೧೦

೦೦೦ ಸೂ ಸೆಣಸುವದಟರ ...{Loading}...

ಸೂ. ಸೆಣಸುವದಟರ ಗಂಡ ಸಮರಾಂ
ಗಣ ಕಮಲ ಭೇರುಂಡನಾ ದಿನ
ಮಣಿಯ ಮಗನುದ್ದಂಡ ಕರ್ಣನ ಕಂಡಳಾ ಕುಂತಿ

೦೦೧ ಒಲಿದವರನುಜ್ಜೀವಿಸುವ ಬಗೆ ...{Loading}...

ಒಲಿದವರನುಜ್ಜೀವಿಸುವ ಬಗೆ
ಬಲುಹು ಮುರಮಥನಂಗೆ ಮುನಿದೊಡೆ
ತಲೆಯ ಬರೆಹವ ತೊಡೆವನಲ್ಲದೆ ಬಳಿಕ ಸೈರಿಸನು
ನಳಿನನಾಭನು ಭಜಕರಿಗೆ ಬೆಂ
ಬಳಿಯ ಬಿರುದನು ಭೇದದಲಿ ಕುರು
ಕುಲವ ಕೊಂದನು ಕೇಳು ಜನಮೇಜಯ ಮಹೀಪಾಲ ॥1॥

೦೦೨ ಇನತನೂಜನ ಕೂಡೆ ...{Loading}...

ಇನತನೂಜನ ಕೂಡೆ ಮೈದುನ
ತನದ ಸರಸವನೆಸಗಿ ರಥದೊಳು
ದನುಜರಿಪು ಬರಸೆಳೆದು ಕುಳ್ಳಿರಿಸಿದನು ಪೀಠದಲಿ
ಎನಗೆ ನಿಮ್ಮಡಿಗಳಲಿ ಸಮಸೇ
ವನೆಯೆ ದೇವ ಮುರಾರಿಯಂಜುವೆ
ನೆನಲು ತೊಡೆ ಸೋಂಕಿನಲಿ ಸಾರಿದು ಶೌರಿಯಿಂತೆಂದ ॥2॥

೦೦೩ ಭೇದವಿಲ್ಲೆಲೆ ಕರ್ಣ ...{Loading}...

ಭೇದವಿಲ್ಲೆಲೆ ಕರ್ಣ ನಿಮ್ಮೊಳು
ಯಾದವರು ಕೌರವರೊಳಗೆ ಸಂ
ವಾದಿಸುವಡನ್ವಯದ ಮೊದಲೆರಡಿಲ್ಲ ನಿನ್ನಾಣೆ
ಮೇದಿನೀಪತಿ ನೀನು ಚಿತ್ತದೊ
ಳಾದುದರಿವಿಲ್ಲೆನುತ ದಾನವ
ಸೂದನನು ರವಿಸುತನ ಕಿವಿಯಲಿ ಬಿತ್ತಿದನುಭಯವ ॥3॥

೦೦೪ ದಾನವಾನ್ತಕ ಬೆಸಸು ...{Loading}...

ದಾನವಾಂತಕ ಬೆಸಸು ವಂಶ ವಿ
ಹೀನನನು ನಿಮ್ಮಡಿಗಳೊಡನೆ ಸ
ಮಾನಿಸುವರೇ ಸಾಕೆನುತ ರವಿಸೂನು ಕೈಮುಗಿಯೆ
ಮಾನನಿಧಿ ನಿನ್ನಾಣೆ ಬಾರೈ
ನೀನು ನಮ್ಮೆಲ್ಲರ ಹವಣೆ ವರ
ಭಾನುವಂಶಲಲಾಮ ನೀ ರಾಮಂಗೆ ಸರಿಯೆಂದ ॥4॥

೦೦೫ ಕಳೆದುಕೊಣ್ಡನು ವೀಳೆಯವನಂ ...{Loading}...

ಕಳೆದುಕೊಂಡನು ವೀಳೆಯವನಂ
ಜುಳಿಯಲಾತಂಗಿತ್ತು ಕರ್ಣನ
ಕೆಲಕೆ ಬರಸೆಳೆದವನ ಕರದೊಳು ಕರತಳವನಿಕ್ಕಿ
ಎಲೆ ದಿವಾಕರತನಯ ನಿನ್ನಯ
ಕುಲವನರಿಯೆಯಲಾ ಸುಯೋಧನ
ನಲಿ ವೃಥಾ ಸೇವಕತನದಲಿಹುದುಚಿತವಲ್ಲೆಂದ ॥5॥

೦೦೬ ಲಲನೆ ಪಡೆದೀಯೈದು ...{Loading}...

ಲಲನೆ ಪಡೆದೀಯೈದು ಮಂತ್ರಂ
ಗಳಲಿ ಮೊದಲಿಗ ನೀನು ನಿನ್ನಯ
ಬಳಿ ಯುಧಿಷ್ಠಿರದೇವ ಮೂರನೆಯಾತ ಕಲಿಭೀಮ
ಫಲುಗುಣನು ನಾಲ್ಕನೆಯಲೈದನೆ
ಯಲಿ ನಕುಲ ಸಹದೇವರಾದರು
ಬಳಿಕ ಮಾದ್ರಿಯಲೊಂದು ಮಂತ್ರದೊಳಿಬ್ಬರುದಿಸಿದರು ॥6॥

೦೦೭ ಅದರಿನಾ ಪಾಣ್ಡವರಲೈವರ ...{Loading}...

ಅದರಿನಾ ಪಾಂಡವರಲೈವರ
ಮೊದಲಿಗನು ನೀನಿರಲು ಧರಣಿಯ
ಕದನವಿತ್ತಂಡಕ್ಕೆ ಕಾಮಿತವಲ್ಲ ಭಾವಿಸಲು
ಇದು ನಿಧಾನವು ಕರ್ಣ ನಿನ್ನ
ಭ್ಯುದಯವನೆ ಬಯಸುವೆನು ನಿನ್ನಯ
ಪದಕೆ ಕೆಡಹುವೆನೈವರನು ನಡೆ ತನ್ನ ಸಂಗಾತ ॥7॥

೦೦೮ ನಿನಗೆ ಹಸ್ತಿನಪುರದ ...{Loading}...

ನಿನಗೆ ಹಸ್ತಿನಪುರದ ರಾಜ್ಯದ
ಘನತೆಯನು ಮಾಡುವೆನು ಪಾಂಡವ
ಜನಪ ಕೌರವ ಜನಪರೋಲೈಸುವರು ಗದ್ದುಗೆಯ
ನಿನಗೆ ಕಿಂಕರವೆರಡು ಸಂತತಿ
ಯೆನಿಸಲೊಲ್ಲದೆ ನೀನು ದುರಿಯೋ
ಧನನ ಬಾಯ್ದಂಬುಲಕೆ ಕೈಯಾನುವರೆ ಹೇಳೆಂದ ॥8॥

೦೦೯ ಎಡದ ಮೈಯಲಿ ...{Loading}...

ಎಡದ ಮೈಯಲಿ ಕೌರವೇಂದ್ರರ
ಗಡಣ ಬಲದಲಿ ಪಾಂಡು ತನಯರ
ಗಡಣವಿದಿರಲಿ ಮಾದ್ರ ಮಾಗಧ ಯಾದವಾದಿಗಳು
ನಡುವೆ ನೀನೋಲಗದೊಳೊಪ್ಪುವ
ಕಡು ವಿಲಾಸನ ಬಿಸುಟು ಕುರುಪತಿ
ನುಡಿಸೆ ಜೀಯ ಹಸಾದವೆಂಬುದು ಕಷ್ಟ ನಿನಗೆಂದ ॥9॥

೦೧೦ ಶೌರಿಯದಲಿದಿರಿಲ್ಲ ಕುಲದಲಿ ...{Loading}...

ಶೌರಿಯದಲಿದಿರಿಲ್ಲ ಕುಲದಲಿ
ಸೂರಿಯನ ಮಗನೊಡನೆ ಹುಟ್ಟಿದ
ವೀರರೈವರು ಪಾಂಡುತನಯರು ನಿನ್ನ ವೈಭವಕೆ
ಆರು ಸರಿಯೈ ಕರ್ಣ ನಡೆ ನಡೆ
ಧಾರುಣೀಪತಿಯಾಗು ನೀನಿರೆ
ವೈರವಿತ್ತಂಡಕ್ಕೆ ಬಳಿಕಿಲ್ಲೆಂದನಸುರಾರಿ ॥10॥

೦೧೧ ಕೊರಳ ಸೆರೆ ...{Loading}...

ಕೊರಳ ಸೆರೆ ಹಿಗ್ಗಿದವು ದೃಗುಜಲ
ಉರವಣಿಸಿ ಕಡು ನೊಂದನಕಟಾ
ಕುರುಪತಿಗೆ ಕೇಡಾದುದೆಂದನು ತನ್ನ ಮನದೊಳಗೆ
ಹರಿಯ ಹಗೆ ಹೊಗೆದೋರದುರುಹದೆ
ಬರಿದೆ ಹೋಹುದೆ ತನ್ನ ವಂಶವ
ನರುಹಿ ಕೊಂದನು ಹಲವು ಮಾತೇನೆಂದು ಚಿಂತಿಸಿದ ॥11॥

೦೧೨ ಕಾದಿ ಕೊಲುವೊಡೆ ...{Loading}...

ಕಾದಿ ಕೊಲುವೊಡೆ ಪಾಂಡುಸುತರು ಸ
ಹೋದರರು ಕೊಲಲಿಲ್ಲ ಕೊಲ್ಲದೆ
ಕಾದೆನಾದೊಡೆ ಕೌರವಂಗವನಿಯಲಿ ಹೊಗಲಿಲ್ಲ
ಭೇದದಲಿ ಹೊಕ್ಕಿರಿದನೋ ಮಧು
ಸೂದನಕಟಕಟೆನುತ ಘನ ಚಿಂ
ತೋದಧಿಯಲದ್ದವೊಲು ಮೌನದೊಳಿದ್ದನಾ ಕರ್ಣ ॥12॥

೦೧೩ ಏನು ಹೇಳೈ ...{Loading}...

ಏನು ಹೇಳೈ ಕರ್ಣ ಚಿತ್ತ
ಗ್ಲಾನಿ ಯಾವುದು ಮನಕೆ ಕುಂತೀ
ಸೂನುಗಳ ಬೆಸಕೈಸಿ ಕೊಂಬುದು ಸೇರದೇ ನಿನಗೆ
ಹಾನಿಯಿಲ್ಲೆನ್ನಾಣೆ ನುಡಿ ನುಡಿ
ಮೌನವೇತಕೆ ಮರುಳುತನ ಬೇ
ಡಾನು ನಿನ್ನಪದೆಸೆಯ ಬಯಸುವನಲ್ಲ ಕೇಳ್ ಎಂದ ॥13॥

೦೧೪ ಮರುಳು ಮಾಧವ ...{Loading}...

ಮರುಳು ಮಾಧವ ಮಹಿಯ ರಾಜ್ಯದ
ಸಿರಿಗೆ ಸೋಲುವನಲ್ಲ ಕೌಂತೇ
ಯರು ಸುಯೋಧನರೆನಗೆ ಬೆಸಕೈವಲ್ಲಿ ಮನವಿಲ್ಲ
ಹೊರೆದ ದಾತಾರಂಗೆ ಹಗೆವರ
ಶಿರವನರಿದೊಪ್ಪಿಸುವೆನೆಂಬೀ
ಭರದೊಳಿರ್ದೆನು ಕೌರವೇಂದ್ರನ ಕೊಂದೆ ನೀನೆಂದ ॥14॥

೦೧೫ ಒಡನೆ ಹುಟ್ಟಿದೆವೆಮ್ಬ ...{Loading}...

ಒಡನೆ ಹುಟ್ಟಿದೆವೆಂಬ ಕಥನವ
ನೆಡೆಗುಡದೆ ಬಣ್ಣಿಸಿದೆ ಪಾಂಡವ
ರಡಗ ಬಾಣಕೆ ಬಲಿಯನಿಕ್ಕುವ ಹದನ ಮಾಣಿಸಿದೆ
ನುಡಿದು ಫಲವೇನಿನ್ನು ಕೇಳೆ
ನ್ನೊಡೆಯನಾದಂತಹೆನು ಬಾರೆನು
ಪೊಡವಿಯಲಿ ನೀ ಹರಹಿಕೊಳು ನಿನ್ನವರ ನಿಲಿಸೆಂದ ॥15॥

೦೧೬ ವೀರ ಕೌರವರಾಯನೇ ...{Loading}...

ವೀರ ಕೌರವರಾಯನೇ ದಾ
ತಾರನಾತನ ಹಗೆಯೆ ಹಗೆ ಕೈ
ವಾರವೇ ಕೈವಾರವಾದಂತಹೆನು ಕುರುನೃಪತಿ
ಶೌರಿ ಕೇಳೈ ನಾಳೆ ಸಮರದ
ಸಾರದಲಿ ತೋರುವೆನು ನಿಜ ಭುಜ
ಶೌರಿಯದ ಸಂಪನ್ನತನವನು ಪಾಂಡುತನಯರಲಿ ॥16॥

೦೧೭ ಹಲವು ಮಾತೇನಖಿಳ ...{Loading}...

ಹಲವು ಮಾತೇನಖಿಳ ಜನಕೆ
ನ್ನುಳಿವು ಸೊಗಸದು ಕೌರವೇಶ್ವರ
ನೊಲುಮೆ ತಪ್ಪಿಸಿ ಭುವನದೊಳಗೆನಗಾಪ್ತ ಜನವಿಲ್ಲ
ಸಲಹಿದನು ಮನ್ನಣೆಯಲೆನಗ
ಗ್ಗಳಿಕೆಯಲ್ಲದೆ ಹೀನ ವೃತ್ತಿಯ
ಬಳಸಿ ನಡೆಸನು ಕೌರವೇಂದ್ರನನೆಂತು ಮರೆದಪೆನು ॥17॥

೦೧೮ ನೋಡಿ ದಣಿಯನು ...{Loading}...

ನೋಡಿ ದಣಿಯನು ಬಿರುದ ಹೊಗಳಿಸಿ
ಹಾಡಿ ದಣಿಯನು ನಿಚ್ಚಲುಚಿತವ
ಮಾಡಿ ತಣಿಯನು ಮಾನನಿಧಿಯನದೆಂತು ಮರೆದಪೆನು
ಕಾಡಲಾಗದು ಕೃಷ್ಣ ಖಾತಿಯ
ಮಾಡಲಾಗದು ಬಂದೆನಾದೊಡೆ
ರೂಢಿ ಮೆಚ್ಚದು ಕೌರವನ ಹಗೆ ಹರಿಬ ತನಗೆಂದ ॥18॥

೦೧೯ ಅರುಣಜಲದಾಜ್ಯದಲಿ ಬಮ್ಬಲು ...{Loading}...

ಅರುಣಜಲದಾಜ್ಯದಲಿ ಬಂಬಲು
ಗರುಳ ಚರುವಿನಲೆಲುವಿನೊಟ್ಟಿಲ
ಬೆರಳ ಸಮಿಧೆಯಲಡಗಿನಖಿಳಾಹುತಿಯ ರಚನೆಯಲಿ
ನರಕಪಾಲದ ಪಾತ್ರೆಗಳ ತಿಲ
ದೊರಳೆಗಳ ಕೇಶೌಘದರ್ಭಾಂ
ಕುರದಲಾಹವ ಯಜ್ಞ ದೀಕ್ಷಿತನಹೆನು ತಾನೆಂದ ॥19॥

೦೨೦ ಮಾರಿಗೌತಣವಾಯ್ತು ನಾಳಿನ ...{Loading}...

ಮಾರಿಗೌತಣವಾಯ್ತು ನಾಳಿನ
ಭಾರತವು ಚತುರಂಗ ಬಲದಲಿ
ಕೌರವನ ರುಣ ಹಿಂಗೆ ರಣದಲಿ ಸುಭಟ ಕೋಟಿಯನು
ತೀರಿಸಿಯೆ ಪತಿಯವಸರಕ್ಕೆ ಶ
ರೀರವನು ನೂಕುವೆನು ನಿನ್ನಯ
ವೀರರೈವರ ನೋಯಿಸೆನು ರಾಜೀವಸಖನಾಣೆ ॥20॥

೦೨೧ ಎನಲು ಕರ್ಣನ ...{Loading}...

ಎನಲು ಕರ್ಣನ ದೃಢವ ಕಂಡನು
ಮನದೊಳುತ್ಸಾಹಿಸಿದನಾದೊಡೆ
ತನಯರೈವರ ಹದನು ನಿನ್ನದು ಬಲುಹ ಮಾಡುವೊಡೆ
ಮನಕೆ ಖತಿಯಹುದರುಹದಿರ್ದೊಡೆ
ತನಗೆ ಗುಣವಲ್ಲೆಂಬ ಕಾರಣ
ವಿನಿತನೊಡ್ಡೆ ೈಸಿದೆನು ನೀ ಸುಖಿಯಾಗು ಹೋಗೆಂದ ॥21॥

೦೨೨ ಬನ್ದರೊಳ್ಳಿತು ಬಾರದಿದ್ದೊಡೆ ...{Loading}...

ಬಂದರೊಳ್ಳಿತು ಬಾರದಿದ್ದೊಡೆ
ಕಂದ ಕೇಳೈ ಮಧುರ ವಚನದಿ
ಮಂದಮತಿಯನು ತಿಳುಹಿ ತಮ್ಮಂದಿರಿಗೆ ರಾಜ್ಯವನು
ಇಂದು ಕೊಡಿಸುವುದುಚಿತ ಸಂಪ್ರತಿ
ಗಿಂದು ಸೇರಿಸು ನಿನ್ನ ಮಾತನು
ಹಿಂದುಗಳೆಯನು ಕೌರವೇಶ್ವರನೆಂದನಸುರಾರಿ ॥22॥

೦೨೩ ಮಸೆದುದಿತ್ತಣ್ಡಕ್ಕೆ ಮತ್ಸರ ...{Loading}...

ಮಸೆದುದಿತ್ತಂಡಕ್ಕೆ ಮತ್ಸರ
ವಸಮ ಸಂಗರವೀಗ ನೀತಿಯ
ನುಸುರಿದರೆ ಮನಗಾಣನೇ ಕೌರವ ಮಹೀಶ್ವರನು
ವಿಸಸನದ ಕಟ್ಟಾಳು ಮಂತ್ರವ
ನೆಸಗಲಾಗದು ತನ್ನ ವೀರಕೆ
ಮಸುಳಹುದು ಮುರವೈರಿ ಸಂಧಿಯನರಿಯೆ ನಾನೆಂದ ॥23॥

೦೨೪ ಕಳುಹಬೇಹುದು ದೇವ ...{Loading}...

ಕಳುಹಬೇಹುದು ದೇವ ದಿನಪತಿ
ಇಳಿದನಪರಾಂಬುಧಿಗೆ ಸಂಪ್ರತಿ
ಯಳಿದ ಹೊತ್ತಿಂದೀಗ ನೆಟ್ಟನೆ ನೀವು ಪಾಂಡವರು
ಹುಲುಸರವಿ ಹಾವಹುದು ಹುತ್ತಿನ
ತಲೆಯಲಿರಲಜ್ಞರಿಗೆ ಹಿಸುಣರ
ಬಳಕೆ ಹೊಗುವುದು ಕಳುಹ ಬೇಕೆಂದೆರಗಿದನು ಕರ್ಣ ॥24॥

೦೨೫ ಬೀಳುಕೊಣ್ಡನು ಮನೆಗೆ ...{Loading}...

ಬೀಳುಕೊಂಡನು ಮನೆಗೆ ಬಂದು ವಿ
ಶಾಲಮತಿ ಚಿಂತಿಸಿದನಾ ಸಿರಿ
ಲೋಲ ಮಾಡಿದ ತಂತ್ರ ಮನದಲಿ ನಟ್ಟು ಬೇರೂರಿ
ಕಾಳುಮಾಡಿದನಕಟ ಕೌರವ
ಬಾಳಲರಿಯದೆ ಕೆಟ್ಟನೀ ಗೋ
ಪಾಲ ಬರಿದೇ ಬಿಡನು ಜೀವವ ಕೊಳ್ಳದಿರನೆಂದ ॥25॥

೦೨೬ ವೀರ ರವಿಸುತನೊನ್ದು ...{Loading}...

ವೀರ ರವಿಸುತನೊಂದು ದಿನ ರವಿ
ವಾರದಲಿ ಪರಿತೋಷ ಮಿಗೆ ಭಾ
ಗೀರಥೀ ತೀರದಲಿ ತಾತಂಗಘ್ರ್ಯವನು ಕೊಡುತ
ಸೌರ ಮಂತ್ರವ ಜಪಿಸುತಿರಲೌ
ದಾರಿಯದ ಸುರತರುವ ಕುಂತೀ
ನಾರಿ ಕಾಣಲು ಬಂದಳಾತ್ಮಜನಿದ್ದ ನದಿಗಾಗಿ ॥26॥

೦೨೭ ಬರಲು ತಾಯ್ಗಿದಿರಾಗಿ ...{Loading}...

ಬರಲು ತಾಯ್ಗಿದಿರಾಗಿ ರವಿಸುತ
ನಿರದೆ ಬಂದನು ದಂಡದಂತಿರೆ
ಚರಣದಲಿ ಮೈಯಿಕ್ಕಲಾತನ ನೊಸಲ ನೆಗಹಿದಳು
ಬರಸೆಳೆದು ಬಿಗಿದಪ್ಪಿದಳು ನೀ
ರುರವಣಿಸಿದವು ನಯನದಲಿ ಸೆರೆ
ಕೊರಳಿಗೌಕಿದುದಳಲಿನಬುಧಿಯೊಳಳ್ದಳಾ ಕುಂತಿ ॥27॥

೦೨೮ ಆ ಸಮಯದಲಿ ...{Loading}...

ಆ ಸಮಯದಲಿ ಗಂಗೆ ನಾರೀ
ವೇಷದಲಿ ನಡೆತಂದಳೆಲೆ ಕುಂ
ತೀ ಸತಿಯೆ ಕೈಯೆಡೆಯ ಕಂದನನೊಪ್ಪುಗೊಳು ನೀನು
ಈಸು ದಿನವಿವನಾಗುಹೋಗಿನ
ಗಾಸಿಯನು ತಲೆಗಾಯÉ್ದುನೆನ್ನಯ
ಭಾಷೆ ಸಂದುದೆನುತ್ತ ತಾಯಿಗೆ ಕೊಟ್ಟಳಾತ್ಮಜನ ॥28॥

೦೨೯ ಇರಲಿರಲು ರವಿ ...{Loading}...

ಇರಲಿರಲು ರವಿ ಬಂದನೆಕ್ಕಟಿ
ಕರೆದನೀತನ ಕಿವಿಯೊಳೆಲ್ಲವ
ನೊರೆದ ನಿನಗೆಲೆ ಮಗನೆ ಕುಂತೀದೇವಿ ತಾಯಹುದು
ಮುರಹರನ ಮತದಿಂದ ನಿನ್ನಯ
ಸರಳ ಬೇಡಲು ಬಂದಳಂದಿನ
ಹರಿಗೆ ಕವಚವನಿತ್ತವೊಲು ಮರುಳಾಗಬೇಡೆಂದ ॥29॥

೦೩೦ ಬೆಸಸಿದುದಕೆ ಹಸಾದವೆನ್ದನು ...{Loading}...

ಬೆಸಸಿದುದಕೆ ಹಸಾದವೆಂದನು
ಬಿಸಜಬಂಧುವ ಕಳುಹಿದನು ಮ
ನ್ನಿಸಿದನಿತ್ತಲು ಮಾತೆಯನು ಭಯಭರಿತ ಭಕ್ತಿಯಲಿ
ಒಸೆದು ಬಿಜಯಂಗೈದ ಹದನನು
ವುಸುರ ಬೇಹುದು ತಾಯೆಯೆನೆ ಶೋ
ಕಿಸುತ ನುಡಿದಳು ಕುಂತಿ ಕರ್ಣನ ತೆಗೆದು ಬಿಗಿಯಪ್ಪಿ ॥30॥

೦೩೧ ಮಗನೆ ತಮ್ಮನ್ದಿರನು ...{Loading}...

ಮಗನೆ ತಮ್ಮಂದಿರನು ಪಾಲಿಸು
ವಿಗಡತನವನು ಮಾಣು ನೀನೋ
ಲಗಿಸುವರೆ ಕುರುಪತಿಯ ನಿನಗಿತ್ತಂಡವನುಜರಲೆ
ಸೊಗಸು ತಾನೆಂದುದನು ಹಿಸುಣರ
ಬಗೆಯ ನೀ ಕೇಳದಿರು ನೀ ಮನ
ಬಿಗಿಸದಿರು ಸಲಿಸೆನ್ನ ವಚನವನೆಂದಳಾ ಕುಂತಿ ॥31॥

೦೩೨ ತಾಯಹುದು ತಾ ...{Loading}...

ತಾಯಹುದು ತಾ ಬಲ್ಲೆನದು ಸಂ
ಜಾಯತವು ಪಾಂಡವರು ತಮ್ಮದಿ
ರೀಯುಭಯ ರಾಯರಲಿ ಪಟ್ಟದ ಹಿರಿಯ ತಾನಹುದು
ರಾಯನೆನ್ನನು ನೆಚ್ಚಿ ಹೊರೆದನು
ಸಾಯಲಳುಕುವೆನೇ ಸುಡೇತರ
ದೀಯಿಳೆಯ ಬಾಳಿಕೆ ಕೃತಘ್ನತೆಗೆಲ್ಲಿ ಗತಿಯೆಂದ ॥32॥

೦೩೩ ಮಕ್ಕಳೈವರಿಗಾ ಹಿರಿಯನದು ...{Loading}...

ಮಕ್ಕಳೈವರಿಗಾ ಹಿರಿಯನದು
ತಕ್ಕ ಮಾತೆಲೆ ತಾಯೆ ಸಂದೇ
ಹಕ್ಕೆ ನೆಲೆಯಿಲ್ಲದು ನಿಲಲಿ ಧಾರುಣಿಯ ಬಯಸುವರೆ
ತಕ್ಕುದೇ ದಾತಾರನರಸಿಯೊ
ಳೊಕ್ಕತನವಿರಲಾರು ಮೆಚ್ಚುವ
ರಕ್ಕ ಹೇಳೌ ಹೇಸಳೇ ಜಯಲಕ್ಷಿ ್ಮ ತನಗೆಂದ ॥33॥

೦೩೪ ಇನ್ದು ನೀವರುಹಿದ ...{Loading}...

ಇಂದು ನೀವರುಹಿದ ಬಳಿಕ ರವಿ
ನಂದನನುಯೆಂದರಿದೆನಲ್ಲದೆ
ಹಿಂದೆ ದುರಿಯೋಧನನದಾವುದ ನೋಡಿ ಸಲಹಿದನು
ಬಂದು ಪಾಂಡವರೊಡನೆ ಕೂಡಿದ
ರಿಂದು ನಗದೇ ಲೋಕವಂತಿರ
ಲಿಂದು ನಿಮ್ಮಡಿ ಬಂದ ಕಾರ್ಯವ ಬೆಸಸಿ ನೀವೆಂದ ॥34॥

೦೩೫ ಆದೊಡೈವರ ಮಕ್ಕಳನು ...{Loading}...

ಆದೊಡೈವರ ಮಕ್ಕಳನು ತಲೆ
ಗಾಯ್ದು ತೋರೈ ಕಂದ ನಿನಗಿ
ನ್ನೀ ದುರಾಗ್ರಹವೊಪ್ಪುವುದೆ ಕೌರವನ ಸೇವೆಯಲಿ
ಹೋದ ಬಾಣವ ಮರಳಿ ತೊಡದಿರು
ಮಾದು ಕಳೆ ವೈರವನೆನಲ್ಕೆ ಹ
ಸಾದವೆಂದನು ಬೀಳುಕೊಟ್ಟನು ಬಂದನರಮನೆಗೆ ॥35॥

+೧೦ ...{Loading}...