೦೬

೦೦೦ ಸೂಚನೆ ನಗರ ...{Loading}...

ಸೂಚನೆ: ನಗರ ಮೂರರ ದೂರುಕಾರರ
ದುಗುಡವನು ಪರಿಹರಿಸಿ ಕರುಣಾ
ಳುಗಳರಸ ಶಿವ ಸಂತವಿಟ್ಟನು ಸುರ ಕದಂಬಕವ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಕೌರವ ನೃಪತಿ ಶಲ್ಯಗೆ
ಹೇಳಿದನು ಸಾರಥ್ಯ ಸಂಯೋಜನ ಸಮಾಹಿತವ
ಲೋಲನಾಪರಿಕರ್ಮತರು ನಿ
ರ್ಮೂಲನೈಕಕ್ಷಮ ಸುಧಾಕರ
ಮೌಳಿ ಕೇಳೀ ಕಲಿತ ವಿಸ್ತರ ವರ ಕಥಾಂತರವ ॥1॥

೦೦೨ ತಾರಕನ ಮಕ್ಕಳುಗಳೆನಿಸುವ ...{Loading}...

ತಾರಕನ ಮಕ್ಕಳುಗಳೆನಿಸುವ
ತಾರಕಾಕ್ಷನು ಕಮಳಲೋಚನ
ವೀರ ವಿದ್ಯುನ್ಮಾಲಿಯೆಂಬೀ ಮೂವರತಿಬಳರು
ಘೋರತರ ಸುತಪಃಪ್ರಭಾವಿ
ಸ್ತಾರಿಗಳಸಂಖ್ಯಾತಯುಗದಲಿ
ವಾರಿಜೋದ್ಭವನನು ವಶೀಕರಿಸಿದರು ಭಕುತಿಯಲಿ ॥2॥

೦೦೩ ಬನ್ದು ಕಮಲಜನಿವದಿರಿದಿರಲಿ ...{Loading}...

ಬಂದು ಕಮಲಜನಿವದಿರಿದಿರಲಿ
ನಿಂದನೆಲೆ ಋಷಿಗಳಿರ ಸಾಕಿ
ನ್ನೆಂದು ಪರಿಯಂತೀ ತಪೋನುಷ್ಠಾನದಾಯಾಸ
ನಿಂದು ಬೇಡುವುದೊಲಿದುದನು ನಾ
ವಿಂದು ಸಲಿಸುವೆವೆನಲು ನಿಮಿಷಕೆ
ಕಂದೆರೆದು ಕಮಳಾಸನಂಗೆರಗಿದರು ಭಕ್ತಿಯಲಿ ॥3॥

೦೦೪ ಎನಿತನೊಲಿದಡೆ ಏನಹುದು ...{Loading}...

ಎನಿತನೊಲಿದಡೆ ಏನಹುದು ದು
ರ್ಜನರು ಪುರುಷಾರ್ಥಿಗಳೆ ಹಾವಿಂ
ಗನಿಲವೇ ಆಹಾರವಾದಡೆ ಬಿಟ್ಟುದೇ ವಿಷವ
ದನುಜರದ್ಭುತ ತಪವ ಮಾಡಿದ
ರನಿಮಿಷಾವಳಿ ಬೇಂಟೆಯಾಡಲು
ನೆನೆದು ಬಿನ್ನೈಸಿದರು ಕಮಲಭವಂಗೆ ನಿಜಮತವ ॥4॥

೦೦೫ ರಚಿಸುವೆವು ಪುರಮೂರನಗ್ಗದ ...{Loading}...

ರಚಿಸುವೆವು ಪುರಮೂರನಗ್ಗದ
ಖಚರ ಕಿನ್ನರ ಸಿದ್ಧ ನಿರ್ಜರ
ನಿಚಯವೆಮಗೋಲೈಸಿ ಹೋಗಲಿ ಹಲವುಮಾತೇನು
ಉಚಿತದಲಿ ನಿಮ್ಮಡಿಗಳನು ಪರಿ
ರಚಿಸಲಾವೋಲೈಸುವೆವು ವರ
ವಚನ ನಿಮ್ಮದು ಕರುಣಿಸುವುದಮರತ್ವವನು ನಮಗೆ ॥5॥

೦೦೬ ಹಾ ಮಹಾದೇವೀ ...{Loading}...

ಹಾ ಮಹಾದೇವೀ ಕುಠಾರರ
ತಾಮಸದ ನೆನಹಿದ್ದ ಪರಿಯಿಂ
ತೀ ಮಹಾನುಷ್ಠಾನವಿದರಲಿ ಶಾಂತಿ ಲವವಿಲ್ಲ
ಕಾಮಿತವನಿವದಿರಿಗೆ ಕೊಟ್ಟರೆ
ಕಾಮಹರ ಕಮಳಾಕ್ಷರಿಗೆ ಸಂ
ಗ್ರಾಮದಲಿ ಜಯವಾಗದೆಂದಡಿಗಡಿಗೆ ಬೆರಗಾದ ॥6॥

೦೦೭ ಹುಲಿಗೆ ಧೈರ್ಯವನೆರಕೆಗಳನಹಿ ...{Loading}...

ಹುಲಿಗೆ ಧೈರ್ಯವನೆರಕೆಗಳನಹಿ
ಗಳಿಗೆ ಖಳರಿಗೆ ಲಕ್ಷ್ಮಿಯನು ಕ
ತ್ತಲೆಗೆ ಕಾಠಿಣ್ಯವನು ಚೈತನ್ಯವನು ಗಿರಿಗಳಿಗೆ
ಕೊಲೆಗಡಿಕರಿಗೆ ನಿತ್ಯದೇಹವ
ನೊಲಿದು ಕೊಟ್ಟರೆ ಲೇಸು ಬಳಿಕೇ
ನೆಲೆ ಮಹಾದೇವೇನ ನೆನೆದರೊ ಶಿವಶಿವಾ ಎಂದ ॥7॥

೦೦೮ ಪುರವ ವಿರಚಿಸಿ ...{Loading}...

ಪುರವ ವಿರಚಿಸಿ ದಿವ್ಯ ಸಾಸಿರ
ವರುಷ ಕೈಗೂಡಿದರೆ ಒಂದೇ
ಸರಳಲಾವವನೆಚ್ಚಡಾಗಳೆ ನಿಮಗೆ ಕಡೆಗಾಲ
ಬರಲಿ ಬಳಿಕಿಂದ್ರಾದಿ ನಿರ್ಜರ
ನೊರಜುಗಳ ನೀವ್ ಸದೆಯಿ ಹೋಗೆಂ
ದರಸ ಕೇಳೈ ಕೊಟ್ಟನವರಿಗೆ ಕಮಲಭವ ವರವ ॥8॥

೦೦೯ ಕರುಣವಿನಿತೇ ಸಾಕು ...{Loading}...

ಕರುಣವಿನಿತೇ ಸಾಕು ನಮಗೇ
ನುರದಲೊಗೆದವೆ ಮೊಲೆಗಳೆಮ್ಮಯ
ಪುರವನೊಂದಂಬಿನಲಿ ಗೆಲುವನ ತಾಯಿ ಹುಸಿಯೆನುತ
ದುರುಳರೀತನ ಬೀಳುಕೊಂಡು
ಬ್ಬರದ ಹರುಷದಿ ಹೆಚ್ಚಿ ಮಯನನು
ಕರಸಿ ಮಾಡಿಸಿದರು ಮಹಾ ವಿಭವದಲಿ ನಗರಗಳ ॥9॥

೦೧೦ ಕನಕದಲಿ ರಜತದಲಿ ...{Loading}...

ಕನಕದಲಿ ರಜತದಲಿ ಬಲುಗ
ಬ್ಬುನದಲೊಂದೊಂದಕ್ಕೆ ಶತ ಯೋ
ಜನದ ತೆರಹುಗಳೆಡೆಗೆ ಹಬ್ಬಿಸುವಮಳ ತೋರಣದ
ವಿನುತ ನಗರಿಗಳಾದುವಲ್ಲಿಯ
ದನುಜರೆರೆಗಳ ಹಾಯ್ಕಿ ಗಾಣದ
ಲನಿಮಿಷರನೀಡಾಡಿಕೊಂಡರು ದುರ್ಗವನು ಸುರರ ॥10॥

೦೧೧ ಸೂರೆವೋಯಿತು ಸುರಪತಿಯ ...{Loading}...

ಸೂರೆವೋಯಿತು ಸುರಪತಿಯ ಭಂ
ಡಾರ ಹೆಂಡಿರುಸಹಿತ ನಿರ್ಜರ
ನಾರಿಯರು ತೊತ್ತಾದರಮರಾರಿಗಳ ಮನೆಗಳಿಗೆ
ಮೂರು ಭುವನದೊಳಿವದಿರಾಣೆಯ
ಮೀರಿ ಬದುಕುವರಿಲ್ಲ ಕಡೆಯಲಿ
ತಾರಕನ ಮಕ್ಕಳಿಗೆ ಕೈವರ್ತಿಸಿತು ಜಗವೆಂದ ॥11॥

೦೧೨ ನೆರೆದುದಮರರು ಹಾಳು ...{Loading}...

ನೆರೆದುದಮರರು ಹಾಳು ಹರಿ ಸಾ
ಗರದ ಕಡೆಯಲಿ ರೂಹುಗಳೆದು
ಟ್ಟರುವೆಗಳ ಕಾಳಿಕೆಯ ಮೋರೆಯ ತಾರಿದೊಡಲುಗಳ
ಹುರಿದ ಧೈರ್ಯದ ತಳ್ಳವಾರುವ
ತರಳ ಹೃದಯದ ದೇವರಿಂದ್ರನ
ನರಸಿ ಕಂಡರು ತಮ್ಮೊಳಾಳೋಚನೆಯ ಮಾಡಿದರು ॥12॥

೦೧೩ ತಾರಕನ ಮಕ್ಕಳುಗಳೇ ...{Loading}...

ತಾರಕನ ಮಕ್ಕಳುಗಳೇ ಹಿಂ
ದಾರ ಗೆಲಿದರು ತಪವ ಮಾಡಿ ವಿ
ಕಾರಿಗಳು ಬ್ರಹ್ಮಂಗೆ ಬಂದಿಯನಿಕ್ಕಿದರು ಬಳಿಕ
ವಾರಿಜೋದ್ಭವ ಮೇಲನರಿಯ ಕು
ಠಾರ ನಾಯ್ಗಳ ಹೆಚ್ಚಿಸಿದನಿದ
ನಾರಿಗರುಪುವುವೆವೆಂದು ಸುಯ್ದರು ಬಯ್ದು ಕಮಲಜನ ॥ 13॥

೦೧೪ ಆದರೆಯು ನಮಗಾತನೇ ...{Loading}...

ಆದರೆಯು ನಮಗಾತನೇ ಗತಿ
ಯೀ ದುರಾತ್ಮರಿಗೆಂದು ಹರಿವೆಂ
ದಾದರಿಸಿ ಕೇಳುವೆವೆನುತ ಕಮಲಜನ ಹೊರೆಗೈದಿ
ಖೇದವನುಸುರಿದರು ಪಿತಾಮಹ
ನಾ ದಿವಿಜಗಣ ಸಹಿತ ಬಂದನು
ವೇದಸಿದ್ಧ ವಿಶುದ್ಧ ದೈವವ ಕಾಬ ತವಕದಲಿ ॥14॥

೦೧೫ ಬನ್ದು ಕೈಲಾಸಾದ್ರಿಯಲಿ ...{Loading}...

ಬಂದು ಕೈಲಾಸಾದ್ರಿಯಲಿ ಗಿರಿ
ನಂದನಾವಕ್ಷೋಜ ಘುಸೃಣ
ಸ್ಕಂಧತನು ಚಿನ್ಮಯ ನಿರಂಜನ ಭೂರಿ ಪಂಜರನ
ವಂದ್ಯಮಾನ ಸುರಾಸುರೋರಗ
ವೃಂದ ಮಣಿಮಕುಟ ಪ್ರಭಾ ನಿ
ಷ್ಯಂದ ಭೂಯಸ್ತಿಮಿತಕಾಯನ ಕಂಡನಬುಜಭವ ॥15॥

೦೧೬ ಕೊರಳ ಕಪ್ಪಿನ ...{Loading}...

ಕೊರಳ ಕಪ್ಪಿನ ಚಾರು ಚಂದ್ರಾ
ಭರಣ ಮೂರ್ಧದ ಭಾಳನಯನದ
ಭರಿತ ಪರಿಮಳದಂಗವಟ್ಟದ ಜಡಿದ ಕೆಂಜೆಡೆಯ
ಕರಗಿ ಕಾಸಿದವಿದ್ಯೆಯನು ಬೇ
ರಿರಿಸಿ ಶುದ್ಧಬ್ರಹ್ಮವನು ಕಂ
ಡರಿಸಿದಂತಿರಲೆಸೆವ ಶಿವನನು ಕಂಡನಬುಜಭವ ॥16॥

೦೧೭ ವೇದವರಿಯದ ತರ್ಕವಿದ್ಯಾ ...{Loading}...

ವೇದವರಿಯದ ತರ್ಕವಿದ್ಯಾ
ವಾದ ನಿಲುಕದ ಬುಧರ ಮತಿ ಸಂ
ಪಾದನೆಗೆ ಮುಖಗೊಡದ ವಾಚ್ಯಾಯನರ ಚೇತನಕೆ
ಹೋದ ಹೊಲಬಳವಡದ ಬ್ರಹ್ಮೇಂ
ದ್ರಾದಿ ಸುರರುಬ್ಬಟೆಗೆ ಸೋಲದ
ನಾದಿ ದೇವರದೇವ ಶಿವನನು ಕಂಡನಬುಜಭವ ॥17॥

೦೧೮ ಕನ್ತುಹರನನು ವಿಮಳನನು ...{Loading}...

ಕಂತುಹರನನು ವಿಮಳನನು ವೇ
ದಾಂತ ವೇದ್ಯನನದ್ವಿತೀಯನ
ಚಿಂತ್ಯ ಮಹಿಮನ ಸಚ್ಚಿದಾನಂದೈಕರಸಮಯನ
ಅಂತ್ಯರಹಿತನನಪ್ರಮೇಯನ
ನಂತರೂಪನನಂಘ್ರಿಭಜಕ ಭ
ವಾಂತಕನನುದ್ದಂಡ ದೈವವ ಕಂಡನಬುಜಭವ ॥18॥

೦೧೯ ಇದ್ದುದಗಣಿತ ರುದ್ರ ...{Loading}...

ಇದ್ದುದಗಣಿತ ರುದ್ರ ಕೋಟಿಗ
ಳಿದ್ದುದನುಪಮ ವಿಷ್ಣು ಕೋಟಿಗ
ಳಿದ್ದುದಂಬುಜಭವ ಸುರೇಂದ್ರಾದಿಗಳು ಶತಕೋಟಿ
ಇದ್ದುದಮಳಾಮ್ನಾಯ ಕೋಟಿಗ
ಳಿದ್ದುದಗಣಿತ ಮಂತ್ರಮಧ್ಯದೊ
ಳಿದ್ದ ನಿರ್ಮಳ ಖಂಡಪರಶುವ ಕಂಡನಬುಜಭವ ॥19॥

೦೨೦ ಪುಳಕಜಲವುಬ್ಬರಿಸೆ ಕುಸುಮಾಂ ...{Loading}...

ಪುಳಕಜಲವುಬ್ಬರಿಸೆ ಕುಸುಮಾಂ
ಜಳಿಯನಂಘ್ರಿದ್ವಯಕೆ ಹಾಯಿಕಿ
ನಳಿನಭವ ಮೆಯ್ಯಿಕ್ಕಿದನು ಭಯಭರಿತ ಭಕ್ತಿಯಲಿ
ಬಳಿಯಲಮರೇಂದ್ರಾದಿ ದಿವಿಜಾ
ವಳಿಗಳವನಿಗೆ ಮೆಯ್ಯ ಚಾಚಿದ
ರುಲಿವುತಿರ್ದುದು ಜಯಜಯ ಧ್ವಾನದಲಿ ಸುರಕಟಕ ॥20॥

೦೨೧ ಪರಮಕರುಣ ಕಟಾಕ್ಷರಸದಲಿ ...{Loading}...

ಪರಮಕರುಣ ಕಟಾಕ್ಷರಸದಲಿ
ಹೊರೆದು ಕಮಳಾಸನನ ಹತ್ತಿರೆ
ಕರೆದು ಮನ್ನಿಸಿ ನಿಖಿಳ ನಿರ್ಜರ ಜನವ ಸಂತೈಸಿ
ಬರವಿದೇನಿದ್ದಂತೆ ವಿಶ್ವಾ
ಮರ ಕದಂಬಕ ಸಹಿತ ಎಂದಂ
ಬುರುಹಭವನನು ನಸುನಗುತ ನುಡಿಸಿದನು ಶಶಿಮೌಳಿ ॥21॥

೦೨೨ ತಾರಕನ ಮಕ್ಕಳುಗಳಿಗೆ ...{Loading}...

ತಾರಕನ ಮಕ್ಕಳುಗಳಿಗೆ ನೆರೆ
ಸೂರೆವೋದುದು ಸುರರ ಸಿರಿ ಮು
ಮ್ಮಾರುವೋದುದು ಸುರರ ಸತಿಯರು ಖಳರ ಮನೆಗಳಿಗೆ
ಚಾರುವೈದಿಕ ಹವ್ಯಕವ್ಯ ವಿ
ಹಾರವೃತ್ತಿಗಳಳಿದವಿದನವ
ಧಾರಿಸೆಂದಬುಜಾಸನನು ಮಾಡಿದನು ಬಿನ್ನಹವ ॥22॥

೦೨೩ ನಗೆಯ ಮೊಳೆ ...{Loading}...

ನಗೆಯ ಮೊಳೆ ನಸುಹೊಳೆಯೆ ಬೊಮ್ಮನ
ಮೊಗವ ನೋಡಿದನಭವನೀಶನ
ಬಗೆಯ ಭಾವವನರಿದು ತಲೆಗುತ್ತಿದನು ಕಮಲಭವ
ದುಗುಡವನು ಬಿಡಿ ನಿಖಿಳ ದಿವಿಜಾ
ಳಿಗಳು ಪಶುಗಳಲಾ ವಿರಿಂಚನ
ವಿಗಡತನದಲಿ ಕೆಟ್ಟಿರಕಟಿನ್ನಂಜಬೇಡೆಂದ ॥23॥

೦೨೪ ಪಶುಪತಿತ್ವವ ನಮಗೆ ...{Loading}...

ಪಶುಪತಿತ್ವವ ನಮಗೆ ಕೊಡಿ ನೀವ್
ಪಶುಗಳಾಗಿರಿ ಪಾಶುಪತ ವರ
ನಿಶಿತ ಶರದಲಿ ದೈತ್ಯ ದುರ್ಗವನುರುಹಿ ತೋರುವೆವು
ದೆಸೆದೆಸೆಗೆ ಹರೆದಖಿಳದೇವ
ಪ್ರಸರವನು ನೀವ್ ನೆರಹಿ ಮೇಲಿ
ನ್ನಸಮಸೆಗೆ ಹೆದರದಿರಿ ಎಂದನು ನಗುತ ಮದನಾರಿ ॥24॥

೦೨೫ ಜಾರಿದುಬ್ಬಿನ ಹೊತ್ತ ...{Loading}...

ಜಾರಿದುಬ್ಬಿನ ಹೊತ್ತ ದುಗುಡದ
ಮೋರೆಗಳ ಮೋನದ ನಿಹಾರದ
ದೂರುಗಂಗಳ ದೇವನಿಕರವ ಕಂಡು ಕರುಣದಲಿ
ಏರುವಡೆದುದು ಮನವವಿದ್ಯೆಗೆ
ಮಾರುವೋದಿರಲಾ ಎನುತ ಶಿವ
ತೋರಿ ನುಡಿದನು ಪಾಶುಪತ್ಯದ ಸಾರ ಸಂಗತಿಯ ॥25|

೦೨೬ ಕರ್ಮಕಿಙ್ಕರರಾಗಿ ಕೃತ ...{Loading}...

ಕರ್ಮಕಿಂಕರರಾಗಿ ಕೃತ ದು
ಷ್ಕರ್ಮವಾಸನೆವಿಡಿದು ತಾನೇ
ಕರ್ಮಕರ್ತನು ಭೋಗಿ ತಾನೇ ದುಃಖಿ ಸುಖಿಯೆಂದು
ನಿರ್ಮಳಾತ್ಮನೊಳೀಯಹಂಕೃತಿ
ಧರ್ಮವನೆ ನೇವರಿಸಿ ಮರುಗುವ
ದುರ್ಮತಿಗಳನು ಪಶುಗಳೆಂದರೆ ಖೇದವೇಕೆಂದ ॥26|

೦೨೭ ಪಞ್ಚವಿಂಶತಿ ತತ್ವರೂಪದ ...{Loading}...

ಪಂಚವಿಂಶತಿ ತತ್ವರೂಪದ
ಸಂಚವರಿಯದೆ ನೀತಿಮುಖದಲಿ
ರಂಚೆಗಾಣದೆ ಸಗುಣಮಯ ನೀಹಾರದಲಿ ಮುಳುಗಿ
ಮಿಂಚುವೆಳಗಿನ ಬಳಕೆಯಲಿ ಮನ
ಮುಂಚಿ ಮೈಗೊಂಡಳಲುವಾತುಮ
ವಂಚಕರು ನೀವ್ ಪಶುಗಳೆಂದರೆ ಖೇದವೇಕೆಂದ ॥27॥

೦೨೮ ತೋರುವೀ ಜಗವೆಲ್ಲ ...{Loading}...

ತೋರುವೀ ಜಗವೆಲ್ಲ ಬೊಮ್ಮವೆ
ತೋರುತಿದೆಯೆನಿಪರ್ಥದಲಿ ಸಲೆ
ತೋರುವೀ ಜಗಕೆಲ್ಲ ಪರತತ್ವದಲಿ ಪರಿಣಾಮ
ತೋರುವೀ ತೋರಿಕೆಯೊಳಗೆ ಸಲೆ
ಮೀರಿ ತೋರುವ ನಿಜವನರಿಯದ
ಗಾರುಗಳು ನೀವ್ ಪಶುಗಳೆಂದರೆ ಖೇದವೇಕೆಂದ ॥28॥

೦೨೯ ಆದಿಭೌತಿಕದಿನ್ದ ನೊನ್ದು ...{Loading}...

ಆದಿಭೌತಿಕದಿಂದ ನೊಂದು ವಿ
ರೋಧಿ ಷಡ್ವರ್ಗದ ವಿಕಾರ
ವ್ಯಾಧಿಯಲಿ ಬೆಂಡಾಗಿ ಭವಪಾಶದಲಿ ಬಿಗಿವಡೆದು |
ವಾದ ರಚನೆಯ ಬಲೆಗೆ ಸಿಲುಕಿ ವಿ
ರೋಧಗೊಂಬೀ ಮೋಹವಿದ್ಯಾ
ಸಾಧಕರು ನೀವ್ ಪಶುಗಳೆಂದರೆ ಖೇದವೇಕೆಂದ ॥29॥

೦೩೦ ಪಶುಪತಿಯೆ ಪರಮಾತ್ಮ ...{Loading}...

ಪಶುಪತಿಯೆ ಪರಮಾತ್ಮ ಜೀವರು
ಪಶುಗಳೀಪರಿ ಜೀವಭಾವದೊ
ಳೆಸಗುವರು ನೀವ್ ಪಶುಗಳೀಗಳು ನಿಮ್ಮ ರಕ್ಷಣವ
ಪಸರಿಸುವ ಪರಮಾತ್ಮ ತಾನೀ
ಘಸಣಿ ನಿಮಗೇಕೆಂದು ದೇವ
ಪ್ರಸರವನು ತಿಳುಹಿದನು ಕಾರುಣ್ಯದಲಿ ಕಾಮಾರಿ ॥30॥

೦೩೧ ತುಬ್ಬಿ ಕೊಟ್ಟುದವಿದ್ಯೆಯನು ...{Loading}...

ತುಬ್ಬಿ ಕೊಟ್ಟುದವಿದ್ಯೆಯನು ಸುಧೆ
ಗೊಬ್ಬುಗಳ ಗಂಡಿಗರ ಗಾಢದ
ಗರ್ಭವನು ಹೊಳ್ಳಿಸಿತು ಗರಳಗ್ರೀವನುಪದೇಶ
ಹುಬ್ಬಿನಲಿ ಮಾತಾಡಿ ತಮ್ಮೊಳ
ಗೊಬ್ಬರೊಬ್ಬರು ತಿಳಿದು ಸಕಳ ಸು
ಪರ್ಬಜನವೆರಗಿದುದು ಜಯಜಯ ಎನುತ ಪಶುಪತಿಗೆ ॥31॥

೦೩೨ ಜಗವುಘೇ ಎನ್ದುದು ...{Loading}...

ಜಗವುಘೇ ಎಂದುದು ಜಯಧ್ವನಿ
ಜಗವ ಝೊಂಪಿಸಿತೊಗ್ಗಿನಂಜುಳಿ
ಗಗನದಗಲಕೆ ಕುಣಿವುತಿದ್ದುದು ಸುರರ ಭಾಳದಲಿ
ಬೆಗಡು ಬೀತುದು ಬೇಸರಿನ ಬಲು
ದಗಹು ಸೋತುದು ಶಿವಗೆ ದೈತ್ಯಾ
ರಿಗಳು ಮುದದಲಿ ಮಾಡಿದರು ಮೂರ್ಧಾಭಿಷೇಚನವ ॥32॥

೦೩೩ ಪಾಶುಪತ್ಯದ ಪಟ್ಟವಾಯ್ತು ...{Loading}...

ಪಾಶುಪತ್ಯದ ಪಟ್ಟವಾಯ್ತು ಮ
ಹೇಶನಲಿ ಬ್ರಹ್ಮಾದಿ ದೇವರು
ವಾಸಿವಟ್ಟವ ಬಿಟ್ಟರೋಲೈಸಿದರು ಪಶುಪತಿಯ
ಪಾಶುಪತ ಸುವ್ರತವ ಧರಿಸಿದು
ದಾ ಸುಪರ್ವಸ್ತೋಮ ವಿಶ್ವಾ
ಧೀಶನೆಸೆದನು ಕೋಟಿ ಶತಸೂರ್ಯ ಪ್ರಕಾಶದಲಿ ॥33॥

+೦೬ ...{Loading}...