೦೫

೦೦೦ ಸೂ ವೈರಿ ...{Loading}...

ಸೂ. ವೈರಿ ವಿಜಯಕೆ ತ್ರಿಪುರ ದಹನದ
ಚಾರು ಕಥನವನರುಹಿ ಶಲ್ಯನ
ಸಾರಥಿಯ ಮಾಡಿದನು ಕರ್ಣಗೆ ಕೌರವರರಾಯ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ದಿನವೊಂದಾಯ್ತು ಕರ್ಣನ
ಕಾಳೆಗದೊಳಲ್ಲಿಂದಮೇಲಣ ವರ ಕಥಾಮೃತವ
ಕೇಳಲಿಚ್ಛೈಸಿದ ಗತಾಕ್ಷನೃ
ಪಾಲಕಗೆ ವಿಸ್ತರಿಸಿ ಸಂಜಯ
ಹೇಳಿದನು ಬಳಿಕೆರಡನೆಯ ದಿವಸದ ರಣೋತ್ಸವವ ॥1॥

೦೦೨ ಹೊಗಳಿ ಕೆಲವರ ...{Loading}...

ಹೊಗಳಿ ಕೆಲವರ ಹೊಳ್ಳುಗಳೆವುತ
ನಗುತ ಕೆಲವರನವರ ಮೋಹರ
ತೆಗೆದು ಹೋಯಿತು ಬಂದುದಿದು ತಂತಮ್ಮ ಪಾಳಯಕೆ
ಹೊಗಳುಭಟ್ಟರ ಸಾಲ ಕೈದೀ
ವಿಗೆಯ ಕಹಳಾರವದ ಲಗ್ಗೆಯ
ಬಿಗುಹಿನಲಿ ಕುರುರಾಯ ಬಂದನು ರಾಜಮಂದಿರಕೆ ॥2॥

೦೦೩ ಗುಳವನಿಳುಹಿದವಾನೆಗಳು ಹ ...{Loading}...

ಗುಳವನಿಳುಹಿದವಾನೆಗಳು ಹ
ಲ್ಲಳವ ಬಿಡೆ ಭುಲ್ಲೈಸಿದವು ಹಯ
ಕುಳ ವರೂಥವನಿಳಿದು ಸೂತರು ನಿಲಿಸಿದರು ರಥವ
ಕಳಚಿ ಸೀಸಕ ಜೋಡು ಕೈದುವ
ನಿಳುಹಿ ಸಮರ ಶ್ರಮವ ನಿಮಿಷಕೆ
ನಿಳಯ ವೇದಿಯಲಿದ್ದು ಕಳೆದುದು ಕೂಡೆ ಪರಿವಾರ ॥3॥

೦೦೪ ಘಾಯವಡೆದಾನೆಗಳು ಗುಳವನು ...{Loading}...

ಘಾಯವಡೆದಾನೆಗಳು ಗುಳವನು
ಹಾಯಿಕಲು ನೆಲಕುರುಳಿದವು ವಾ
ನಾಯುಜಂಗಳು ಬಿಗುಹ ಬಿಡೆ ದೊಪ್ಪೆಂದವಾಚೆಯಲಿ
ಘಾಯದಲಿ ಮುರಿದಂಬನುಗುಳಿದು
ಸಾಯದಿಹರೇ ಭಟರು ಗಜ ಹಯ
ಲಾಯ ಹತ್ತೊಂದಾಗಿ ಹೆಚ್ಚಿತು ಕೌರವೇಶ್ವರನ ॥4॥

೦೦೫ ಬನ್ದುದಿರುಳೋಲಗಕೆ ರಾಯನ ...{Loading}...

ಬಂದುದಿರುಳೋಲಗಕೆ ರಾಯನ
ಮಂದಿ ದಳಪತಿ ಶಕುನಿ ಕೃಪ ಗುರು
ನಂದನಾದಿಪ್ರತತಿ ಸಚಿವ ಪಸಾಯಿತರು ಸಹಿತ
ಇಂದಿನಾಹವದೊಳಗೆ ಕುಂತೀ
ನಂದನರ ಬೊಬ್ಬಾಟ ಬಲುಹಾ
ಯ್ತೆಂದು ಮೆಲ್ಲನೆ ಮಾತ ತೆಗೆದನು ಕೌರವರ ರಾಯ ॥5॥

೦೦೬ ಬಲುಹಲೇ ಬಳಿಕೇನು ...{Loading}...

ಬಲುಹಲೇ ಬಳಿಕೇನು ಹಗೆಯ
ಗ್ಗಳಿಕೆ ಮೆರೆಯದೆ ಮುರವಿರೋಧಿಯ
ಬಲುಹ ಹೇಳಾ ಪಾರ್ಥನೆಂಬವನಾವ ಮಾನಿಸನು
ಬಲುಹು ಸಾರಥಿಯಿಂದ ರಿಪುಗಳ
ಗೆಲವು ಸಾರಥಿಯಿಂದ ಸಾರಥಿ
ಯೊಲಿದಡೇನೇನಾಗದೆಂದನು ಭೂಪತಿಗೆ ಕರ್ಣ ॥6॥

೦೦೭ ಭಾರಿ ಧನುವಿದ್ದೇನು ...{Loading}...

ಭಾರಿ ಧನುವಿದ್ದೇನು ತೋಳಿನ
ತೋರದಲಿ ಫಲವೇನು ಕೈದುಗ
ಳಾರನಂಜಿಸಲಾಪವಾಹವರಂಗ ಮಧ್ಯದಲಿ
ಸಾರಥಿಯ ಬಲುಹಿಲ್ಲದಿರ್ದಡೆ
ಭೂರಿ ಸಾಧನವಿವು ನಿರರ್ಥಕ
ವಾರಿಗುಸುರುವೆ ತನ್ನ ಕೊರತೆಯನೆಂದನಾ ಕರ್ಣ ॥7॥

೦೦೮ ತೃಣಕೆ ಕೊಮ್ಬೆನೆ ...{Loading}...

ತೃಣಕೆ ಕೊಂಬೆನೆ ಫಲುಗುಣನ ಕಣೆ
ಗಿಣೆಯನಾ ಸಾರಥಿಯ ಕೈ ಮೈ
ಗುಣವಲೇ ಗರುವಾಯಿಗೆಡಿಸಿತು ನಮ್ಮ ಮೋಹರವ
ರಣದೊಳೆನಗತಿಶಯದ ಸಾರಥಿ
ಮಣಿದನಾದಡೆ ನಾಳೆ ಹೆಣದೌ
ತಣದಲುಣ ಬಡಿಸುವೆನು ಜಂಬುಕಕಾಕಸಂತತಿಗೆ ॥8॥

೦೦೯ ಲೇಸನಾಡಿದೆ ಕರ್ಣ ...{Loading}...

ಲೇಸನಾಡಿದೆ ಕರ್ಣ ನಿನಗಿ
ನ್ನೈಸಲೇ ಸಾರಥಿಯ ಕೊರತೆ ಸು
ರಾಸುರರ ಥಟ್ಟಿನಲಿ ತೊಡಕುವರಾರು ನಿನ್ನೊಡನೆ
ಈ ಸಮಸ್ತ ನೃಪಾಲ ವರ್ಗದೊ
ಳಾಸೆಯಾರಲಿ ಸೂತ ಕರ್ಮಾ
ಭ್ಯಾಸಿಯನು ಜೋಡಿಸುವೆನೆಂದನು ಕೌರವರರಾಯ ॥9॥

೦೧೦ ಹಲವು ಮಾತೇನರಸ ...{Loading}...

ಹಲವು ಮಾತೇನರಸ ನುಡಿದುದು
ಫಲಿಸಲರಿಯದು ದೈವಗತಿಯಲಿ
ಫಲಿಸಿತಾದಡೆ ರಾಜ್ಯಲಕ್ಷಿ ್ಮಗೆ ಸೂಳೆತನವಹುದೆ
ಸುಲಭವಾದಡೆ ಮಾದ್ರರಾಜನ
ತಿಳುಹಿ ಸೈರಿಸು ರಿಪುಗಳೈವರ
ತಲೆಗೆ ಹಾಯಿಕು ಸಂಚಕಾರವನೆಂದನಾ ಕರ್ಣ ॥10॥

೦೧೧ ಉಬ್ಬಿದನು ರೋಮಾಞ್ಚ ...{Loading}...

ಉಬ್ಬಿದನು ರೋಮಾಂಚ ಮೆಯ್ಯಲಿ
ಹಬ್ಬಿದುದು ಹೊರೆಯೇರಿ ಮರವೆಯ
ಮಬ್ಬು ಕವಿದುದು ಕರ್ಣನಾಡಿದ ಮಾತ ಸವಿಸವಿದು
ಟೆಬ್ಬರಿಸುವಿಂದ್ರಿಯ ತುರಂಗದ
ಕಬ್ಬಿ ಕಳಚಿತು ಕೌರವೇಂದ್ರನು
ಸರ್ಬಲಗ್ಗೆಯ ಹರುಷದಲಿ ಹೊರವಂಟನರಮನೆಯ ॥11॥

೦೧೨ ಹರಿದರರಸಾಳುಗಳು ರಾಯನ ...{Loading}...

ಹರಿದರರಸಾಳುಗಳು ರಾಯನ
ಬರವನೀತಂಗರುಹಿದರು ಕಡು
ಹರುಷದಲಿ ಕಲಿ ಶಲ್ಯ ಹೊರವಂಟನು ನಿಜಾಲಯವ
ಅರಸುಮಕ್ಕಳ ವಜ್ರಮಣಿಯಾ
ಭರಣ ಕಿರಣ ಸ್ತೋಮ ದೀಪ
ಸ್ಫುರಿತ ಜನಮಧ್ಯದಲಿ ಕಂಡನು ಕೌರವೇಶ್ವರನ ॥12॥

೦೧೩ ಅನ್ದಣವನಿಳಿದರಸನಾತಗೆ ...{Loading}...

ಅಂದಣವನಿಳಿದರಸನಾತಗೆ
ವಂದಿಸಿದನಾ ಮಾದ್ರಪತಿ ಸಾ
ನಂದದಲಿ ತೆಗೆದಪ್ಪಿ ತಂದನು ರಾಜಮಂದಿರಕೆ
ಇಂದಿದೇನಿದ್ದಿದ್ದು ನೀನೇ
ಬಂದ ಕಾರ್ಯ ವಿಶೇಷವೇನುಂ
ಟೆಂದು ಕೌರವರಾಯನನು ಬೆಸಗೊಂಡನಾ ಶಲ್ಯ ॥13॥

೦೧೪ ಏನ ಹೇಳುವೆ ...{Loading}...

ಏನ ಹೇಳುವೆ ನಮ್ಮ ಪುಣ್ಯದ
ಹಾನಿಯನು ನುಗ್ಗಾಯ್ತು ಬಲ ಸು
ಮ್ಮಾನ ಬೀತುದು ಬಿರುದರಿಗೆ ಕಾಲೂರಿತಪಮಾನ
ಜೈನ ದೀಕ್ಷೆಯ ಹಿಡಿದುದೆನ್ನ ಸ
ಮಾನ ಸುಭಟರು ಜಯಸಿರಿಯ ಸಂ
ಧಾನ ಮುರಿದುದು ಮಾವ ನಿಮಗಜ್ಞಾತವೇನೆಂದ ॥14॥

೦೧೫ ಸಮರಜಯಸಾಧಕರು ಮನ್ತ್ರ ...{Loading}...

ಸಮರಜಯಸಾಧಕರು ಮಂತ್ರ
ಭ್ರಮಿತರಾಯ್ತಪಜಯವಧೂ ವಿ
ಭ್ರಮ ಕಟಾಕ್ಷದ ಘಾಯದಲಿ ಕಳವಳಿಸದವರಾರು
ಸಮತೆಯಾಯಿತು ತವಕಿಗಳಿಗು
ದ್ಭ ್ರಮಿಗಳಿಗೆ ತಿಳಿವಾಯ್ತು ವಾಸಿಯ
ಮಮತೆಯವರು ವಿರಕ್ತರಾದರು ಮಾವ ಕೇಳ್ ಎಂದ ॥15॥

೦೧೬ ಮುರಿವಡೆದು ಕಲಿ ...{Loading}...

ಮುರಿವಡೆದು ಕಲಿ ಭೀಷ್ಮನೇ ಕು
ಕ್ಕರಿಸಿದನು ದ್ರೋಣಂಗೆ ಬಂದುದ
ನರುಹಲೇತಕೆ ಬಳಿಕ ಕರ್ಣನ ವೀರಪಟ್ಟದಲಿ
ನೆರವಣಿಗೆಯುಂಟಾದಡೊಂದೇ
ಕೊರತೆಯಿದು ನಿಮ್ಮಿಂದ ಕಡೆಯಲಿ
ನೆರತೆಯಹುದಿನ್ನುತ್ತರೋತ್ತರ ಸಿದ್ಧಿ ಬಳಿಕೆಂದ ॥16॥

೦೧೭ ದ್ರೋಣ ಭೀಷ್ಮರವೋಲು ...{Loading}...

ದ್ರೋಣ ಭೀಷ್ಮರವೋಲು ನೆಟ್ಟನೆ
ಹೂಣಿಗರು ರಾಧೇಯ ಮಾದ್ರ
ಕ್ಷೋಣಿಪತಿಯೆಂದೆಂಬ ನುಡಿಯುಂಟೆರಡು ಥಟ್ಟಿನಲಿ
ಕೇಣವಿಲ್ಲದ ರಥಗತಿಯ ಬಿ
ನ್ನಾಣವನು ತೋರಿದಡೆ ತನ್ನಯ
ಗೋಣಿಗೊಡ್ಡಿದ ಕೈದುವನು ನೀ ತೆಗೆಸಿದವನೆಂದ ॥17॥

೦೧೮ ಬರಿದೆ ಬೋಳೈಸದಿರು ...{Loading}...

ಬರಿದೆ ಬೋಳೈಸದಿರು ಕಾರ್ಯದ
ಹೊರಿಗೆಯೇನದ ಹೇಳು ಮೇಗಡೆ
ಮೆರೆವವರು ನಾವಲ್ಲ ನುಡಿಯಾ ಬಯಲ ಡೊಂಬೇಕೆ
ಅರುಹು ಕೇಳುವೆನೆನಲು ಶಲ್ಯನ
ಬಿರುನುಡಿಗೆ ಬೆಚ್ಚದೆ ಮಹೀಪತಿ
ಯರಿವು ತಪ್ಪದೆ ಬಿನ್ನವಿಸಿದನು ಮಾದ್ರ ರಾಜಂಗೆ ॥18॥

೦೧೯ ಮಾವ ಸಾರಥಿಯಾಗಿ ...{Loading}...

ಮಾವ ಸಾರಥಿಯಾಗಿ ಕರ್ಣನ
ನೀವು ಕೊಂಡಾಡಿದಡೆ ಫಲುಗುಣ
ನಾವ ಪಾಡು ಸುರಾಸುರರ ಕೈಕೊಂಬನೇ ಬಳಿಕ
ಆವುದೆಮಗಭ್ಯುದಯವದ ನೀ
ನಾವ ಪರಿಯಲಿ ಮನ್ನಿಸಿದಡರೆ
ಜೀವ ಕೌರವ ವಂಶವೇ ಸಪ್ರಾಣಿಸುವುದೆಂದ ॥19॥

೦೨೦ ಕೇಳಿದನು ಕುರುಪತಿಯ ...{Loading}...

ಕೇಳಿದನು ಕುರುಪತಿಯ ಮಾತಿನ
ಗಾಳಿ ತುಡುಕಿತು ಮನದ ರೋಷ
ಜ್ವಾಲೆಯನು ಮೀಸೆಗಳು ಕುಣಿದವು ಕಾಯ ಕಂಪಿಸಿತು
ಮೇಲು ಮೂಗಿನ ಬೆರಳ ಕಡುಗಾ
ದಾಲಿಗಳ ಮಣಿಮಕುಟದೊಲಹಿನ
ನಾಲಗೆಯ ನಿದ್ರ್ರವದ ಮಾದ್ರಾಧೀಶನಿಂತೆಂದ ॥20॥

೦೨೧ ಖೂಳನೆಮ್ಬೆನೆ ನೀ ...{Loading}...

ಖೂಳನೆಂಬೆನೆ ನೀ ಸಮಸ್ತ ಕ
ಳಾಳಿ ನಿಪುಣನು ಬಾಲನೆಂಬೆನೆ
ಮೇಲೆ ಪಲಿತದ ಬೀಡು ಬಿಟ್ಟಿದೆ ತಳಿತ ತನುವಿನಲಿ
ಹೇಳು ಹೇಳಿನ್ನೊಮ್ಮೆ ನುಡಿ ನುಡಿ
ಕೇಳುವೆನು ಕಿವಿಯಾರೆ ಕರ್ಣನ
ಕಾಳೆಗಕೆ ನಾವ್ ಸಾರಥಿಗಳೇ ಶಿವಶಿವಾ ಎಂದ ॥21॥

೦೨೨ ತಾರತಮತೆಯ ಬಲ್ಲೆ ...{Loading}...

ತಾರತಮತೆಯ ಬಲ್ಲೆ ಪುರುಷರ
ಚಾರುಚರಿತವನರಿವೆ ಸುಭಟರ
ವೀರ ವೃತ್ತಿಯ ಬಲ್ಲೆ ಮಾನ್ಯರ ಮೈಸಿರಿಯ ತಿಳಿವೆ
ಆರವನು ರಾಧೇಯ ದಿಟ ನಾ
ವಾರವರು ನಮ್ಮಂತರವ ನೀ
ನಾರ ಕೈಯಲಿ ಕೇಳಿದರಿಯಾ ಶಿವಶಿವಾ ಎಂದ ॥22॥

೦೨೩ ಖೂಳನನು ಹಿಡಿತನ್ದು ...{Loading}...

ಖೂಳನನು ಹಿಡಿತಂದು ಧರಣೀ
ಪಾಲರಲಿ ಸರಿಮಾಡಿ ರಾಜ್ಯದ
ಮೇಲೆ ನಿಲಿಸಿದೆ ಬಳಿಕ ಬಂದುದು ಖೂಳತನ ನಿನಗೆ
ಕೀಳು ಮೇಲಿನ ಸೀಮೆ ನಿನ್ನಲಿ
ಬೀಳುಕೊಂಡುದು ಸಾಕು ನಮಗಿ
ನ್ನಾಳುತನವೇಕೆನುತ ಧಿಮ್ಮನೆ ನಿಂದನಾ ಶಲ್ಯ ॥23॥

೦೨೪ ಒಡನೆ ನಿನ್ದನು ...{Loading}...

ಒಡನೆ ನಿಂದನು ಸೆರಗ ಹಿಡಿದವ
ಗಡಿಸಲೇಕಿನ್ನೆನುತ ಗುಣದಲಿ
ನುಡಿದು ಕುಳ್ಳಿರಿಸಿದನು ಸಂತೈಸಿದನು ವಿನಯದಲಿ
ನುಡಿಗೆ ಕೋಪಿಸಲೇಕೆ ಮನವೊಡ
ಬಡುವುದೇ ಕೈಕೊಂಬುದಲ್ಲದ
ಡೊಡೆಯರುಂಟೇ ನಿಮಗೆ ಎಂದನು ಕೌರವರ ರಾಯ ॥24॥

೦೨೫ ಅರುಣ ಸಾರಥಿ ...{Loading}...

ಅರುಣ ಸಾರಥಿ ಭುವನಕಾರ್ಯದ
ಧುರವ ಹೊರನೇ ಕೃಷ್ಣನಲ್ಲಾ
ನರನ ಸಾರಥಿಯಾಗನೇ ಪರಕಾರ್ಯದನುವರಿದು
ಹರನ ಸಾರಥಿ ಕಮಲಸಂಭವ
ಸುರರ ಕಾರ್ಯಕ್ಕೊದಗನೇ ಸ
ತ್ಪುರುಷರೇ ಪರಕಾರ್ಯನಿಷ್ಠರು ಕೋಪವೇಕೆಂದ ॥25॥

೦೨೬ ಸವರಿದರು ಕುರು ...{Loading}...

ಸವರಿದರು ಕುರು ವಂಶವನು ಪಾಂ
ಡವರು ಸಕಲ ಮಹಾರಥರು ಸಲೆ
ಸವೆದುದಿಲ್ಲಿ ನದೀಸುತ ದ್ರೋಣಾದಿಗಳು ಸಹಿತ
ಅವರೊಳಳಿದವರಿಬ್ಬರೇ ನೀ
ವವಸರಕೆ ಸಾರಥ್ಯವನು ನಿ
ಮ್ಮವರ ಮೇಲನುರಾಗವುಳ್ಳಡೆ ಮಾಡು ಮಾಣೆಂದ ॥26॥

೦೨೭ ನಿನ್ನ ಕೈಯಲಿ ...{Loading}...

ನಿನ್ನ ಕೈಯಲಿ ಬರಲಿ ಸತ್ತಿಗೆ
ಯೆನ್ನ ಕೈಯಲಿ ಹೊಡೆಸು ಬಂಡಿಯ
ನಿನ್ನ ತಮ್ಮನ ಹೆಗಲಲಾತನ ಹಡಪ ಹಾಯ್ಕಿರಲಿ
ನಿನ್ನ ಬಂಧುಗಳವನ ಬೇಂಟೆಯ
ಕುನ್ನಿಗಳ ಹಿಡಿಯಲಿ ಸುಯೋಧನ
ನಿನ್ನ ಭಾಗ್ಯವನೊದೆದು ಕಳೆ ಕೇಡಾವುದೆಮಗೆಂದ ॥27॥

೦೨೮ ಗೆಲುವೆನವದಿರನೆಮ್ಬ ಬರಿಕ ...{Loading}...

ಗೆಲುವೆನವದಿರನೆಂಬ ಬರಿಕ
ಕ್ಕುಲಿತೆಯಲ್ಲದೆ ದ್ರೋಣಭೀಷ್ಮರಿ
ಗಳುಕದರಿಭಟರಿವನ ಕೊಂಬರೆ ಕಂಡು ಮರುಳಾದೈ
ಬಲುಬಿದಿರನುಚ್ಚಳಿಸುವಳಿಮುಖ
ಕೆಳೆಯ ಕಬ್ಬಾನುವುದೆ ಕೌರವ
ಕುಲವನದ್ದಿದೆ ಪಾಪಿ ಕಷ್ಟವ ನೆನೆದೆ ಹೋಗೆಂದ ॥28॥

೦೨೯ ಅರಿಶಿರವ ಸೆಣ್ಡಾಡಿ ...{Loading}...

ಅರಿಶಿರವ ಸೆಂಡಾಡಿ ಎನ್ನೀ
ಕರವು ವಂದಿ ವ್ರಾತದೆಡರನು
ಪರಿಹರಿಸಿತೀ ಹದನು ನಾವ್ ಹಿಂದೀಸು ಕಾಲದಲಿ
ಧರಣಿಪತಿ ನಿನ್ನಿಂದ ಕರ್ಣನ
ತುರಗವಾಘೆಯ ಚಮ್ಮಟಿಗೆಗೀ
ಕರವು ಹೂಡುವುದಾಯ್ತು ಹರಹರ ಧನ್ಯರಾವೆಂದ ॥29॥

೦೩೦ ಜಾತಿಹೀನರ ಕರ್ಮವುತ್ತಮ ...{Loading}...

ಜಾತಿಹೀನರ ಕರ್ಮವುತ್ತಮ
ಜಾತಿಗಳ ಕರ್ತವ್ಯ ತಿರ್ಯ
ಗ್ಜಾತಿಗಳ ಗತಿ ಧರ್ಮವೃತ್ತಿಯ ಸೇರುವೆಯನರಿದು
ಆತನಳವಡಿಸಿದನು ವಿಧಿ ನಿಮ
ಗಾತ ಮಾಡಿದನಳಿವ ಸಾಮ
ಥ್ರ್ಯಾತಿಶಯವುಂಟೈಸಲೇ ಶಿವಯೆನುತ ಖತಿಗೊಂಡ ॥30॥

೦೩೧ ಆಸುರದ ಬೆರಗೇಕೆ ...{Loading}...

ಆಸುರದ ಬೆರಗೇಕೆ ನಮ್ಮೊಡ
ನೀಸು ಮಾತೇಕೆಮ್ಮ ರಕ್ಷಿಸು
ವಾಸೆಯುಂಟೇ ಮಾಡಿ ಮಾಣ್ಬುದು ಕರುಣವಿಲ್ಲದಡೆ
ವಾಸಿವಟ್ಟವ ನೋಡಿದನೆ ಲ
ಕ್ಷಿ ್ಮೀಶನವರಲಿ ಸೂತ ಕರ್ಮಾ
ಭ್ಯಾಸಿಯೇ ಮುರವೈರಿ ಮುನ್ನೆಂದನು ಸುಯೋಧನನು ॥31॥

೦೩೨ ಮುರಹರನ ಸಮಜೋಳಿ ...{Loading}...

ಮುರಹರನ ಸಮಜೋಳಿ ನೀವಾ
ನರನ ಸಮಗೈ ಕರ್ಣನಿಂತಿ
ಬ್ಬರನು ನೀವಿಬ್ಬರು ವಿಭಾಡಿಸಿ ಗೆಲುವುದೇನರಿದು
ಸುರರ ಕಾರ್ಯದಲಂದು ಸಾರಥಿ
ಸರಸಿಜೋದ್ಭವನಾಗನೇ ಎ
ನ್ನರಸುತನವಿಂದಳಿದುದಿದ ನೀನುಳುಹಬೇಕೆಂದ ॥32॥

೦೩೩ ಒಣಗುತಿದೆ ಕುರುವಂಶಲತೆ ...{Loading}...

ಒಣಗುತಿದೆ ಕುರುವಂಶಲತೆ ಫಲು
ಗುಣನ ಕೋಪಾನಳನ ನಾಲಗೆ
ಕೆಣಕುತಿದೆ ಕಕ್ಕುಲಿತೆಬಟ್ಟರೆ ಕಾಣೆ ಕಾವವರ
ಅಣಕಿಸದೆ ಕಾರುಣ್ಯವರ್ಷವ
ನೊಣಗಲಲಿ ಸುರಿ ಪಾಪಿ ಮಕ್ಕಳ
ಹೆಣನ ಕಾಣುತ ದುಃಖವಿಲ್ಲ ದುರಾತ್ಮ ನೀನೆಂದ ॥33॥

೦೩೪ ದೇವಕೀಸುತನೇನು ಬಣ್ಡಿಯ ...{Loading}...

ದೇವಕೀಸುತನೇನು ಬಂಡಿಯ
ಬೋವಗುಲದಲಿ ಜನಿಸಿದನೆ ಮೇ
ಣಾ ವಿರಿಂಚಿಯದಾವ ಸಾರಥಿಕುಲದ ಪೀಳಿಗೆಯೊ
ಕಾವುದೊಬ್ಬರನೊಬ್ಬರಿದರೊಳ
ಗಾವ ಹಾನಿ ಪರಪ್ರಯೋಜನ
ಭಾವಕರು ಸತ್ಪುರುಷರಿದಕೆ ವಿಚಾರವೇನೆಂದ ॥34॥

೦೩೫ ಗುರು ಪಿತಾಮಹರಿನ್ದ ...{Loading}...

ಗುರು ಪಿತಾಮಹರಿಂದ ಮೋರೆಯ
ಮುರಿದ ವಿಜಯ ವಧೂ ಕಟಾಕ್ಷವ
ತಿರುಹಿ ಹಾಯ್ಕುವ ಗಂಡನಾವನು ನೀವು ತಪ್ಪಿದಡೆ
ಕುರು ಕುಲೋದ್ಧಾರಕನು ಮಾದ್ರೇ
ಶ್ವರನೆನಿಪ ವಿಖ್ಯಾತಿ ಬಂದುದು
ಪರಿಹರಿಸದಿರು ಮಾವ ಎಂದೆರಗಿದನು ಚರಣದಲಿ ॥35॥

೦೩೬ ಶಿವ ಶಿವಾ ...{Loading}...

ಶಿವ ಶಿವಾ ನಿರ್ಬಂಧವಿದು ಕೌ
ರವನಲಾಯಿತೆ ಮದ್ಯಮಯ ಗಂ
ಧವನು ಕುಡಿಸುವ ಪರಿಯಲಾ ತುಂಬಿಗಳ ಸೆರೆವಿಡಿದು
ಅವನಿಪತಿಗಳ ಸೇವೆಯಿದು ಕ
ಷ್ಟವಲೆ ಮೊದಲಲಿ ಬಳಿಕ ನಾವಿ
ನ್ನವಗಡಿಸಲೇನಹುದು ಸಾರಥಿಯಾದೆವೇಳೆಂದ ॥36॥

೦೩೭ ಆಯಿತೇ ಸನ್ತೋಷ ...{Loading}...

ಆಯಿತೇ ಸಂತೋಷ ಕಮಲದ
ಳಾಯತೇಕ್ಷಣನೊಡನೆ ಬಂಡಿಯ
ಬೋಯಿಕೆಗೆ ವೀಳೆಯವ ಹಿಡಿದೆವು ಹಲವು ಮಾತೇನು
ದಾಯ ಬಂದುದೆ ನಿನಗೆ ಬೊಮ್ಮಂ
ಗಾಯಿತೇ ಸೂತತ್ವವಾದಡೆ
ರಾಯ ಹೇಳೈ ತ್ರಿಪುರ ದಹನದ ಕಥೆಯ ನೀನೆಂದ ॥37॥

+೦೫ ...{Loading}...