೦೬

೦೦೦ ಸೂ ರಿಪುಕುಮಾರ ...{Loading}...

ಸೂ. ರಿಪುಕುಮಾರ ಕುಠಾರ ಧೀರನು
ಚಪಳ ನೃಪಸಂಹಾರ ಕಾಲನು
ವಿಪುಳ ಸಂಗ್ರಾಮದಲಿ ಮಡಿದನು ಫಲುಗುಣನ ತನಯ

೦೦೧ ಮೇರೆದಪ್ಪಿತು ಕೌರವನ ...{Loading}...

ಮೇರೆದಪ್ಪಿತು ಕೌರವನ ಪರಿ
ವಾರದಲಿ ಬೇಹವರು ಮಕುಟದ
ಬಾರಿಯಾಳುಗಳಾಂತುಕೊಂಡರು ಪಾರ್ಥನಂದನನ
ಸೂರಿಯನ ಸುತ ಶಲ್ಯ ಗೌತಮ
ಕೌರವಾನುಜನುಭಯ ಕಟಕಾ
ಚಾರ್ಯನಶ್ವತ್ಥಾಮನಿವರೊಗ್ಗಾಯ್ತು ಷಡುರಥರು ॥1॥

೦೦೨ ಹೊಳೆವ ಸಿನ್ಧದ ...{Loading}...

ಹೊಳೆವ ಸಿಂಧದ ಜಡಿವ ಕಹಳಾ
ವಳಿಯ ಲಗ್ಗೆಯ ವಿವಿಧ ವಾದ್ಯದ
ಕಳಕಳದ ಕಾಲಾಳ ಬೊಬ್ಬೆಯ ಬಹಳ ರಭಸದಲಿ
ಕಲಶ ಪಲ್ಲವ ಚೌಕದಲಿ ಮಂ
ಡಳಿಸಿದವು ಸತ್ತಿಗೆಗಳೊದರುವ
ಕೆಲಬಲದ ಶಂಖಾಳಿಯಲಿ ಸಂದಣಿಸಿತತಿರಥರು ॥2॥

೦೦೩ ಅಳವಿಗೊಟ್ಟುದು ಮತ್ತೆ ...{Loading}...

ಅಳವಿಗೊಟ್ಟುದು ಮತ್ತೆ ಕೌರವ
ಬಲಪಯೋನಿಧಿ ವೈರಿ ಬಡಬನ
ಬಿಲು ಸರಳು ಬಿರುಗಿಡಿಯಲೌಕಿತು ಚಾತುರಂಗದಲಿ
ಎಲೆಲೆ ಬೆಂಗಾಹಿನಲಿ ನೂಕುವ
ಬಲ ಸಮರ್ಥರ ಜೋಕೆಯಲಿ ಕುರು
ಬಲಕೆ ಕದನಾಳಾಪವಾಯ್ತೆನುತೆಚ್ಚನಭಿಮನ್ಯು ॥3॥

೦೦೪ ಎಸಲು ತಲೆವರಿಗೆಯಲಿ ...{Loading}...

ಎಸಲು ತಲೆವರಿಗೆಯಲಿ ಕವಿದುದು
ದೆಸೆಯ ಹಳುವಿಂಗೌಕುವತಿರಥ
ರುಸುರುಮಾರಿಗಳೇರಿ ಹೊಯ್ದರು ರಾಯ ರಾವುತರು
ನುಸುಳಿದರು ನಾಚಿಕೆಯಲಾತನ
ವಿಶಿಖ ಜಲದಲಿ ತೊಳೆದರತಿರಥ
ರಸಮ ಸಂಗರವಾಯ್ತು ಮತ್ತಭಿಮನ್ಯುವಿದಿರಿನಲಿ ॥4॥

೦೦೫ ಹಳಚಿ ಮುರಿದುದು ...{Loading}...

ಹಳಚಿ ಮುರಿದುದು ವೀರ ಕರ್ಣನ
ಬಲ ಕೃಪಾಚಾರಿಯರ ಸೇನೆಗೆ
ತಲೆಯ ಋಣ ಸಂಬಂಧ ಸವೆದುದು ಕಾತರಿಸಿ ಕವಿವ
ಬಲದ ಬಿರುದರಿಗಮರ ನಾರಿಯ
ರೊಳಗೆ ಸೇರುವೆಯಾಯ್ತು ಶಲ್ಯನ
ಬಲದಡಗು ಸವಿಯಾಯ್ತು ಜಂಬುಕ ಕಾಕ ಸಂತತಿಗೆ ॥5॥

೦೦೬ ಕೆಡೆದ ರಥ ...{Loading}...

ಕೆಡೆದ ರಥ ಸಲೆ ಕಾಂಚನಾದ್ರಿಯ
ನಡಸಿದವು ನಾಚಿಕೆಯನಭ್ರದೊ
ಳಿಡಿಯೆ ತಲೆ ಬೀರಿದವು ಭಂಗವನನುಪಮಾಂಬರಕೆ
ಕಡಲುವರಿವರುಣಾಂಬು ಜಲಧಿಗೆ
ಬಿಡಿಸಿದವು ಬಿಂಕವನು ಶಿವ ಶಿವ
ನುಡಿವ ಕವಿ ಯಾರಿನ್ನು ಪಾರ್ಥ ಕುಮಾರನಾಹವವ ॥6॥

೦೦೭ ಪಡೆಯ ತೆಗೆ ...{Loading}...

ಪಡೆಯ ತೆಗೆ ತರುವಲಿಯ ಕೊಲ್ಲದೆ
ಹಿಡಿಯೆನುತ ಬಿರುಸರಳ ತಿರುವಿನ
ಲಡಸಿ ಸೂತರಿಗರುಹಿ ಕೆಲಬಲದವರ ಕೈವೀಸಿ
ಕಡುಮನದ ಕೈಚಳಕಿಗರು ಮುಂ
ಗುಡಿಯಲೈತರೆ ರವಿಸುತಾದಿಗ
ಳೊಡನೊಡನೆ ಕೈಕೊಂಡರಿಂದ್ರಕುಮಾರ ನಂದನನ ॥7॥

೦೦೮ ಶಿಶುತನದ ಸಾಮಥ್ರ್ಯ ...{Loading}...

ಶಿಶುತನದ ಸಾಮಥ್ರ್ಯ ಸಾಕಿ
ನ್ನೆಸದಿರೆಲವೋ ಮರಳು ಮರಳೆಂ
ದಸಮ ಬಲರೈದಿದರು ಷಡುರಥರೊಂದು ಮುಖವಾಗಿ
ಎಸುಗೆ ನಿಮಗೆಂದಾಯ್ತು ನಿದ್ರೆಯ
ಮುಸುಕಿನಲಿ ಗೋಗ್ರಹಣದಲಿ ಜೀ
ವಿಸಿದ ಜಾಣರು ನೀವೆನುತ್ತಿದಿರಾದನಭಿಮನ್ಯು ॥8॥

೦೦೯ ತರಳತನದಲಿ ನುಡಿಯದಿರು ...{Loading}...

ತರಳತನದಲಿ ನುಡಿಯದಿರು ಸಂ
ಗರಕೆ ಕರೆ ನಿಮ್ಮಯ್ಯನನು ಹೊಸ
ಸರಳು ನಾಚುವವಲ್ಲ ಶಿಶುವಧೆಯೆಂಬುದಪವಾದ
ಮರಳುವುದು ಲೇಸೆನುತ ಷಡುರಥ
ರುರವಣಿಸಿದರು ಬಿಗಿದಬಿಲ್ಲಿನ
ಗರುಡಿಕಾರನ ಕೂಡ ನೂಕಿತು ರವಿಸುತಾದಿಗಳು ॥9॥

೦೧೦ ಪಾರ್ಥ ಪರಿಯನ್ತೇಕೆ ...{Loading}...

ಪಾರ್ಥ ಪರಿಯಂತೇಕೆ ಸಮರ
ವ್ಯರ್ಥಜೀವರು ನೀವು ಕೌರವ
ನರ್ಥವನು ಸಲೆ ತಿಂಬುದಲ್ಲದೆ ಸಮರ ನಿಮಗೇಕೆ
ಸ್ವಾರ್ಥ ಲೋಲುಪ್ತಿಯಲಿ ನಿಲುವ ಸ
ಮರ್ಥರಾದರೆ ಬಾಣ ಧಾರಾ
ತೀರ್ಥದೊಳಗೋಲಾಡಿಸುವೆನೆಂದೆಚ್ಚನಭಿಮನ್ಯು ॥10॥

೦೧೧ ಮನದ ಕೆಚ್ಚುಳ್ಳದಟನಹೆ ...{Loading}...

ಮನದ ಕೆಚ್ಚುಳ್ಳದಟನಹೆ ಮಾ
ತಿನ ಸಘಾಡಿಕೆ ಲೇಸು ಪಾರ್ಥನ
ತನಯನಲ್ಲಾ ಪೂತು ಪಾಯಿಕು ಎನುತ ಷಡುರಥರು
ತನತನಗೆ ಕೆಂಗೋಲಿನಲಿ ಮು
ಮ್ಮೊನೆಯ ಬೋಳೆಯ ಸರಳಿನಲಿ ಸಾ
ಧನ ಸಮಗ್ರರು ಶಿಶುವನೆಚ್ಚರು ದೆಸೆದೆಸೆಗೆ ಕವಿದು ॥11॥

೦೧೨ ಮಸಗಿ ಮದದಾನೆಗಳು ...{Loading}...

ಮಸಗಿ ಮದದಾನೆಗಳು ಸಿಂಹದ
ಶಿಶುವ ಮುತ್ತುವವೋಲು ಕವಿಕವಿ
ದೆಸುತ ಬಂದರು ಮಕುಟವರ್ಧನರಸಮ ಬಾಲಕನ
ನುಸುಳದವರವರಸ್ತ್ರವನು ಖಂ
ಡಿಸುತ ಸನ್ನಾಹದಲಿ ಘನ ಪೌ
ರುಷದಲೆಚ್ಚಾಡಿದನು ಹಲಬರ ಕೂಡೆ ಸುಕುಮಾರ ॥12॥

೦೧೩ ಕೋಡಿದನೆ ಕೊಙ್ಕಿದನೆ ...{Loading}...

ಕೋಡಿದನೆ ಕೊಂಕಿದನೆ ನಾಯಕ
ವಾಡಿಗಳು ಹಲರೆಂದು ಬೆಂಗೊ
ಟ್ಟೋಡಿದನೆ ಕೈಗಾಯದೆಚ್ಚನು ನಚ್ಚಿದಂಬಿನಲಿ
ತೋಡು ಬೀಡಿನ ಹವಣನಾತನ
ಮಾಡಿದಾತನೆ ಬಲ್ಲನೆನೆ ಕೈ
ಮಾಡಿ ಸುರಿದನು ಸರಳ ಮಳೆಯ ಮಹಾರಥರ ಮೇಲೆ ॥13॥

೦೧೪ ಪೂತು ಮಝ ...{Loading}...

ಪೂತು ಮಝ ಬಿಲ್ಲಾಳುತನವಿದು
ಭೂತನಾಥಂಗಿಲ್ಲ ಸುಭಟ
ವ್ರಾತವೀಕ್ಷಿಸಲರಿದೆನುತ ಕಣೆಗೆದರಿದನು ದ್ರೋಣ
ಏತಕಿದು ಹಿಮ್ಮೆಟ್ಟು ದಿಟ ನೀ
ಸೋತಡೆಯು ಜಯವಿಲ್ಲೆಮಗೆ ಮೃಗ
ಪೋತನನು ಹರಿಹೊಯ್ವುದುಚಿತವೆ ಮಗನೆ ಕೇಳ್ ಎಂದ ॥14॥

೦೧೫ ವಿನಯವೇಕಿದು ನಿಮ್ಮ ...{Loading}...

ವಿನಯವೇಕಿದು ನಿಮ್ಮ ಭುಜಬಲ
ದನುವ ಬಲ್ಲೆನು ನಿಮ್ಮ ಕೈಮೈ
ತನದ ಹವಣನು ಕಾಬೆನೆನ್ನೊಳು ಸೆಣಸಿ ಜಯಿಸಿದರೆ
ಧನುವ ಹಿಡಿಯೆನು ಸಾಕು ಡೊಂಬನ
ಬಿನುಗು ನುಡಿಯಂತಿರಲಿ ಬಲ್ಲಡೆ
ಮೊನೆಗಣೆಯಲೇ ಮಾತನಾಡೆಂದೆಚ್ಚನಭಿಮನ್ಯು ॥15॥

೦೧೬ ಎಡದೊಳೌಕುವ ಕೃಪನನೆಚ್ಚನು ...{Loading}...

ಎಡದೊಳೌಕುವ ಕೃಪನನೆಚ್ಚನು
ತಡೆಯಲಶ್ವತ್ಥಾಮನನು ರಥ
ಕೆಡೆಯಲೆಚ್ಚನು ತೊಡಚಿ ಕೈಯಲಿ ಕೌರವಾನುಜನ
ಮಿಡುಕಲೆಚ್ಚನು ಹಿಂದು ಮುಂದವ
ಗಡಿಸಿದಾ ಮಾದ್ರೇಯ ರವಿಸುತ
ರೊಡಲೊಳಂಬನು ಹೂಳಿದನು ಸೀಳಿದನು ಸಮರಥರ ॥16॥

೦೧೭ ಅಡಸಿ ಹೊಕ್ಕರೆ ...{Loading}...

ಅಡಸಿ ಹೊಕ್ಕರೆ ಕೃಪನ ರಥವನು
ಕಡಿದು ಬಿಸುಟನು ಗುರುಸುತನನಡಿ
ಮಿಡುಕಲೀಯದೆ ಬಿಗಿದು ಕರ್ಣನ ಧನುವ ಖಂಡಿಸಿದ
ಕೊಡಹಿದನು ಕೌರವನ ರಥವನು
ತುಡುಕಲೀಯದೆ ದ್ರೋಣನನು ಜವ
ಗೆಡಿಸಿದನು ಜೋಡಿಸಿದ ಷಡುರಥರೊಗ್ಗನೊಡೆಹೊಯ್ದ ॥17॥

೦೧೮ ಮುರಿಮುರಿದು ಹಿಯ್ಯಾಳಿಯಲಿ ...{Loading}...

ಮುರಿಮುರಿದು ಹಿಯ್ಯಾಳಿಯಲಿ ಮ
ತ್ತುರವಣಿಸಿ ಗರಿಗಟ್ಟಿ ರಥಿಕರು
ಹುರಿಬಿಡದೆ ಬಿಗುಹಿನಲಿ ಭಾಷೆಯ ಮಾಡಿ ತಮ್ಮೊಳಗೆ
ಸರಳ ಸೂಸಿದರೆಡ ಬಲದಲ
ಬ್ಬರವ ಮಾಡಿದರೋಡಿದರು ಹಗೆ
ಯರುಣ ಜಲದಲಿ ನಾದಿದರು ನಿಶಿತಾಸ್ತ್ರ ಸಂತತಿಯ ॥18॥

೦೧೯ ವಡಬಗೌತಣವಿಕ್ಕುವರೆ ಕಡ ...{Loading}...

ವಡಬಗೌತಣವಿಕ್ಕುವರೆ ಕಡ
ಲೊಡೆಯಗಹುದು ಸಮರ್ಥನಲ್ಲಾ
ಬಿಡುಗಣೆಯ ಬೀರುವರೆ ಕಟಕಾಚಾರ್ಯನೆಂದೆನುತ
ಕಡುಮೊನೆಯ ಕೂರಂಬುಗಳ ಮಿಗೆ
ಗಡಣಿಸಿದನೊಗ್ಗೊಡೆದ ಷಡುರಥ
ರೊಡಲೊಳಂಬನು ಹೂಳಿದನು ಕಾರಿದರು ಶೋಣಿತವ ॥19॥

೦೨೦ ಹೂಸಕದ ಶೌರಿಯದ ...{Loading}...

ಹೂಸಕದ ಶೌರಿಯದ ಬಾಳಿಕೆ
ಯೇಸು ದಿನವೈ ಕರ್ಣ ಕೃಪ ದು
ಶ್ಯಾಸನರ ಕೊಂಬನೆ ಕುಮಾರಕ ಸುರರಿಗಲಗಣಸು
ಘಾಸಿಯಾದರು ಘಾಯವಡೆದು ವಿ
ಳಾಸವಳಿದುದು ರಿಪುಭಟನ ಗೆಲು
ವಾಸೆ ಬೀತುದು ಧಾತುಗೆಟ್ಟುದು ಸರಳ ಸಾರದಲಿ ॥20॥

೦೨೧ ವಿರಥನಾದನು ಕರ್ಣನಮ್ಬಿಗೆ ...{Loading}...

ವಿರಥನಾದನು ಕರ್ಣನಂಬಿಗೆ
ತಿರುಹಿ ಬಿಲ್ಲನು ತೊಟ್ಟನಾ ಗುರು
ಗುರುತನೂಜನು ತನ್ನ ಸೂತನ ಶಿರವ ಹರಿಯೆಚ್ಚ
ಸುರಗಿಯನು ಬಿಸುಟೊರೆಯ ತಿರುಹಿದ
ನರಸನನುಜನು ಕೃಪನು ಶಲ್ಯನು
ಕೊರಳಲಸುಗಳ ಹಿಡಿದು ಹಂಗಿಗರಾದರೊಡೆಯಂಗೆ ॥21॥

೦೨೨ ಗನ್ನದಲಿ ಗುರು ...{Loading}...

ಗನ್ನದಲಿ ಗುರು ಜಾರಿದನು ಕೃಪ
ಮುನ್ನವೇ ಹಿಂಗಿದನು ಕರ್ಣನ
ನಿನ್ನು ಕಂಡವರಾರು ಮೂರ್ಛೆಗೆ ಮೂರು ಬಾರಿಯದು
ಬೆನ್ನ ತೆತ್ತರು ಬಿರುದರಾತಗೆ
ಕೆನ್ನೆಯೆಡೆಗುಗಿದಂಬು ಸಹಿತವೆ
ನಿನ್ನ ಮಗನರನೆಲೆಗೆ ಸರಿದನು ಭೂಪ ಕೇಳ್ ಎಂದ ॥22॥

೦೨೩ ಕೊಣ್ಡು ಬರುತಿದೆ ...{Loading}...

ಕೊಂಡು ಬರುತಿದೆ ಭಟರು ಮನ್ನೆಯ
ಗಂಡನಾಗೈ ಜೀಯ ಎನೆ ಖತಿ
ಗೊಂಡು ಕುರುಪತಿ ನೋಡಿದನು ಮೂಗಿನಲಿ ಬೆರಳಿಟ್ಟು
ಭಂಡರೆಂಬೆವೆ ಜಗದ ಗುರುಗಳು
ಗಂಡುಗಲಿಗಳು ವೈರಿ ಭಟರಿಗೆ
ಹೆಂಡಿರಾಗಲು ಹೋಗಿರೈ ದಿಟ ಹೋಗಿ ನೀವೆಂದ ॥23॥

೦೨೪ ಕಾಲ ವಹಿಲವ ...{Loading}...

ಕಾಲ ವಹಿಲವ ಕಲಿಸಲೋಸುಗ
ಕೋಲಗುರು ಜಾರಿದನು ಶಲ್ಯನ
ಮೇಲು ಮುಸುಕನುವಾಯ್ತು ಬಿರುದೇನಾಯ್ತು ಗುರುಸುತನ
ಆಳುವಾಸಿಯ ಕಡುಹು ಕರ್ಣನ
ಬೀಳುಕೊಂಡುದು ಪೂತು ಮಝರೇ
ಬಾಲ ಎಂದವನೀಶ ಮೂದಲಿಸಿದನು ತನ್ನವರ ॥24॥

೦೨೫ ಇದಿರೊಳೀಶನ ಭಾಳ ...{Loading}...

ಇದಿರೊಳೀಶನ ಭಾಳ ನಯನದ
ಕದಹು ತೆಗೆದಿದೆ ಹಿಂದೆ ಮರಳುವ
ಡಿದೆ ಕೃತಾಂತನ ಕೊಂತವರಸನ ಮೂದಲೆಯ ವಚನ
ಅದಟು ಕೊಳ್ಳದು ರಾಜಸೇವೆಯ
ಪದವಿ ಪಾತಕ ಫಲವೆನುತ ನೂ
ಕಿದರು ರಥವನು ಹಳಿವು ದರ್ಪದ ಹೇವ ಮಾರಿಗಳು ॥25॥

೦೨೬ ರಸದ ಬನ್ಧದ ...{Loading}...

ರಸದ ಬಂಧದ ಬಿಗುಹು ವಹ್ನಿಯ
ಮುಸುಕನುಗಿದುಳಿವುದೆ ಕುಮಾರನ
ಮುಸುಡ ಮುಂದಕೆ ಬಿದ್ದು ಬದುಕುವರೇ ಮಹಾದೇವ
ಎಸುತ ಹೊಗುವರು ಭಟನ ಘಾಯಕೆ
ಮುಸುಡ ತಿರುಹುವರಡಿಗಡಿಗೆ ಸಾ
ಹಸದ ಸುಂಕಿಗನೊಡನೆ ತಲೆಯೊತ್ತಿದರು ಷಡುರಥರು ॥26॥

೦೨೭ ಹರಿದು ಬಿದ್ದವು ...{Loading}...

ಹರಿದು ಬಿದ್ದವು ಜೋಡು ಮೆಯ್ಯಲಿ
ಮುರಿದವಗಣಿತ ಬಾಣದೇರಿನೊ
ಳೊರೆದ ರಕುತದ ಧಾರೆ ನಾದಿತು ರಥದ ಹಲಗೆಗಳ
ಅರಿವು ಮರೆದಪಕೀರ್ತಿನಾರಿಯ
ಸೆರಗ ಹಿಡಿದರು ಹೇಳಲೇನದ
ನರಿಯೆನೇಕಾಂತದಲಿ ಕರ್ಣನ ಕರೆದನಾ ದ್ರೋಣ ॥27॥

೦೨೮ ಇದಿರೊಳಾನುವುದರಿದು ಹಸುಳೆಯ ...{Loading}...

ಇದಿರೊಳಾನುವುದರಿದು ಹಸುಳೆಯ
ಕದನ ಹಂಗಿಗರಾದೆವಾಳ್ದನ
ವದನಕಮಲಕೆ ನಮ್ಮ ಪೌರುಷವಿಂದು ಹಿಮವಾಯ್ತು
ಇದಿರೊಳಾನಿಹೆ ಶಲ್ಯನೆಡವಂ
ಕದಲಿ ಬಲದಲಿ ಕೃಪನಪರಭಾ
ಗದಲಿ ನೀ ಬಂದೆಸು ಕುಮಾರನ ಕರದ ಕಾರ್ಮುಕವ ॥28॥

೦೨೯ ಚಾಪವೀತನ ಕೈಯಲಿರಲಿ ...{Loading}...

ಚಾಪವೀತನ ಕೈಯಲಿರಲಿ
ನ್ನಾ ಪಿನಾಕಿಗೆ ಗೆಲವು ಘಟಿಸದು
ವೈಪರೀತ್ಯಕೆ ಬೆದರಲಾಗದು ಸ್ವಾಮಿಕಾರ್ಯವಿದು
ರೂಪುದೋರದೆ ಬಂದು ಸುಭಟನ
ಚಾಪವನು ಖಂಡಿಸುವುದಿದು ಕುರು
ಭೂಪನುಳಿವೆಂದಿನಸುತನನೊಡಬಡಿಸಿದನು ದ್ರೋಣ ॥29॥

೦೩೦ ಹಿನ್ದಣಿಗೆ ತಿರುಗಿದನು ...{Loading}...

ಹಿಂದಣಿಗೆ ತಿರುಗಿದನು ಭಾಸ್ಕರ
ನಂದನನು ಬಲವಂಕದಲಿ ಗುರು
ನಂದನನು ಕೃಪ ಶಲ್ಯ ವಾಮದೊಳಿದಿರಲಾ ದ್ರೋಣ
ನಿಂದು ಕದನವ ಕೆಣಕಿದರು ರಿಪು
ಬಂದಿಕಾರನೊಳೇರ ಸೂರೆಗೆ
ಬಂದು ಬಸಿವುತ ಹೋದರನಿಬರು ಬೈದು ರವಿಸುತನ ॥30॥

೦೩೧ ದಳವು ದಳವುಳವಾಯ್ತು ...{Loading}...

ದಳವು ದಳವುಳವಾಯ್ತು ಕೇಸರ
ದೊಳಗೆ ವಿಸಟಂಬರಿದು ಕರ್ಣಿಕೆ
ಯೊಳಗೆ ರಿಂಗಣಗುಣಿದು ಸಂಗರ ಜಯದ ಮಡುವಿನಲಿ
ಸಲೆ ಸೊಗಸಿ ತನಿ ಸೊಕ್ಕಿ ದೆಸೆ ಪಟ
ದುಳಿದು ಸೌಭದ್ರೇಯ ಭೃಂಗನ
ಬಿಲು ದನಿಯ ಭರವಂಜಿಸಿತು ಜಯಯುವತಿ ವಿರಹಿಗಳ ॥31॥

೦೩೨ ಆರಯಿದು ಮಗನೆನಿಸುವೀ ...{Loading}...

ಆರಯಿದು ಮಗನೆನಿಸುವೀ ಮಮ
ಕಾರವೆಮ್ಮೊಳು ಮೊಳೆತಡಾ ದಾ
ತಾರನುಳಿವೆನ್ನಿಂದ ತಪ್ಪುವುದೆನುತ ಮನದೊಳಗೆ
ಕೂರಲಗನಾ ಕರ್ಣ ಬರೆಸೆಳೆ
ದಾರಿ ಹಿಂದಣಿನೆಚ್ಚು ಪಾರ್ಥಕು
ಮಾರಕನ ಚಾಪವನು ಮುಕ್ಕಡಿಯಾಗಿ ಖಂಡಿಸಿದ ॥32॥

೦೩೩ ಉರುವ ಜಯವಧುವೊಕ್ಕತನದಲಿ ...{Loading}...

ಉರುವ ಜಯವಧುವೊಕ್ಕತನದಲಿ
ಮುರಿದ ಕಡ್ಡಿಯಿದೆನಲು ಕರದಿಂ
ಮುರಿದು ಬಿದ್ದುದು ಚಾಪವಿಂದ್ರಕುಮಾರನಂದನನ
ಬೆರಗಡರಿ ಮುಖದಿರುಹಿ ಹಿಂದಣಿ
ನಿರಿದ ಕರ್ಣನ ನೋಡಿ ಮುಖದಲಿ
ಕಿರುನಗೆಯ ಕೇವಣಿಸಿ ನುಡಿದನು ಬೆರಳನೊಲೆದೊಲೆದು ॥33॥

೦೩೪ ಆವ ಶರಸನ್ಧಾನಲಾಘವ ...{Loading}...

ಆವ ಶರಸಂಧಾನಲಾಘವ
ದಾವ ಪರಿ ಮಝ ಪೂತು ಪಾಯಿಕು
ದೇವ ಬಿಲ್ಲಾಳೆಂತು ಕಡಿದೈ ಕರ್ಣ ನೀ ಧನುವ
ಈ ವಿವೇಕವಿದಾರ ಸೇರುವೆ
ಯಾವಗಹುದಿದು ಹಿಂದೆ ಬಂದೆಸು
ವೀ ವಿಗಡತನ ನಿನಗೆ ಮೆರೆವುದು ಕರ್ಣ ಕೇಳ್ ಎಂದ ॥34॥

೦೩೫ ಎನಲು ಲಜ್ಜಿತನಾಗಿ ...{Loading}...

ಎನಲು ಲಜ್ಜಿತನಾಗಿ ತಿರುಗಿದ
ನನುವರದಲೀ ಕರ್ಣನಾತನ
ಧನು ಮುರಿಯೆ ಕೈಕೊಂಡರೀ ದ್ರೋಣಾದಿ ನಾಯಕರು
ಕನಕರಥವನು ದ್ರೋಣನಾ ಗುರು
ತನುಜ ಸಾರಥಿಯನು ಕೃಪಾಚಾ
ರ್ಯನು ತುರಗವನು ಶಲ್ಯ ಕಡಿದನು ಭಟನ ಠೆಕ್ಕೆಯವ ॥35॥

೦೩೬ ತುಡುಕುವರೆ ಧನುವಿಲ್ಲ ...{Loading}...

ತುಡುಕುವರೆ ಧನುವಿಲ್ಲ ಮುಂದಡಿ
ಯಿಡಲು ಸಾರಥಿಯಿಲ್ಲ ರಥ ಕಡಿ
ವಡೆದುದಿನ್ನೆಂತೊದಗುವನೊ ಸುಕುಮಾರ ತಾನೆನುತ
ಪಡೆ ಬಿಡದೆ ಬೊಬ್ಬಿರಿಯೆ ಬೆದರದೆ
ಕಡುಗಿ ಖಡ್ಗವ ಕೊಂಡು ರಿಪುಗಳ
ಕಡಿದು ಹರಹುತ ಬೀದಿವರಿದನು ಕಣನ ಮಧ್ಯದಲಿ ॥36॥

೦೩೭ ಈತನಿರೆ ಕಲ್ಪಾನ್ತರುದ್ರನ ...{Loading}...

ಈತನಿರೆ ಕಲ್ಪಾಂತರುದ್ರನ
ಮಾತು ಜಗಕೇಕೆನಲು ವೈರಿ
ವ್ರಾತವನು ಮುಂಕೊಂಡು ಹೊಯ್ದನು ಹೊಳೆವ ಖಡುಗದಲಿ
ಸೋತನೇ ಶಿಶು ಷಡುರಥರ ಕರೆ
ಈತನಾರೈ ಹೇಳಿ ಭಯವಿ
ನ್ನೇತಕೆಂದವನೀಶ ಮೂದಲಿಸಿದನು ತನ್ನವರ ॥37॥

೦೩೮ ಗೆಲಿದರಭಿಮನ್ಯುವನು ತನ್ನವ ...{Loading}...

ಗೆಲಿದರಭಿಮನ್ಯುವನು ತನ್ನವ
ರೆಲವೊ ತಾ ವೀಳೆಯವನೆನುತವೆ
ಮೆಲುನಗೆಯಲತಿರಥರ ಜರೆದನು ಕೌರವರ ರಾಯ
ಬಳಿಕ ಎಡಬಲವಂಕದಲಿ ಮಂ
ಡಲಿಸಿ ಮೋಹರಿಸಿತ್ತು ರಿಪುಬಲ
ಜಲಧಿ ವಡಬನೊಳಾಂತು ತಾಗಿದರಂದು ಷಡುರಥರು ॥38॥

೦೩೯ ತುಡುಕಿದವು ತೇಜಿಗಳು ...{Loading}...

ತುಡುಕಿದವು ತೇಜಿಗಳು ವಾಘೆಯ
ಗಡಣದಲಿ ತೂಳಿದವು ದಂತಿಗ
ಳೆಡಬಲದ ಬವರಿಯಲಿ ಮುತ್ತಿತು ಮತ್ತೆ ರಿಪುನಿಕರ
ಕಡುಮನದ ಕಾಲಾಳು ಕರೆದುದು
ಖಡುಗ ಧಾರೆಯನೀತನಳವಿಯ
ಕೆಡಿಸಿ ತಲೆಯೊತ್ತಿದರು ಭೂಪನ ಮೊನೆಯ ನಾಯಕರು ॥39॥

೦೪೦ ವಿಷದ ಹುಟ್ಟಿಯೊಳೆರಗಿ ...{Loading}...

ವಿಷದ ಹುಟ್ಟಿಯೊಳೆರಗಿ ನೊಣ ಜೀ
ವಿಸುವುದೇ ಶಿವ ಶಿವ ಕುಮಾರನ
ಮುಸುಡ ಮುಂದಕೆ ಬಿದ್ದು ಬದುಕುವುದುಂಟೆ ಭಟನಿಕರ
ಕುಸುರಿದರಿದನು ಕರಿಘಟೆಯನಿ
ಪ್ಪಸರದಲಿ ಕಾಲಾಳು ಕುದುರೆಗ
ಳಸುವ ಸೂರೆಯ ಬಿಟ್ಟನಂತಕ ದೂತ ಸಂತತಿಗೆ ॥40॥

೦೪೧ ಅರಿಭಟರ ಬೊಬ್ಬೆಗಳ ...{Loading}...

ಅರಿಭಟರ ಬೊಬ್ಬೆಗಳ ಮೊಳಗಿನೊ
ಳರುಣಜಲ ವರುಷದಲಿ ರಿಪುಗಳ
ಕೊರಳ ಬನದಲಿ ಕುಣಿದುವೀತನ ಖಡ್ಗವನಕೇಕಿ
ಸುರಿವ ಖಂಡದ ರಕುತ ಧಾರೆಗೆ
ತರತರದಿ ಬಾಯ್ದೆಗೆದು ಶಾಕಿನಿ
ಯರ ಸಮೂಹವು ಬಳಿಯಲೈದಿತು ಪಾರ್ಥನಂದನನ ॥41॥

೦೪೨ ಕರುಳ ಹೂಗೊಞ್ಚಲಿನ ...{Loading}...

ಕರುಳ ಹೂಗೊಂಚಲಿನ ಮೂಳೆಯ
ಬಿರಿಮುಗುಳ ನವ ಖಂಡದಿಂಡೆಯ
ಕರತಳದ ತಳಿರೆಲೆಯ ಕಡಿದೋಳುಗಳ ಕೊಂಬುಗಳ
ಬೆರಳ ಕಳಿಕೆಯ ತಲೆಯ ಫಲ ಬಂ
ಧುರದ ಘೂಕಧ್ವಾಂಕ್ಷ ನವ ಮಧು
ಕರದ ರಣವನವೆಸೆದುದೀತನ ಖಡ್ಗ ಚೈತ್ರದಲಿ ॥42॥

೦೪೩ ವೈರಿ ವೀರಪ್ರತತಿಗಮರೀ ...{Loading}...

ವೈರಿ ವೀರಪ್ರತತಿಗಮರೀ
ನಾರಿಯರಿಗೆ ವಿವಾಹವನು ವಿ
ಸ್ತಾರಿಸುವ ಸಮಯದೊಳಗಾಂತ ಸಿತಾಕ್ಷತಾವಳಿಯ
ತಾರಕಿಗಳೆಸೆದಭ್ರವೆನೆ ರಿಪು
ವಾರಣದ ಮಸ್ತಕದ ಮುತ್ತುಗ
ಳೋರಣಿಸಲೊಪ್ಪಿದುದು ಖಡ್ಗ ಸುರೇಂದ್ರಸುತ ಸುತನ ॥43॥

೦೪೪ ಶಾಕಿನಿಯರೋಕುಳಿಯ ಧಾರೆಯ ...{Loading}...

ಶಾಕಿನಿಯರೋಕುಳಿಯ ಧಾರೆಯ
ಜೀಕೊಳವೆಯೋ ಜವನ ಜಳ ಜಂ
ತ್ರಾಕರುಷಣವೊ ರಕುತ ಲತೆಗಳ ಕುಡಿಯ ಕೊನರುಗಳೊ
ನೂಕಿ ಕೊಯ್ಗೊರಳುಗಳ ಮುಂಡದ
ಮೂಕಿನಲಿ ನೆಗೆದೊಗುವ ನೆತ್ತರು
ನಾಕವನು ನಾದಿದುದೆನಲು ಸವರಿದನು ಪರಬಲವ ॥44॥

೦೪೫ ಅಟ್ಟಿ ಹೊಯ್ದನು ...{Loading}...

ಅಟ್ಟಿ ಹೊಯ್ದನು ದಂತಿಗಳ ಹುಡಿ
ಗುಟ್ಟಿದನು ವಾಜಿಗಳ ತೇರಿನ
ಥಟ್ಟುಗಳ ಸೀಳಿದನು ಮಿಗೆ ಕಾಲಾಳನಸಿಯರೆದ
ಕೆಟ್ಟು ಬಿಟ್ಟೋಡಿದುದು ಭಟನರೆ
ಯಟ್ಟಿದನು ರಣದೊಳಗೆ ರಾಯ ಘ
ರಟ್ಟ ಪಾರ್ಥನ ತನಯ ಕೊಂದನು ಖಡ್ಗ ಮನದಣಿಯೆ ॥45॥

೦೪೬ ಸೀಳಿದನು ಸೌಬಲನೊಳಿಪ್ಪ ...{Loading}...

ಸೀಳಿದನು ಸೌಬಲನೊಳಿಪ್ಪ
ತ್ತೇಳನಾ ಮಾದ್ರೇಶರೊಳು ಹದಿ
ನೇಳನಗ್ಗದ ರವಿಸುತನ ಮಂತ್ರಿಗಳೊಳೈವರನು
ಮೇಲೆ ಕೇರಳರೊಳಗೆ ಹತ್ತು ನೃ
ಪಾಲರನು ಕೌಸಲ ಯವನ ನೇ
ಪಾಳ ಬರ್ಬರರೊಳಗೆ ಕೊಂದನು ಹತ್ತು ಸಾವಿರವ ॥46॥

೦೪೭ ಹಸುಳೆಯೆನಬಹುದೇ ಮಹಾದೇ ...{Loading}...

ಹಸುಳೆಯೆನಬಹುದೇ ಮಹಾದೇ
ವಸಮ ಬಲ ಬಾಲಕನೆನುತ ಚಾ
ಳಿಸಿತು ಪಡೆಯಲ್ಲಲ್ಲಿ ತಲ್ಲಣಿಸಿದರು ನಾಯಕರು
ಮುಸುಡ ತಿರುಹುತ ಮಕುಟ ವರ್ಧನ
ರುಸುರಲಮ್ಮದೆ ಸಿಕ್ಕಿ ಭೂಪನ
ನುಸುಳುಗಂಡಿಯ ನೋಡುತಿರ್ದರು ಕೂಡೆ ತಮತಮಗೆ ॥47॥

೦೪೮ ತುಡುಕಲಮ್ಮುವರಿಲ್ಲ ಬಲದಲಿ ...{Loading}...

ತುಡುಕಲಮ್ಮುವರಿಲ್ಲ ಬಲದಲಿ
ಮಿಡುಕಲಮ್ಮುವರಿಲ್ಲ ರಕುತದ
ಕಡಲೊಳಗೆ ಬೆಂಡೆದ್ದು ನೆಗೆದುದು ಕೋಟಿ ಪಾಯದಳ
ಸಿಡಿಲು ಜಂಗಮವಾಯ್ತೊ ಪ್ರಳಯದ
ಮೃಡನು ಬಾಲಕನಾದನೋ ಕೊಲೆ
ಗಡಿಕನಹುದೋ ಕಂದ ಎಂದನು ಕೌರವರ ರಾಯ ॥48॥

೦೪೯ ಧನು ಮುರಿದ ...{Loading}...

ಧನು ಮುರಿದ ಬಳಿಕಿಮ್ಮಡಿಸಿತೀ
ತನ ಪರಾಕ್ರಮವೆನುತ ಸೇನಾ
ವನಧಿ ಜರೆದುದು ಭಟರು ಹರಿದರು ಬಿಟ್ಟ ಮಂಡೆಯಲಿ
ಜನಪತಿಯ ಕಟ್ಟಳವಿಯಲಿ ರವಿ
ತನುಜನಡ್ಡೈಸಿದನು ಫಡ ಹೋ
ಗೆನುತ ನಾರಾಚದಲಿ ಮುಸುಕಿದನರ್ಜುನಾತ್ಮಜನ ॥49॥

೦೫೦ ಎಳೆಯ ರವಿ ...{Loading}...

ಎಳೆಯ ರವಿ ರಶ್ಮೆಗಳು ರಕ್ತೋ
ತ್ಪಲದೊಳಗೆ ಹೊಳೆವಂತೆ ಹೊನ್ನರೆ
ಬಳಿದ ಹಿಳುಕನೆ ಕಾಣಲಾದುದು ಭಟನ ಕಾಯದಲಿ
ಒಲೆದು ಕೇಸರಿ ಹೊಯ್ವವೋಲ
ವ್ವಳಿಸಿ ಕರ್ಣನ ಹಯ ರಥವನ
ಪ್ಪಳಿಸಿ ಮರಳುವ ಲಾಗಿನಲಿ ಖಂಡೆಯವ ಖಂಡಿಸಿದ ॥50॥

೦೫೧ ಕರದ ಕರವಾಳುಡಿಯೆ ...{Loading}...

ಕರದ ಕರವಾಳುಡಿಯೆ ಬಿಡೆ ಹ
ಲ್ಮೊರೆದು ಭರದಲಿ ಗದೆಯ ಕೊಂಡ
ಬ್ಬರಿಸಿ ಕೋಪದಲಗಿದು ಹರಿಗೆಯ ಹಿಡಿದು ಮುಂದಣಿಗೆ
ಅರರೆ ಸಮ್ಮುಖವಾಗೆನುತ ಸಂ
ಗರದೊಳುರವಣಿಸಿದನು ಕರ್ಣನ
ತೆರಳಿಚಿದನೈನೂರು ಹಜ್ಜೆಯಲಿಂದ್ರಸುತ ಸೂನು ॥51॥

೦೫೨ ಗದೆಯ ಹೊಯ್ಲಲಿ ...{Loading}...

ಗದೆಯ ಹೊಯ್ಲಲಿ ನೊಂದು ಕೋಪದೊ
ಳದಿರೆನುತ ಸೈಗೆಡೆದ ರೋಮದ
ಹೊದರುಗಳ ಬಿಡುಗಣ್ಣ ಕೆಂಪಿನ ಕುಣಿವ ಮೀಸೆಗಳ
ಕುದಿದ ಹೃದಯದ ಕಾದ ದೇಹದ
ಕದನಗಲಿ ರವಿಸೂನು ಮೇಲಿ
ಕ್ಕಿದನು ಫಡ ಹೋಗದಿರು ಹೋಗದಿರೆನುತ ತೆಗೆದೆಚ್ಚ ॥52॥

೦೫೩ ಶರಮಯವು ಸರ್ವಾಙ್ಗವಿನ್ನೀ ...{Loading}...

ಶರಮಯವು ಸರ್ವಾಂಗವಿನ್ನೀ
ಸರಳು ನೆಡಲಿಂಬಿಲ್ಲ ಮೈಗಳೊ
ಳರಿಯನದನಭಿಮನ್ಯು ಕರ್ಣನ ಮೇಲುವಾಯಿದನು
ತರಹರಿಸಿ ಕೆಲಸಿಡಿದು ರಿಪು ಭಟ
ನುರವನುದರವನೆಡಬಲನ ಕಿ
ಬ್ಬರಿಯನೆಚ್ಚನು ಕರ್ಣ ನೂರೈವತ್ತು ಬಾಣದಲಿ ॥53॥

೦೫೪ ಸರಳು ನೆಡಲುಬ್ಬೆದ್ದು ...{Loading}...

ಸರಳು ನೆಡಲುಬ್ಬೆದ್ದು ಬೊಬ್ಬಿರಿ
ದುರವಣಿಸಿ ಬರೆ ದಿವ್ಯ ಶರದಲಿ
ಕರವೆರಡ ಹರಿಯೆಚ್ಚಡಾಗಳೆ ಕೆಡೆದವವನಿಯಲಿ
ಇರದೆ ಗಹಗಹಿಸಿದನು ಕೇಳೆಲೆ
ಮರುಳೆ ಸೂತಜ ಕೈಮುರಿಯೆ ಸಂ
ಗರದ ಸಿರಿ ಹಿಂಗುವಳೆ ತನ್ನನೆನುತ್ತ ಗರ್ಜಿಸಿದ ॥54॥

೦೫೫ ಸುರಿವ ರಕುತದ ...{Loading}...

ಸುರಿವ ರಕುತದ ಸರಿಯ ಸೆರಗಿನೊ
ಳೊರಸಿ ರಥದಚ್ಚುಗಳನೊದೆದನು
ತಿರುಹಿ ಗಾಲಿಯ ತೆಗೆದು ಮುಂಗೈಗೊಂಡು ನಡೆನಡೆದು
ಅರಿಬಲವನಿಡೆ ಮುಗ್ಗಿ ಕೆಡೆದುದು
ತುರಗವಜಿಗಿಜಿಯಾದುದಿಭ ತತಿ
ಯುರುಳಿದವು ಹೊರಳಿದವು ಹೂಣಿಗರಟ್ಟೆ ಸಮರದಲಿ ॥55॥

೦೫೬ ಹರಿಯ ಚಕ್ರದ ...{Loading}...

ಹರಿಯ ಚಕ್ರದ ಸತ್ವವೀತನ
ಧುರದೊಳಾಯ್ತೆನೆ ರಥದ ಚಕ್ರದೊ
ಳರಿಬಲವನಿಡೆ ಮುಗ್ಗಿ ಕೆಡೆದುದು ಬಹಳ ತಳತಂತ್ರ
ಬಿರುದರಾನುವರಿಲ್ಲ ಷಡುರಥ
ರುರವಣಿಯು ಹಿಂದಾಯ್ತು ರಾಯರ
ಗುರುವ ಕಂಡವರಿಲ್ಲೆನುತ ಕುರುರಾಯ ಚಿಂತಿಸಿದ ॥56॥

೦೫೭ ಮನದ ಖತಿ ...{Loading}...

ಮನದ ಖತಿ ಹೊಗರೇರೆ ದುಶ್ಶಾ
ಸನನ ಮಗನಿದಿರಾಗಿ ಖಡುಗದ
ಮೊನೆಯ ಚೂರಿಸಿ ದಂಡವಲಗೆಯ ತೊಡೆಯೊಳೊದರಿಸುತ
ತನಗೆ ಮೃತ್ಯುವ ಕರೆವವೋಲ
ರ್ಜನ ಕುಮಾರನ ಕರೆದು ಹಳಚಿದ
ನನಿಮಿಷಾವಳಿ ಪೂತು ಪಾಯ್ಕೆನೆ ಹೆಣಗಿದರು ಭಟರು ॥57॥

೦೫೮ ಗಾಲಿ ತೀರಿದವೆನ್ದು ...{Loading}...

ಗಾಲಿ ತೀರಿದವೆಂದು ಬಂದನೆ
ಕಾಳೆಗಕೆ ತಪ್ಪೇನೆನುತ ಕರ
ವಾಳಿನಾತನ ಬಗೆಯದೊಳಹೊಕ್ಕೆರಗಿದನು ಶಿರವ
ಮೇಲುವಲಗೆಯಲಣೆದು ಹಾಯ್ದನು
ಬಾಲಕನ ಘಾಯವನು ನಸು ನಗು
ತೇಳಿಸುತ ದಂಡೆಯಲಿ ಕಳೆದನು ತಿವಿದನವನುರವ ॥58॥

೦೫೯ ಕರಹತಿಗೆ ಧಡಧಡಿಸಿ ...{Loading}...

ಕರಹತಿಗೆ ಧಡಧಡಿಸಿ ತಿರ್ರನೆ
ತಿರುಗಿ ಬೀಳುತ ಧೈರ್ಯದಲಿ ಹೊಡ
ಕರಿಸಿ ಹೊರಬಿನೊಳೆದ್ದು ಹೊಯ್ದನು ಪಾರ್ಥನಂದನನ
ಅರಿ ಕೃಪಾಣದ ಘಾಯವನು ತರ
ಹರಿಸಲರಿಯದೆ ಬೀಳುತಹಿತನ
ನೆರಗಿದನು ಬಳಿಕವನಿಗೊರಗಿದರಾ ಕುಮಾರಕರು ॥59॥

೦೬೦ ಕಾಳುಕಿಚ್ಚೆದ್ದಡವಿಯನು ಕುಡಿ ...{Loading}...

ಕಾಳುಕಿಚ್ಚೆದ್ದಡವಿಯನು ಕುಡಿ
ನಾಲಗೆಯೊಳಳವಡಿಸಿ ದಳ್ಳುರಿ
ಜ್ವಾಲೆ ತಗ್ಗಿದವೋಲು ಗಗನದ ಮುಗಿಲ ಮೋಹರವ
ದಾಳಿಯಲಿಯರೆಯಟ್ಟಿ ಸುಂಟರು
ಗಾಳಿಯುರವಣೆ ನಿಂದವೊಲು ಸುರ
ಪಾಲ ತನಯನ ತನಯನಸ್ತಮಿಸಿದನು ರಣದೊಳಗೆ ॥60॥

೦೬೧ ತೋಳ ತಲೆಗಿಮ್ಬಿನಲಿ ...{Loading}...

ತೋಳ ತಲೆಗಿಂಬಿನಲಿ ಕೈದುಗ
ಳೋಳಿಗಳ ಹಾಸಿನಲಿ ತನ್ನಯ
ಕಾಲ ದೆಸೆಯಲಿ ಕೆಡೆದ ಕೌರವ ಸುತರು ನೂರ್ವರಲಿ
ಬಾಲಕನು ಬಳಲಿದನು ಸಮರದ
ಲೀಲೆಯಲಿ ಕುಣಿಕುಣಿದು ಬಸವಳಿ
ದಾಳುಗಳ ದೇವನು ಮಹಾಹವದೊಳಗೆ ಪವಡಿಸಿದ ॥61॥

೦೬೨ ಬಿಗಿದ ಹುಬ್ಬಿನ ...{Loading}...

ಬಿಗಿದ ಹುಬ್ಬಿನ ಬಿಟ್ಟ ಕಂಗಳ
ಹೊಗರು ಮೋರೆಯ ಹಿಣಿಲ ಮಂಡೆಯ
ಜಿಗಿಯ ರಕುತದ ಜೋರಿನೊಡಲಿನ ತುರುಗಿದಂಬುಗಳ
ಹೆಗಲ ಕೊಯ್ಲಿನ ತಗ್ಗಿನಲಿ ಸೈ
ನೆಗೆದ ರೋಮದ ವಿಕ್ರಮಾಗ್ನಿಯ
ತಗಹು ಬಿಡದಭಿಮನ್ಯು ಮೆರೆದನು ಶಸ್ತ್ರ ಶಯನದಲಿ ॥62॥

೦೬೩ ಸಾವ ಹರಯವೆ ...{Loading}...

ಸಾವ ಹರಯವೆ ಎನುತ ಗಗನದ
ದೇವತತಿ ಮರುಗಿತ್ತು ಶಕ್ರನ
ಸಾವಿರಾಲಿಯೊಳೊರತೆ ಮಸಗಿತು ಪೌತ್ರ ಶೋಕದಲಿ
ತಾವು ಷಡುರಥರೊಬ್ಬ ಹಸುಳೆಯ
ಹೇವವಿಲ್ಲದೆ ಕೊಂದರೋ ಸುಡ
ಲಾವ ವೀರರು ಕೌರವಾದಿಗಳೆಂದುದಮರಗಣ ॥63॥

೦೬೪ ಮಗುವು ವೇಷವ ...{Loading}...

ಮಗುವು ವೇಷವ ಧರಿಸಿ ದೂರದ
ಲಗಲಿ ಹೋಗಲು ತನ್ನ ಚಿತ್ತಕೆ
ಢಗೆಯ ಡಾವರವಾಯ್ತು ತನಗೊಳಗಾಯ್ತು ಪರಿತಾಪ
ಮಗನ ಮರಣದಲೆಂತು ಜೀವವ
ಬಗೆವಳಕಟ ಸುಭದ್ರೆಯೆನುತವೆ
ದೃಗುಜಲವ ಬೆರಳಿಂದ ಮಿಡಿದರು ಗೌರಿದೇವಿಯರು ॥64॥

೦೬೫ ಹಲವು ಗಜಗಳು ...{Loading}...

ಹಲವು ಗಜಗಳು ಸಿಂಹ ಶಿಶುವನು
ಗೆಲಿದ ಪರಿಯಂತಾಯ್ತು ಹಾವಿನ
ಬಳಗ ಗರುಡನ ಮರಿಯ ಮುರಿದವೊಲಾಯಿತಕಟೆನುತ
ಅಳಲಿದುದು ಸುರ ಕಟಕವವನಿಯೊ
ಳಿಳಿದರಪ್ಸರ ಗಣಿಕೆಯರು ಕೋ
ಮಳನ ತಂದರು ವಾಸವನ ಸಿಂಹಾಸನದ ಹೊರೆಗೆ ॥65॥

೦೬೬ ಧುರದ ಪ್ರಳಯಕೃತಾನ್ತನನು ...{Loading}...

ಧುರದ ಪ್ರಳಯಕೃತಾಂತನನು ಪರಿ
ಹರಿಸಿದೆವು ಮೃತ್ಯುವಿನ ಪಾಶದ
ಕೊರಳ ಬಳಚಿದೆವೆನುತ ಕೌರವಬಲದ ನಾಯಕರು
ಶಿರವ ತಡಹುತ ತಮ್ಮ ಶಿಬಿರಕೆ
ತಿರುಗಿದರು ಬಾಲಕನನೀಕ್ಷಿಸ
ಲರಿದು ತನಗೆಂಬಂತೆ ರವಿ ಜಾರಿದನು ಪಶ್ಚಿಮಕೆ ॥66॥

೦೬೭ ಸೋಲವರಿಗಳಿಗೆನ್ದು ಹರುಷವ ...{Loading}...

ಸೋಲವರಿಗಳಿಗೆಂದು ಹರುಷವ
ತಾಳದಿರು ಧೃತರಾಷ್ಟ್ರ ಕೃಷ್ಣನ
ಸೋಲವದು ಪಾಂಡವರು ಸೋತವರಲ್ಲ ನಂಬುವುದು
ಸೋಲವಿದು ನಾಳಿನಲಿ ಪ್ರಳಯದ
ಕಾಲ ಕೌರವಕುಲಕೆ ದಿಟವಿದು
ಸೋಲವುಂಟೇ ವೀರ ನಾರಾಯಣನ ಭಕ್ತರಿಗೆ ॥67॥

+೦೬ ...{Loading}...