೦೨

೦೦೦ ಸೂ ಭೀಮ ...{Loading}...

ಸೂ. ಭೀಮ ವಿಕ್ರಮಕುರುಬಲದೊಳು
ದ್ದಾಮ ಕರ್ಣಾಹವದೊಳಗ್ಗದ
ಕ್ಷೇಮಧೂರ್ತಿ ನೃಪಾಲಕನ ಕೆಡಹಿದನು ಕಲಿಭೀಮ

೦೦೧ ಮಗನು ದಳಪತಿಯಾದ ...{Loading}...

ಮಗನು ದಳಪತಿಯಾದ ಗಡ ಕಾ
ಳೆಗವ ನೋಡುವೆನೆಂಬವೊಲು ಜಗ
ದಗಲದಲಿ ನೆರೆ ಕಡಿತವಿಕ್ಕಿತು ತಿಮಿರವನದೊಳಗೆ
ಹೊಗರು ಕುವಳಯಕಳಿಯೆ ಸೊಂಪಿನ
ನಗೆ ಸರೋರುಹಕೊಗೆಯೆ ವಿರಹದ
ಢಗೆ ರಥಾಂಗದೊಳಳಿಯೆ ರವಿಯುದಯಾಚಳಕೆ ಬಂದ ॥1॥

೦೦೨ ಸೂಳು ಮಿಗಲಳ್ಳಿರಿದವುರು ...{Loading}...

ಸೂಳು ಮಿಗಲಳ್ಳಿರಿದವುರು ನಿ
ಸ್ಸಾಳಕೋಟಿಗಳುದಯದಲಿ ದಿಗು
ಜಾಲ ಜರಿಯಲು ಝಾಡಿಗೆದರುವ ಗೌರುಗಹಳೆಗಳ
ತೂಳುವರೆಗಳ ರಾಯ ಗಿಡಿಗನ
ಘೋಳ ಘೋರದ ಘೋಷವವನಿಯ
ಸೀಳೆ ನಡೆದುದು ಸೇನೆ ರವಿನಂದನನ ನೇಮದಲಿ ॥2॥

೦೦೩ ಮೋಹರಿಸಿತಿದು ನಡೆದು ...{Loading}...

ಮೋಹರಿಸಿತಿದು ನಡೆದು ಮಕರ
ವ್ಯೂಹದಲಿ ಬಳಿಕರ್ಧಚಂದ್ರ
ವ್ಯೂಹದಲಿ ಬಂದೊಡ್ಡಿ ನಿಂದುದು ಪಾಂಡುಸುತಸೇನೆ
ಮೋಹರಿಸಲೊಡವೆರಸಿ ಹೊಯ್ದರು
ಗಾಹುಗತಕವನುಳಿದು ಚೂಣಿಯ
ಸಾಹಸಿಗರು ಸನಾಮರೊದಗಿದರೆರಡು ಥಟ್ಟಿನಲಿ ॥3॥

೦೦೪ ಹೊಯ್ದು ಮುಗ್ಗಿತು ...{Loading}...

ಹೊಯ್ದು ಮುಗ್ಗಿತು ಭಟರು ವೆಗ್ಗಳ
ಕೈದುಕಾರರು ತಲೆಗೆ ಸಂದರು
ಮೈದೆಗೆಯದೊಡವೆರಸಿ ಹೊಕ್ಕರು ಬೇಹಬೇಹವರು
ಕೊಯ್ದ ಕೊರಳಿನ ಕೊರೆದ ತೋಳಿನ
ಹಾಯ್ದ ಮೂಳೆಯ ಸುರಿವ ಕರುಳಿನ
ಲೆಯ್ದೆ ಪಡೆಗೇರಾಯ್ತು ಚೂಣಿಯ ಚಾತುರಂಗದಲಿ ॥4॥

೦೦೫ ಇನ್ದು ಬರಹೇಳರ್ಜುನನ ...{Loading}...

ಇಂದು ಬರಹೇಳರ್ಜುನನ ರಣ
ವಿಂದಲೇ ಭೀಮಂಗೆ ಮನದಲಿ
ಕಂದುಕಸರಿಕೆ ಬೇಡ ಕಾದಲಿ ಧರ್ಮನಂದನನು
ಹಿಂದೆ ನಂಬಿಸಿ ಭೀಷ್ಮಗುರುವನು
ಕೊಂದ ಗೆಲುವಿನಲುಬ್ಬ ಬೇಡೆಮ
ಗಿಂದು ದಳವಾಯ್ ಕರ್ಣನೆಂದುದು ಭಟರು ಬೊಬ್ಬಿರಿದು ॥5॥

೦೦೬ ತೇರು ಬಿಟ್ಟವು ...{Loading}...

ತೇರು ಬಿಟ್ಟವು ಸೂಠಿಯಲಿ ಜ
ಜ್ಝಾರ ರಾವ್ತರು ವಾಘೆ ಸರಿಸದ
ಲೇರಿದರು ಕಾರ್ಮುಗಿಲ ಬಲವೆನೆ ಕವಿದವಾನೆಗಳು
ಆರಿದರೆ ನೆಲ ಬಿರಿಯೆ ಬೆರಸಿತು
ಪೌರಕರು ಸಬಳಿಗರು ಬಿಲ್ಲಿನ
ಭೂರಿ ಭಟರಳ್ಳಿರಿದು ಕೆಣಕಿತು ಕೆದರಿ ರಿಪುಬಲವ ॥6॥

೦೦೭ ಮುರಿಯದಹಿತರ ಥಟ್ಟು ...{Loading}...

ಮುರಿಯದಹಿತರ ಥಟ್ಟು ನಮ್ಮದು
ತೆರಹುಗೊಡದೌಂಕಿತ್ತು ದೊರೆಗಳು
ಹೊರಗೆ ಲಗ್ಗೆಯ ಮಾಡಿ ತೋರಿದರೊಡನೆ ಪಡಿಬಲವ
ಉರುಬಿದರು ವೃಷಸೇನ ಸೌಬಲ
ಗುರುಜ ಕೃಪ ಕೃತವರ್ಮ ದುರ್ಮುಖ
ವರ ವಿಕರ್ಣ ಕ್ಷೇಮಧೂರ್ತಿ ಬೃಹದ್ರಥಾದಿಗಳು ॥7॥

೦೦೮ ಸೂತಸುತ ದಳಪತಿಯೆ ...{Loading}...

ಸೂತಸುತ ದಳಪತಿಯೆ ಫಡ ಮು
ಯ್ಯಾಂತರೇ ಮುಂಬಿಗರು ಬಿರುದಿನ
ಬೂತುಗಳ ಬೊಬ್ಬಾಟ ಬಿಡದೇ ಕಂಡು ಕಾಣರಲ
ಸೋತ ಸಮರದ ಕೇಣಿಕಾರರು
ಕೂತರೋ ಜಯಸಿರಿಗೆ ಹೊಯ್‍ಹೊ
ಯ್ಯೀತಗಳನೆನುತೇರಿದರು ಪಾಂಡವ ಮಹಾರಥರು ॥8॥

೦೦೯ ನೂಕಿತೊನ್ದೇ ವಾಘೆಯಲಿ ...{Loading}...

ನೂಕಿತೊಂದೇ ವಾಘೆಯಲಿ ರಥ
ನಾಕು ಸಾವಿರ ಬಲುಗುದುರೆ ಹದಿ
ನಾಕುಸಾವಿರ ನೂರು ಕರಿಘಟೆ ಲಕ್ಕ ಪಾಯದಳ
ಜೋಕೆ ಜವಗೆಡೆ ಮುರಿವಡೆದು ಬಲ
ದಾಕೆವಾಳರು ಸರಿಯೆ ಸೋಲದ
ನೂಕು ನೂಕಾಯಿತ್ತು ಕೌರವರಾಯ ಸೇನೆಯಲಿ ॥9॥

೦೧೦ ಫಡಫಡೆತ್ತಲು ಸ್ವಾಮಿದ್ರೋಹರು ...{Loading}...

ಫಡಫಡೆತ್ತಲು ಸ್ವಾಮಿದ್ರೋಹರು
ಸಿಡಿದರೋ ನಿಜಕುಲದ ಬೇರ್ಗಳ
ಕಡಿದರೋ ಕುರುಬಲದ ಕಾಹಿನ ಪಟ್ಟದಾನೆಗಳು
ಕೊಡನ ಫಣಿಯಿದು ಪಾಂಡವರ ಬಲ
ತುಡುಕಬಹುದೇ ಎನುತ ಸೇನೆಯ
ತಡೆದು ನಿಂದನು ಕ್ಷೇಮಧೂರ್ತಿ ಸಹಸ್ರಗಜಸಹಿತ ॥10॥

೦೧೧ ತರಿಸಿ ಲೋಹದ ...{Loading}...

ತರಿಸಿ ಲೋಹದ ಜತ್ತರಟ್ಟವ
ಹರಹಿದರು ಸೂಲಿಗೆಯ ಬಂಡಿಯ
ನಿರಿಸಿದರು ಕೆಲಬಲದ ಕಡೆಯಲಿ ಸಬಳಿಗರ ನಿಲಿಸಿ
ತುರಗ ರಥ ಬಲ್ಲಾಳನೊತ್ತಾ
ಗಿರಿಸಿ ಲಗ್ಗೆಯ ಲಹರಿಯಲಿ ಮೋ
ಹರಿಸಿದರು ಪಾಂಚಾಲ ಕೈಕೆಯರವರ ಥಟ್ಟಿನಲಿ ॥11॥

೦೧೨ ನೀಡಿ ಬರಿಕೈಗಳಲಿ ...{Loading}...

ನೀಡಿ ಬರಿಕೈಗಳಲಿ ಸೆಳೆದೀ
ಡಾಡಿದವು ಬಂಡಿಗಳನೌಕಿದ
ಕೋಡ ಕೈಯಲಿ ಸಬಳಿಗರ ಸೀಳಿದವು ದೆಸೆದೆಸೆಗೆ
ಹೂಡು ಜಂತ್ರದ ಜತ್ತರಟ್ಟವ
ನಾಡಲೇತಕೆ ಹಿಂದಣೊಡ್ಡನು
ಝಾಡಿಸಿದವೀ ಕ್ಷೇಮಧೂರ್ತಿನೃಪಾಲನಾನೆಗಳು ॥12॥

೦೧೩ ರಾಯದಳ ಕಳವಳಿಸೆ ...{Loading}...

ರಾಯದಳ ಕಳವಳಿಸೆ ಗಜಘಟೆ
ಘಾಯಘಾಯಕೆ ನೆಲನ ಕೊಂಡವು
ಹಾಯಿದವು ರಥ ಹಯವ ಸೆಳೆದವು ಹೊದರ ಹರೆಗಡಿದು
ನಾಯಕರ ಕೆಡೆನುಡಿವ ಬೈಗುಳ
ಬಾಯ ಬೊಬ್ಬೆಯ ಕೈಯ ಹೊಯ್ಗುಳ
ದಾಯಿಗರಲೇ ಎನುತ ಮೂದಲಿಸಿದರು ತಮ್ಮೊಳಗೆ ॥13॥

೦೧೪ ಕೆದರಿತರನೆಲೆ ರಾಯ ...{Loading}...

ಕೆದರಿತರನೆಲೆ ರಾಯ ಥಟ್ಟನು
ಕೆದರಿಸಿದವಾನೆಗಳು ಹಗೆಗಳ
ಮದಮುಖಕೆ ಮಾರೊಡ್ಡ ಮೆರೆದರೆ ಪೂತುರೇ ಎನುತ
ತುದಿವೆರಳ ತುಟಿಯಬ್ಬರಕೆ ಗಜ
ಬೆದರೆ ಗಜರೋಹಕರ ಗರ್ಜಿಸಿ
ಗದೆಯ ತಿರುಹುತ ಹೊಕ್ಕನಿವರೊಡ್ಡಿನಲಿ ಕಲಿಭೀಮ ॥14॥

೦೧೫ ಗರುಡನೂರವರೆರೆವರೇ ನಾ ...{Loading}...

ಗರುಡನೂರವರೆರೆವರೇ ನಾ
ಗರಿಗೆ ತನಿಯನು ಭೀಮಸೇನನ
ಬಿರುದಿನೋಲೆಯಕಾರರೇನಂಜುವರೆ ಮಾರ್ಬಲಕೆ
ಕರಿಘಟೆಯ ಕೆದರಿದರು ಕೇಣದ
ಧುರವ ಬಲ್ಲರೆ ಗಜದ ಕರುಳಲಿ
ಕರುಳ ತೊಡಕಲು ಬಿದ್ದುದೈಸಾವಿರ ಮಹಾರಥರು ॥15॥

೦೧೬ ಮುಙ್ಗುಡಿಯ ಮುರಿದೌಕಿ ...{Loading}...

ಮುಂಗುಡಿಯ ಮುರಿದೌಕಿ ಭೀಮಂ
ಗಂಘವಿಸಿದನು ಕ್ಷೇಮಧೂರ್ತಿ ಮ
ತಂಗಜದ ಮೇಲೆಸುತ ಬಲುನಾರಾಚ ಸೋನೆಯಲಿ
ಅಂಘವಣೆಯಹುದೋ ಮಹಾದೇ
ವಂಗೆ ನೂಕದು ಪೂತು ಮಝರೆಯ
ಭಂಗನೋ ನೀನೆನುತ ಮೂದಲಿಸಿದನು ಕಲಿಭೀಮ ॥16॥

೦೧೭ ಮೇಲುವಾಯ್ದಾರೋಹಕರ ಹಿಂ ...{Loading}...

ಮೇಲುವಾಯ್ದಾರೋಹಕರ ಹಿಂ
ಗಾಲ ಹಿಡಿದೀಡಾಡಿ ರಿಪುಗಜ
ಜಾಲದೊಳಗೊಂದಾನೆಯನು ತಾನೇರಿ ಬೊಬ್ಬಿರಿದು
ಘೀಳಿಡುವ ಕರಿ ಕೆದರಲಂಕುಶ
ವಾಳೆ ನೆತ್ತಿಯನಗೆದು ದಂತಿಯ
ತೂಳಿಸಿದನಾ ಕ್ಷೇಮಧೂರ್ತಿಯ ಗಜದ ಸಮ್ಮುಖಕೆ ॥17॥

೦೧೮ ಇದು ವಿನೋದವಲೇ ...{Loading}...

ಇದು ವಿನೋದವಲೇ ಮದೀಯಾ
ಭ್ಯುದಯವಿದಲೇ ನಮ್ಮ ಕೋಪವ
ನಿದಿರುಗೊಂಡವನಿವನಲೇ ಎನುತೆಚ್ಚನಾ ಭೀಮ
ಸದೆಗ ನೀ ಸಾರೆಲವೊ ಭಾರಿಯ
ಮದಗಜದ ಬಡಿಹೋರಿ ಹೋಗೆನು
ತೊದರಿ ಭೀಮನ ಮುಸುಕಿದನು ನಾರಾಚಸೋನೆಯಲಿ ॥18॥

೦೧೯ ಆಗಲೀ ನಾಲಗೆಯ ...{Loading}...

ಆಗಲೀ ನಾಲಗೆಯ ಸಾಲವ
ನೀಗ ಕೈಯಲಿ ತಿದ್ದಿ ಕೊಡುವರೆ
ಹೋಗದೇ ಹೊತ್ತಿಹವೆ ಹೇಳೆನುತೆಚ್ಚನಾ ಭೀಮ
ಆಗಳಾವುದು ನೆಲನು ನಭ ದಿಗು
ಭಾಗವೆಲ್ಲಿಯದೆನಲು ಕಣೆಗಳ
ತೂಗಿ ತುರುಗಿದವರಿಭಟನ ಕರಿಘಟೆಯ ಮೈಗಳಲಿ ॥19॥

೦೨೦ ಸರಳ ಮಳೆಯಲಿ ...{Loading}...

ಸರಳ ಮಳೆಯಲಿ ನನೆದು ಕರಿಘಟೆ
ಯುರುಳಿದವು ಕಲ್ಪಾಂತವರುಷದೊ
ಳುರುಳುವದ್ರಿಗಳಂತೆಯೆಸೆದವು ವೈರಿದಂತಿಗಳು
ಎರಡು ಸೀಳಾಯ್ತವನ ಕರಿ ಧರೆ
ಗಿರದೆ ದೊಪ್ಪನೆ ಹಾಯ್ದು ಖಾತಿಯೊ
ಳುರವಣಿಸಿದನು ಕ್ಷೇಮಧೂರ್ತಕ ಸೆಳೆದಡಾಯುಧದಿ ॥20॥

೦೨೧ ಕುಣಿದು ಪುಟನೆಗೆದರಿ ...{Loading}...

ಕುಣಿದು ಪುಟನೆಗೆದರಿ ಗಜವ ಹೊ
ಯ್ದಣೆದು ಹಿಂಗದ ಮುನ್ನ ತಲೆ ಮೇ
ಲಣಿಗೆ ಚಿಗಿದುದು ಮುಂಡ ನಡೆದುದು ನೂರು ಹಜ್ಜೆಯನು
ಬಣಗು ನೀನಕಟಕಟ ಭೀಮನ
ಕೆಣಕಿ ಬದುಕಿದೆಯೆನುತಲಪ್ಸರ
ಗಣಿಕೆಯರು ನಗುತವನ ಕೊಂಡೊಯ್ದರು ವಿಮಾನದಲಿ ॥21॥

+೦೨ ...{Loading}...