೧೮

೦೦೦ ಸೂ ಗಣ್ಡುಗಲಿ ...{Loading}...

ಸೂ. ಗಂಡುಗಲಿ ಯಮತನುಜನಲಿ ಮಾ
ರ್ತಾಂಡತನಯನ ವಧೆಗೆ ನೇಮವ
ಕೊಂಡು ಕದನೋದ್ಧಾಮದಲಿ ಹೊರವಂಟನಾ ಪಾರ್ಥ

೦೦೧ ಕೇಳು ಧೃತರಾಷ್ಟ್ರಾವನಿಪ ...{Loading}...

ಕೇಳು ಧೃತರಾಷ್ಟ್ರಾವನಿಪ ಭೂ
ಪಾಲನನು ಸಾಮದಲಿ ಮುರರಿಪು
ಬೋಳವಿಸಿ ಭಾವಜ್ಞ ನಂದಿಸಿದನು ಮನೋವ್ಯಥೆಯ
ಮೇಲುಸುರ ಬಿಕ್ಕುಳಿನ ಬಿಗುಹಿನ
ತಾಳಿಗೆಯ ನೀರುಗಳ ಮುಕ್ಕುಳಿ
ನಾಲಿಗಳ ನರನಾಥ ತೆಗೆದಪ್ಪಿದನು ಫಲುಗುಣನ ॥1॥

೦೦೨ ಒರಲುತರಸನ ಮುರುಚಿಕೊಣ್ಡಡಿ ...{Loading}...

ಒರಲುತರಸನ ಮುರುಚಿಕೊಂಡಡಿ
ಗೆರಗೆ ಕೈಯೊಡನವನಿಪತಿ ಮುರಿ
ದೆರಗಿ ಪಾರ್ಥನ ಸೇರಿ ತಕ್ಕೈಸಿದನು ಗೋಳಿಡುತ
ಮರುಗಿದಳು ದ್ರೌಪದಿ ದೃಗಂಬುಗ
ಳೊರತೆಯಲಿ ಸಹದೇವ ನಕುಳರ
ಲರಿಯೆನುಪಮಿಸಲವರ ಬಹುಳಾಕ್ರಂದನ ಧ್ವನಿಯ ॥2॥

೦೦೩ ಮುರಹರನ ಮನ್ತ್ರದಲಿ ...{Loading}...

ಮುರಹರನ ಮಂತ್ರದಲಿ ಶೋಕ
ಜ್ವರಕೆ ಬಿಡುಗಡೆಯಾಯ್ತು ಬಳಿಕಿನೊ
ಳರಸ ಸಿರಿಮೊಗದೊಳೆದು ವಸನಾಂಚಲದೊಳಾನನವ
ಒರಸಿ ಪಾರ್ಥನ ಸಂತವಿಸಿ ಮಂ
ದಿರಕೆ ಬಿಜಯಂಗೈದು ಮುದದಲಿ
ಕರಸಿ ಕಾಣಿಕೆಗೊಂಡು ಪರಿವಾರವನು ಮನ್ನಿಸಿದ ॥3॥

೦೦೪ ಇಟ್ಟಣಿಸುವರಿಸೈನ್ಯ ಜಲಧಿಗೆ ...{Loading}...

ಇಟ್ಟಣಿಸುವರಿಸೈನ್ಯ ಜಲಧಿಗೆ
ಕಟ್ಟೆಯಾದನು ಭೀಮನೊಬ್ಬನ
ಬಿಟ್ಟು ನೋಡುವುದುಚಿತವೇ ಪರಿವಾರ ಪಂಥದಲಿ
ಕೊಟ್ಟ ನೇಮವ ಯಮಳರಿಗೆ ಜಗ
ಜಟ್ಟಿ ಸಾತ್ಯಕಿ ಕಮಲಮುಖಿಯೊಡ
ಹುಟ್ಟಿದನು ಮೊದಲಾಗಿ ನೃಪಜನವೇಳಿ ನೀವೆಂದ ॥4॥

೦೦೫ ದೇವ ಪರಿವಾರಕ್ಕೆ ...{Loading}...

ದೇವ ಪರಿವಾರಕ್ಕೆ ನೇಮವ
ನೀವ ಸಮಯದಲಿಂದು ನಿಮ್ಮ ಕೃ
ಪಾವಲೋಕನವಾದುದೆನ್ನ ಪರಾಕ್ರಮಾನಳಕೆ
ಜೀವಸಖನಲ್ಲಾ ಸುಯೋಧನ
ನಾವ ಪಾಡು ವಿರೋಧಿಕುಲ ವಿ
ದ್ರಾವಣಕೆ ಕೊಡು ತನಗೆ ನೇಮವನೆಂದನಾ ಪಾರ್ಥ ॥5॥

೦೦೬ ಬರಸು ಭಾಷೆಯನಿನ್ದು ...{Loading}...

ಬರಸು ಭಾಷೆಯನಿಂದು ಕರ್ಣನ
ಶಿರವುಳಿದು ತಾವರೆಯ ನಗೆ ಪೈ
ಸರಿಸಿದರೆ ಮೈಬೆಸುಗೆ ಬಿಟ್ಟರೆ ಜಕ್ಕವಕ್ಕಿಗಳ
ಇರುಳ ಬೀಜವನಿಂದು ನಭದಲಿ
ಹರಹಿದರೆ ಕಲಿಭೀಮನಯ್ಯನ
ಹರಹು ನಿಂದರೆ ಬಳಿಕ ನಿಮ್ಮಯ ತಮ್ಮನಲ್ಲೆಂದ ॥6॥

೦೦೭ ಖಳನ ಹಿಂಸಾಪರನ ...{Loading}...

ಖಳನ ಹಿಂಸಾಪರನ ಡಂಬನ
ಚಳಮತಿಯ ನಾಸ್ತಿಕನ ನಿಂದಾ
ಕುಳನ ಪರಧನಬಾಧಕನ ದತ್ತಾಪಹಾರಕನ
ಜ್ವಲನದನ ಶಿಶುಘಾತಕನ ಪರಿ
ದಳಿತಧರ್ಮನ ಗತಿಗಳಲಿ ತಾ
ನಿಳಿವೆನಿಂದೇ ಕೊಲ್ಲದಿರ್ದರೆ ಸೂತನಂದನನ ॥7॥

೦೦೮ ನೀನಿನಿತ ನೆರೆ ...{Loading}...

ನೀನಿನಿತ ನೆರೆ ನುಡಿವರೇ ತ
ನ್ನಾಣೆ ಬಾರೈ ತಂದೆ ಬಾ ಎನು
ತಾ ನರೇಶ್ವರ ತೆಗೆದು ಬಿಗಿಯಪ್ಪಿದನು ಫಲುಗುಣನ
ದಾನವಾಮರರೊಳಗೆ ನಿನಗೆ ಸ
ಮಾನ ಭಟರಿಲ್ಲೆಂಬುದೀ ಸ್ನೇ
ಹಾನುಗುಣವೇ ಲೋಕವರಿಯದೆ ಪಾರ್ಥ ಹೇಳೆಂದ ॥8॥

೦೦೯ ತಾಯೆನುತ ಘನ ...{Loading}...

ತಾಯೆನುತ ಘನ ಸಾರದುರು ತವ
ಲಾಯಿಗಳ ನೂಕಿದನು ಮುದದಲಿ
ಬಾಯ ತಂಬುಲವಿತ್ತು ತಮ್ಮನ ಮತ್ತೆ ತಕ್ಕೈಸಿ
ರಾಯ ಕೇಳೈ ಬಳಿಕಖಿಳ ದಳ
ನಾಯಕರ ಕರೆಕರೆದು ಕದನ ಪ
ಸಾಯತರಿಗಿತ್ತನು ನೃಪತಿ ಕರ್ಪುರದ ವೀಳೆಯವ ॥9॥

೦೧೦ ನೇಮವಾಯಿತು ಮತ್ತೆ ...{Loading}...

ನೇಮವಾಯಿತು ಮತ್ತೆ ನೃಪತಿ
ಸ್ತೋಮವರ್ಜುನನೊಡನೆ ಕದನೋ
ದ್ದಾಮರುಬ್ಬರಿಸಿದರು ಪತಿಕರಣೆಗೆ ಮಹೀಪತಿಯ
ಸೋಮಕರು ನಕುಲಾದಿಗಳು ಸುತ
ಸೋಮಕಾದಿ ಕುಮಾರರಖಿಳ ಸ
ನಾಮರೆದ್ದುದು ತೊಡರ ಝಣಝಣ ರವದ ಖಡೆಯದಲಿ ॥10॥

೦೧೧ ನುಡಿವ ವಾದ್ಯದ ...{Loading}...

ನುಡಿವ ವಾದ್ಯದ ಜಡಿವ ಕಹಳೆಯ
ಹೊಡೆವ ಭೇರಿಯ ರವದ ರಭಸದೊ
ಳೊಡೆದುದಾ ದಿಗುಭಿತ್ತಿಯೆನೆ ಚಲಿಸುವ ಚತುರ್ಬಲದ
ತುಡುಕು ಚಮರಿಯ ಝಾಡಿಗೆದರಿನ
ಗಡಣಿಸುವ ಝಲ್ಲರಿಯ ದಳ ಬರ
ಸಿಡಿಲ ಮೇಳವದಂತೆ ನೆರೆದುದು ನೃಪತಿಯಿದಿರಿನಲಿ ॥11॥

೦೧೨ ವೀರ ಸೇಸೆಯನಿಕ್ಕಿ ...{Loading}...

ವೀರ ಸೇಸೆಯನಿಕ್ಕಿ ರಾಯನ
ನಾರಿ ಪರಸಿದಳಖಿಳ ವಿಪ್ರರ
ಚಾರು ಚಾತುರ್ವೇದ ಮಂಗಳಸೂಕ್ತ ಘೋಷದಲಿ
ತೇರನೇರಿದನಸುರರಿಪು ಸಹಿ
ತಾರುಭಟೆಯಲಿ ನೂಕಿದವು ರತು
ನಾರತಿಯ ತಳಿಗೆಗಳು ವರಕಾಂತಾ ಕದಂಬದಲಿ ॥12॥

೦೧೩ ಕೂಡೆಗರಿಗಟ್ಟಿದವು ರಥದಲಿ ...{Loading}...

ಕೂಡೆಗರಿಗಟ್ಟಿದವು ರಥದಲಿ
ಹೂಡಿದಶ್ವವ್ರಾತವಾನೆಗ
ಳೀಡಿರಿದು ಬರಿಕಯ್ಯನೆತ್ತಿದವೊಲೆದವಡಿಗಡಿಗೆ
ಜೋಡಿಸಿತು ಜಯ ಜಯ ಜಯಧ್ವನಿ
ಕೂಡೆ ಜಗದಗಲದಲಿ ಬಿರುದುಪ
ವಾಡಗಳ ಮೊಗನೆಗಹಿ ಹೊಗಳಿತು ವಂದಿ ಸಂದೋಹ ॥13॥

೦೧೪ ನಿಳಯವನು ಹೊರವಣ್ಟು ...{Loading}...

ನಿಳಯವನು ಹೊರವಂಟು ಬೀದಿಗ
ಳೊಳಗೆ ಬರೆಬರೆ ಮುಂದೆ ಮೋಹಿದ
ತಳಿಗೆದಂಬುಲ ವೀರಸೇಸೆಯ ಮಂಗಳಾರತಿಯ
ಫಲ ಸಮೂಹದ ಕಾಣಿಕೆಯ ಕೋ
ಮಲೆಯರುಪ್ಪಾರತಿಯ ಮನೆಮನೆ
ಗಳಲಿ ಮನ್ನಿಸಿಕೊಳುತ ಪಾಳೆಯದಿಂದ ಹೊರವಂಟ ॥14॥

೦೧೫ ಮೇಲೆ ಮೊಳಗುವ ...{Loading}...

ಮೇಲೆ ಮೊಳಗುವ ದೇವದುಂದುಭಿ
ಜಾಲದೊಸಗೆಯ ಪಕ್ಷಿಮೃಗದನು
ಕೂಲ ಶಕುನದ ಸೌಮನಸ್ಯದ ಸಾಧುವಾದದಲಿ
ಲಾಲನೆಯ ಮೈವಳಿಯ ಲಳಿಯ ವಿ
ಶಾಲ ಮಂದಾನಿಲನಖಿಳ ಭೂ
ತಾಳಿ ಸಂತೋಷದಲಿ ಪತಿಕರಿಸಿತು ಧನಂಜಯನ ॥15॥

೦೧೬ ನಡೆದು ಬನ್ದುದು ...{Loading}...

ನಡೆದು ಬಂದುದು ರಾಯದಳ ಮುಂ
ಗುಡಿಯ ವಾದ್ಯಧ್ವನಿಯ ಥಟ್ಟಣೆ
ತುಡುಕಿತರಿ ಚತುರಂಗ ಚಪಳರ ಕರ್ಣ ಕೋಟರವ
ನಡುಗಿದವು ಕೈದುಗಳು ಜೋಧರ
ಕೊಡಹಿದವು ಗಜರಾಜಿ ವಾಜಿಯ
ಗಡಣವೀಡಾಡಿದವು ರಾವ್ತರನಿವರ ಥಟ್ಟಿನಲಿ ॥16॥

೦೧೭ ಅರಸ ಕೇಳೈ ...{Loading}...

ಅರಸ ಕೇಳೈ ಸಮರಭೂಮಿಗೆ
ಪರಿದರರಸಾಳುಗಳು ರಾಯನ
ಸಿರಿಮುಡಿಗೆ ಸುಕ್ಷೇಮ ಮುಚ್ಚಿದವೇರುಮದ್ದಿನಲಿ
ಮರಳಿ ನೇಮವ ಕೊಂಡು ಫಲುಗುಣ
ಬರುತಲೈದನೆ ಜೀಯ ನಿಮ್ಮಯ
ಚರಣ ಸರಸಿಜದಾಣೆಯೆಂದರು ಭೀಮಸೇನಂಗೆ ॥17॥

೦೧೮ ಜೋಡು ಬಿರಿದುದು ...{Loading}...

ಜೋಡು ಬಿರಿದುದು ಹರುಷಜಲ ಕಡೆ
ಗೋಡಿವರಿದುದು ರೋಮಪುಳಕದ
ಬೀಡು ಬಿಟ್ಟುದು ಮೈಯನುಬ್ಬಿದನೊಲೆದನಡಿಗಡಿಗೆ
ನೀಡುವರೆ ತಳುವೆನುತ ತೆಗೆದೀ
ಡಾಡಿದನು ದೂತರಿಗೆ ರತುನದ
ಜೋಡಣೆಯ ಭುಜ ಕಂಠ ಕರ್ಣಾಂಘ್ರಿಗಳ ಭೂಷಣವ ॥18॥

೦೧೯ ರಾಯ ಹದುಳಿಸಿದನೆ ...{Loading}...

ರಾಯ ಹದುಳಿಸಿದನೆ ಮಹಾದೇ
ವಾಯಿದೆತ್ತಣ ಪುಣ್ಯವೋ ರಣ
ದಾಯಸವ ಸೈರಿಸಿದ ತನಗಿದು ಸಫಲವಾಯಿತಲ
ದಾಯ ಬಂದುದು ನಮಗೆ ಹೋ ಲೇ
ಸಾಯಿತೇಳು ವಿಶೋಕ ಸಾಕುಳಿ
ದಾಯುಧದ ಪರಿಗಣಿತವನು ಹೇಳೆಂದನಾ ಭೀಮ ॥19॥

೦೨೦ ಉಳಿದ ಕೈದುಗಳೇಸು ...{Loading}...

ಉಳಿದ ಕೈದುಗಳೇಸು ಬಂಡಿಯ
ಲುಳಿದ ಸರಳಿನ ಹೊದೆಯ ಲೆಕ್ಕವ
ತಿಳಿದು ಹೇಳೈ ತಂದೆ ಸಾರಥಿ ನೋಡಲಹುದಿನ್ನು
ಅಳಲಿಸಿದ ಕೌರವನ ರಕ್ತದ
ಮಳೆಯೊಳಲ್ಲದೆ ತನ್ನ ಕೋಪಾ
ನಳನ ಝಳವಡಗದು ಯುಧಿಷ್ಠಿರ ರಾಯನಾಣೆಂದ ॥20॥

೦೨೧ ಅರಸ ಚಿತ್ತವಿಸುಳಿದ ...{Loading}...

ಅರಸ ಚಿತ್ತವಿಸುಳಿದ ಧನು ಹ
ನ್ನೆರಡುಸಾವಿರ ಬಲುಸರಳು ಹ
ನ್ನೆರಡುಸಾವಿರ ಬೋಳೆಯೈನೂರರ್ಧಚಂದ್ರಶರ
ಪರಿಗಳಿತ ಲುಳಿಯಂಬು ಕಣಗಿಲ
ಸರಳುಗೂಡಿಪ್ಪತ್ತು ಸಾವಿರ
ವೆರಡುಸಾವಿರವುಳಿದವೀ ನಾರಾಚ ನಿಕರದಲಿ ॥21॥

೦೨೨ ಆಲಿಸೈ ಮುಗುಳಮ್ಬು ...{Loading}...

ಆಲಿಸೈ ಮುಗುಳಂಬು ಸಾವಿರ
ವೇಳು ಬಳಿಕೊಂಬತ್ತು ಸಾವಿರ
ಕೋಲು ಮೀಂಟೆಯ ಕವಲುಗಣೆ ಹನ್ನೆರಡುಸಾವಿರವು
ಮೇಲೆ ಸಾವಿರ ನಾಲ್ಕು ಮುಮ್ಮೊನೆ
ಬೋಳೆಯಂಬೀರೈದುಸಾವಿರ
ನಾಳಿಯಂಬುಗಳಾರುಬಂಡಿಯ ಲೆಕ್ಕವಿದೆಯೆಂದ ॥22॥

೦೨೩ ಪರಶು ಮುಸಲ ...{Loading}...

ಪರಶು ಮುಸಲ ಮುಸುಂಡಿ ಸೆಲ್ಲೆಹ
ಪರಿಘ ತೋಮರ ಚಕ್ರವಸಿ ಮು
ದ್ಗರ ತ್ರಿಶೂಲ ಕಠಾರಿ ಖೇಟಕ ಪಿಂಡಿವಾಳಚಯ
ಸುರಗಿ ಮೊದಲಾದಖಿಳ ಶಸ್ತ್ರೋ
ತ್ಕರವನೊಂದೇ ಬಂಡಿಯಲಿ ಸಂ
ವರಿಸಿದೆನು ರಿಪುರಾಯರೊಡಲಲಿ ಬೀಯಮಾಡೆಂದ ॥23॥

೦೨೪ ಪೂತು ಸಾರಥಿ ...{Loading}...

ಪೂತು ಸಾರಥಿ ಈಸುಬಾಣ
ವ್ರಾತವುಳಿದುದೆ ತನ್ನ ಕರ ಕಂ
ಡೂತಿಯನು ಕಳುಚುವೆನಲಾ ಕೌರವನ ನೆತ್ತಿಯಲಿ
ಆತನೇನಾದನು ಯುಧಿಷ್ಠಿರ
ಸೋತು ಪಿಂಗಿದನೆಂಬ ಹಂಬಲು
ಬೀತುದಿನ್ನೇನೆನ್ನ ನೋಡಾ ಎನುತ ಗರ್ಜಿಸಿದ ॥24॥

೦೨೫ ಚಳಯದಲಿ ಫಲುಗುಣನ ...{Loading}...

ಚಳಯದಲಿ ಫಲುಗುಣನ ಮೋಹರ
ಕಳನ ಪೊಕ್ಕುದು ಹಲವು ಮೊನೆಯಲಿ
ತಳಿತು ನಿಂದುದು ಜಡಿವ ಬಹುವಿಧವಾದ್ಯರಭಸದಲಿ
ಅಳುಕಿತೀ ನಮ್ಮವರು ಭೀಮನ
ಸುಳಿವಿನಲಿ ಸೊಪ್ಪಾದೆವರ್ಜುನ
ನೆಳತಟಕೆ ನಿಲವೆಂತೆನುತ ನೆಗ್ಗಿದುದು ದುಗುಡದಲಿ ॥25॥

೦೨೬ ದಳದ ಮಧ್ಯದೊಳೊನ್ದು ...{Loading}...

ದಳದ ಮಧ್ಯದೊಳೊಂದು ರಥದಲಿ
ಹೊಳೆದು ದುವ್ವಾಳಿಸಿ ಧನಂಜಯ
ನಿಲಿಸಿದನು ನಿಜರಥವ ಭೀಮನ ರಥದ ಮುಂಬಿನಲಿ
ಬಳಿಕ ತನ್ನಿಂದಾದ ಕೋಳಾ
ಹಳವನಾ ತರುವಾಯಲವ್ಯಾ
ಕುಳ ಸಮಾಧಾನವನು ಬಿನ್ನಹಮಾಡಿದನು ಪಾರ್ಥ ॥26॥

೦೨೭ ಜನಪ ಕೇಳೈ ...{Loading}...

ಜನಪ ಕೇಳೈ ಬಳಿಕ ಭೀಮಾ
ರ್ಜುನರ ಮೋಹರಕೈದುಸಾವಿರ
ಕನಕಮಯರಥಸಹಿತ ಬಿಟ್ಟನು ಶಕುನಿ ಸೂಠಿಯಲಿ
ಅನಿಲಸುತನರ್ಜುನನ ನೀ ಸಾ
ರೆನುತ ಕೆದರಿದನಹಿತನಂಬಿನ
ಮೊನೆಯೊಳಳ್ಳಿರಿದೌಕಿ ತುಡುಕುವ ತೇರ ತೆಕ್ಕೆಯಲಿ ॥27॥

೦೨೮ ಒನ್ದು ಶರಸನ್ಧಾನದಲಿ ...{Loading}...

ಒಂದು ಶರಸಂಧಾನದಲಿ ಕವಿ
ತಂದವೈಸಾವಿರ ರಥಾವಳಿ
ಯೊಂದು ಧನುವಿನೊಳೀತ ಮೊಗೆದನು ಸರಳಸಾಗರವ
ಸಂದಣಿಸಿತಾ ರಥಿಕರಾ ಹಯ
ವೃಂದವಾ ಸಾರಥಿಗಳಾ ರಥ
ಕೊಂದುಹತ್ತರ ಲೆಕ್ಕದಲಿ ಮಿಕ್ಕವು ಶರವ್ರಾತ ॥28॥

೦೨೯ ಒಗ್ಗಿನೈಸಾವಿರ ರಥಾವಳಿ ...{Loading}...

ಒಗ್ಗಿನೈಸಾವಿರ ರಥಾವಳಿ
ಮುಗ್ಗಿದವು ಕಣೆ ತಾಗಿ ರಥಿಕರು
ನೆಗ್ಗಿದರು ಮೇಲಂಬು ಸುಳಿದೊಯ್ದವು ಸಜೀವಿಗಳ
ಒಗ್ಗೊಡೆದು ಕಲಿಶಕುನಿ ಘಾಯದ
ಸುಗ್ಗಿಯಲಿ ಲಘುವಾಗಿ ಹರುಷದ
ಮುಗ್ಗಿಲೊಣಗಿಲ ಮೋರೆಯಲಿ ತಿರುಗಿದನು ಮೋಹರಕೆ ॥29॥

೦೩೦ ಶಕುನಿ ಮುರಿದನು ...{Loading}...

ಶಕುನಿ ಮುರಿದನು ಬೇಹ ದಳನಾ
ಯಕರು ತಿರುಗಿತು ಭೀಮಸೇನನ
ವಿಕಟ ಸಿಂಹಧ್ವನಿಗೆ ಜರಿದುದು ಭಟರ ಬಲುಹೃದಯ
ಅಕಟಕಟ ಕುರುಸೇನೆ ನಿರ್ನಾ
ಯಕವಲಾ ಹಾ ಎನುತ ಮಂತ್ರಿ
ಪ್ರಕರ ಮರುಗಿತು ತುರುಗಿತಲ್ಲಿಯದಲ್ಲಿ ಕಳವಳಿಸಿ ॥30॥

+೧೮ ...{Loading}...