನ್ನಯ ಪುರಿಗೆ ಗಮನೋದ್ಯೋಗ ಮನನಾದ ॥40॥

೦೪೧ ಬನ್ದನಾ ಭೂಪತಿ ...{Loading}...

ಬಂದನಾ ಭೂಪತಿ ಮುರಾಂತಕ
ನಂದಣದ ಬಲ ದೆಸೆಯಲನಿಲಜ
ಮುಂದೆ ವಾಮದಿ ಪಾರ್ಥ ಯಮಳ ದ್ರೌಪದಾದೇವಿ
ಹಿಂದೆ ಬರೆ ಕಿರಿದೆಡೆಯಲಲ್ಲಿಯೆ
ನಿಂದು ಕಳುಹಿದನೆಲ್ಲರನು ಗೋ
ವಿಂದನೇರಿದ ರಥವ ಗದುಗಿನ ವೀರನಾರಯಣ ॥41॥

+೦೩ ...{Loading}...