೦೭

೦೦೦ ಸೂ ರಾಯ ...{Loading}...

ಸೂ. ರಾಯ ಭಾರತ ವೀರರಾಯನು
ರಾಯ ವನದಾವಾನಳನು ಕಲಿ
ವಾಯುತನುಜನ ಹಳಚಿ ಮಡಿದನು ಕೌರವರ ರಾಯ

೦೦೧ ಕೇಳು ಧೃತರಾಷ್ಟ್ರಾವನಿಪ ...{Loading}...

ಕೇಳು ಧೃತರಾಷ್ಟ್ರಾವನಿಪ ಕೈ
ಮೇಳವಿಸಿದರು ವಿಷಮ ಸಮರಕ
ರಾಳರೋಷಶ್ವ್ವಾಸಧೂಮಳಮುಖಭಯಂಕರರು
ಚಾಳನದ ಚೌಪಟರು ಶಸ್ತ್ರಾ
ಸ್ಫಾಳನದ ವಜ್ರಾಭಿಘಾತಾ
ಭೀಳನಿಷ್ಠುರರೊದಗಿದರು ಕೌರವ ವೃಕೋದರರು ॥1॥

೦೦೨ ಹಳಚಿದರು ಸುಳಿ ...{Loading}...

ಹಳಚಿದರು ಸುಳಿ ಗಾಳಿಯಂತಿರೆ
ಸುಳಿದು ಖಗಪತಿಯಂತೆ ಹೊಯ್ಲಲಿ
ಬಳಸಿ ಬಿಗಿದೆರಗಿದರು ಬಿಡೆಯದ ಮತ್ತಗಜದಂತೆ
ಅಳುವಿದರು ಶಿಖಿಯಂತೆ ಚೂರಿಸಿ
ನಿಲುಕಿದರು ಫಣಿಯಂತೆ ಪಯಮೈ
ಲುಳಿಯಲೊಲೆದರು ಪಾದರಸದಂದದಲಿ ಪಟುಭಟರು ॥2॥

೦೦೩ ಎರಗಿದರು ಸಿಡಿಲನ್ತೆ ...{Loading}...

ಎರಗಿದರು ಸಿಡಿಲಂತೆ ಮಿಂಚಿನ
ಮಿರುಗಿನಂತಿರೆ ಹೊಳೆದು ಹಜ್ಜೆಯ
ಹೆರದೆಗೆದು ಹಾಯಿದರು ತಗರಂದದಲಿ ತವಕದಲಿ
ಇರುಕಿದರು ಗ್ರಹದಂತೆ ಮಿಗೆ ಮು
ಕ್ಕುರುಕಿದರು ಮುಗಿಲಂತೆ ರೋಷಕೆ
ನೆರೆಯದಿಬ್ಬರ ಮನವೆನಲು ಹೊಯ್ದಾಡಿದರು ಭಟರು ॥3॥

೦೦೪ ಗದೆಗದೆಯ ಹೊಯ್ಲುಗಳ ...{Loading}...

ಗದೆಗದೆಯ ಹೊಯ್ಲುಗಳ ಖಣಿಖಟಿ
ಲೊದಗಿತಿಬ್ಬರ ಬೊಬ್ಬೆ ಭುವನವ
ಬೆದರಿಸಿತು ಪದಥಟ್ಟಣೆಯ ಘಟ್ಟಣೆಯ ಘಾತಿಯಲಿ
ಅದಿರಿತಿಳೆ ಮಝ ಭಾಪು ಭಟರೆಂ
ದೊದರಿತಾ ಪರಿವಾರದಬ್ಬರ
ತ್ರಿದಶನಿಕರದ ಸಾಧುರವವಂಜಿಸಿತು ಮೂಜಗವ ॥4॥

೦೦೫ ಬೆರಳ ತೂಗಿದನಡಿಗಡಿಗೆ ...{Loading}...

ಬೆರಳ ತೂಗಿದನಡಿಗಡಿಗೆ ಹಲ
ಧರನುದಗ್ರಗದಾ ವಿಧಾನಕೆ
ಶಿರವನೊಲೆದನು ಶೌರಿ ಮಿಗೆ ಮೆಚ್ಚಿದನು ಯಮಸೂನು
ವರ ಗದಾಯುಧ ವಿವಿಧ ಸತ್ವಕೆ
ಪರಮಜೀವವಿದೆಂದನರ್ಜುನ
ನರರೆ ಮಝರೇ ರಾವು ಜಾಗೆಂದುದು ಭಟವ್ರಾತ ॥5॥

೦೦೬ ತಿವಿದನವನಿಪನನಿಲತನುಜನ ಕವಚ ...{Loading}...

ತಿವಿದನವನಿಪನನಿಲತನುಜನ
ಕವಚ ಬಿರಿದುದು ಕಯ್ಯೊಡನೆ ರಣ
ದವಕಿ ಕೈದೋರಿದನು ಕೌರವನೃಪನ ವಕ್ಷದಲಿ
ಸವಗ ಸೀಳಿತು ಮರಳಿ ಹೊಯ್ದನು
ಪವನಜನ ಸೀಸಕದ ವರಮಣಿ
ನಿವಹ ಸಿಡಿದವು ಸಿಡಿಲು ಮೆಟ್ಟಿದ ಮೇರುಗಿರಿಯಂತೆ ॥6॥

೦೦೭ ಅಡಿಗಡಿಗೆ ಕರ್ಪುರದ ...{Loading}...

ಅಡಿಗಡಿಗೆ ಕರ್ಪುರದ ಕವಳವ
ನಡಸಿದರು ತಾಳಿಗೆಗೆ ಬಳಿಕಡಿ
ಗಡಿಗೆ ಹೆರಸಾರಿದರು ಸಮರಶ್ರಮನಿವಾರಣಕೆ
ಕಡುಹು ತಳಿತುದು ಪೂತು ಫಲವಾ
ಯ್ತಡಿಗಡಿಗೆ ಮಚ್ಚರದ ಮಸಕದ
ತಡಿಕೆವಲೆ ನುಗ್ಗಾಯ್ತು ಮನ ಕುರುಪತಿಯ ಪವನಜನ ॥7॥

೦೦೮ ಶ್ವಾಸದಲಿ ಕಿಡಿಸಹಿತ ...{Loading}...

ಶ್ವಾಸದಲಿ ಕಿಡಿಸಹಿತ ಕರ್ಬೊಗೆ
ಸೂಸಿದವು ಕಣ್ಣಾಲಿಗಳು ಕ
ಟ್ಟಾಸುರದಿ ಕೆಂಪೇರಿದವು ಬಿಗುಹೇರಿ ಹುಬ್ಬುಗಳು
ರೋಷ ಮಿಗಲೌಡೊತ್ತಿ ಬಹಳಾ
ಭ್ಯಾಸಿಗಳು ಡಾವರಿಸಿದರು ಡೊ
ಳ್ಳಾಸವೋ ರಿಪುಸೇನೆ ಕಾಣದು ಚಿತ್ರಪಯಗತಿಯ ॥8॥

೦೦೯ ಹೊಕ್ಕು ಕುರುಪತಿ ...{Loading}...

ಹೊಕ್ಕು ಕುರುಪತಿ ಭೀಮಸೇನನ
ನಿಕ್ಕಿದನು ಕಂದದಲಿ ಗದೆಯನು
ಸೆಕ್ಕಿದನು ವಾಮಾಂಗದಲಿ ಪವಮಾನನಂದನನ
ಜಕ್ಕುಲಿಸಿದವೊಲಾಯ್ತು ಜರೆದು ನ
ಭಕ್ಕೆ ಪುಟನೆಗೆದನಿಲಜನ ಸೀ
ಸಕ್ಕೆ ಹೊಯ್ದಾರಿದನು ಕೌರವನೃಪತಿ ಖಾತಿಯಲಿ ॥9॥

೦೧೦ ಬಾಯೊಳೊಕ್ಕುದು ರುಧಿರ ...{Loading}...

ಬಾಯೊಳೊಕ್ಕುದು ರುಧಿರ ಕಂಗಳ
ದಾಯ ತಪ್ಪಿತು ಡೆಂಢಣಿಸಿ ಕಲಿ
ವಾಯುಸುತನಪ್ಪಳಿಸಿ ಬಿದ್ದನು ಕಯ್ಯ ಗದೆ ಕಳಚಿ
ಹಾಯೆನುತ ತನ್ನವರು ಭಯದಲಿ
ಬಾಯ ಬಿಡೆ ನಿಮಿಷಾರ್ಧದಲಿ ನಿರ
ಪಾಯನೆದ್ದನು ನೋಡಿದನು ಚೇತರಿಸಿ ಕೆಲಬಲನ ॥10॥

೦೧೧ ಹೆದರು ಹಿಙ್ಗಿತು ...{Loading}...

ಹೆದರು ಹಿಂಗಿತು ನೆಲಕೆ ಮಾರು
ದ್ದಿದನು ಕರವನು ಸೂಸಿ ಹಾರಿದ
ಗದೆಯ ಕೊಂಡನು ಸೆರಗಿನಲಿ ಸಂತೈಸಿ ಶೋಣಿತವ
ಅದಿರೆ ನೆಲನವ್ವಳಿಸಿ ಮೇಲ್ವಾ
ಯಿದನು ಹೊಳಹಿನ ಹೊಯ್ಲ ಹೊದ
ರೆದ್ದುದು ವಿಭಾಡಿಸಿ ಭೀಮ ಹೊಯ್ದನು ನೃಪನ ಮಸ್ತಕವ ॥11॥

೦೧೨ ದೂಟಿ ಬಿದ್ದವು ...{Loading}...

ದೂಟಿ ಬಿದ್ದವು ಸೀಸಕವು ಶತ
ಕೋಟಿ ಘಾಯದ ಘಟನೆಯೊಳು ಶತ
ಕೋಟಿ ಘಾಯಕೆ ಸಿಡಿದ ಹೇಮಾಚಳದ ತುದಿಯಂತೆ
ತಾಟಿತಸು ಕಂಠದಲುಸುರ ಪರಿ
ಪಾಟಿ ತಪ್ಪಿತು ಮೃತ್ಯುವಿನ ದರ
ಚೀಟಿ ಹಿಡಿದನೊ ಹೇಳೆನಲು ಮಲಗಿದನು ಮೈಮರೆದು ॥12॥

೦೧೩ ಹಾರಿತೊನ್ದೆಸೆಗಾಗಿ ಗದೆ ...{Loading}...

ಹಾರಿತೊಂದೆಸೆಗಾಗಿ ಗದೆ ಮುರಿ
ದೇರಿದವು ಕಣ್ಣಾಲಿ ನೆತ್ತಿಯ
ಜೋರು ಮುಸುಕಿತು ಮುಖವನೊಂದು ವಿಘಳಿಗೆ ಮಾತ್ರದಲಿ
ಜಾರಿತಂತಸ್ತಿಮಿತ ಭಯ ಹುರಿ
ಯೇರಿತಧಿಕಕ್ರೋಧ ಕರಣದ
ತಾರುಥಟ್ಟಡಗಿದುದುಪಸರಿಸಿತಸು ನಿಜಾಂಗದಲಿ ॥13॥

೦೧೪ ನಿಮಿಷದಲಿ ಕನ್ದೆರೆದನನ್ತಃ ...{Loading}...

ನಿಮಿಷದಲಿ ಕಂದೆರೆದನಂತಃ
ಶ್ರಮದ ಝಳವಡಗಿತು ವಿಪಕ್ಷ
ಭ್ರಮಣಚೇತೋಭಾವ ಭವನದ ಮುಖವಿಕಾಸದಲಿ
ತಮದ ತನಿಮಸಕದಲಿ ಭುಜವಿ
ಕ್ರಮ ಛಡಾಳಿಸಲೆದ್ದು ಭೂಪೋ
ತ್ತಮನು ಕೊಂಡನು ಗದೆಯನನುವಾಗೆಂದನನಿಲಜನ ॥14॥

೦೧೫ ಈಗಳನುವಾದೆನೆ ಧರಿತ್ರಿಯ ...{Loading}...

ಈಗಳನುವಾದೆನೆ ಧರಿತ್ರಿಯ
ಭಾಗವನು ಬೇಡಿದಡೆ ನೀ ಮುರಿ
ದಾಗಳನುವಾದುದು ಕಣಾ ಗದೆ ನಿನ್ನ ಕಿರುದೊಡೆಗೆ
ತಾಗಿ ನೋಡಿನ್ನೊಮ್ಮೆನುತ ಮೈ
ಲಾಗಿನಲಿ ಹೊಳೆಹೊಳೆದು ಕೈದುವ
ತೂಗಿ ತುಡುಕಿದನರಸನನು ಬೊಬ್ಬಿರಿದು ಕಲಿ ಭೀಮ ॥15॥

೦೧೬ ಉಬ್ಬಬೇಡೆಲೆ ಭೀಮ ...{Loading}...

ಉಬ್ಬಬೇಡೆಲೆ ಭೀಮ ಗದೆಯೋ
ಬೊಬ್ಬೆಯೋ ಬಲುಗೈದು ನಿನ್ನಯ
ಗರ್ಭಗಿರಿಗಿದೆ ಸಿಡಿಲೆನುತ ಹೊಯ್ದನು ವೃಕೋದರನ
ತುಬ್ಬಿದನು ಗದೆಯಿಂದ ಘಾಡಿಸಿ
ಹಬ್ಬಿದನು ಕೆಲಬಲಕೆ ಖತಿಯಲಿ
ಕೊಬ್ಬಿದರೆವೊಯ್ಲುಗಳ ದನಿ ಕಿವಿಗೆಡಿಸೆ ಮೂಜಗವ ॥16॥

೦೧೭ ಧರಣಿಪತಿ ಕೇಳ್ ...{Loading}...

ಧರಣಿಪತಿ ಕೇಳ್ ಭೀಮಸೇನನ
ಧರಧುರದ ಹೊಯ್ಲುಗಳ ಗದೆಯಲಿ
ಹೊರಳಿಗಿಡಿ ಝೊಂಪಿಸಿದುವುರು ಖದ್ಯೋತ ಮಂಡಲವ
ಅರಸನೆರಗಿದಡನಿಲಸುತ ಪೈ
ಸರಿಸಿ ಕಳಚಿದನಾ ಕ್ಷಣದೊಳ
ಬ್ಬರಿಸಿ ಹೊಯ್ದನು ಭೀಮ ಕೌರವನೃಪನ ಕಂಧರವ ॥17॥

೦೧೮ ನೋಡಿದನು ದಣ್ಡೆಯಲಿ ...{Loading}...

ನೋಡಿದನು ದಂಡೆಯಲಿ ಲಾಗಿಸಿ
ಹೂಡಿದನು ನೃಪ ಭೀಮನಲಿ ಪಯ
ಪಾಡಿನಲಿ ಪಲ್ಲಟಿಸಿದನು ಪಡಿತಳಕೆ ಕುರುರಾಯ
ಘಾಡಿಸಿದನುಪ್ಪರದ ಘಾಯಕೆ
ಕೂಡೆ ತಗ್ಗಿದನನಿಲಸುತ ಖಯ
ಖೋಡಿಯಿಲ್ಲದೆ ಭಟರು ಹೊಯ್ದಾಡಿದರು ಖಾತಿಯಲಿ ॥18॥

೦೧೯ ತೊಲಗಿ ನಿನ್ದರು ...{Loading}...

ತೊಲಗಿ ನಿಂದರು ಮತ್ತೆ ಭಾರಿಯ
ಬಳಲಿಕೆಯ ಬೇಳುವೆಯ ಚಿತ್ತ
ಸ್ಖಲಿತರಂಗೀಕರಿಸಿದರು ಕರ್ಪುರದ ವೀಳೆಯವ
ಘಳಿಲನೆದ್ದರು ನಿಮಿಷಮಾತ್ರಕೆ
ಮಲೆತು ನಿಂದರು ಘಾಯಘಾತಿಯ
ಸುಳಿವನವಧಾನಿಸುತ ತೂಗಿದರಾಯುಧದ್ವಯವ ॥19॥

೦೨೦ ಲಾಗಿಸುತ ಲಳಿಯೆದ್ದು ...{Loading}...

ಲಾಗಿಸುತ ಲಳಿಯೆದ್ದು ಭೀಮನ
ತಾಗಿಸಿದನವನೀಶನಾತನ
ಭಾಗಧೇಯವನೇನನೆಂಬೆನು ಹೊಯ್ಲು ಹೊರಗಾಯ್ತು
ಬೇಗುದಿಯಲುಬ್ಬೆದ್ದು ನೃಪತಿ ವಿ
ಭಾಗಿಸಿದನನಿಲಜನ ತನುವನು
ಬೇಗದಲಿ ಕಳಚಿದನು ಪವನಜ ಪಯದ ಬವರಿಯಲಿ ॥20॥

೦೨೧ ತಪ್ಪಿಸಿದನೇ ಘಾಯವನು ...{Loading}...

ತಪ್ಪಿಸಿದನೇ ಘಾಯವನು ಫಡ
ತಪ್ಪಿಸಿನ್ನಾದಡೆಯೆನುತ ಕಡು
ದರ್ಪದಲಿ ಹೊಯ್ದನು ಸಮೀರಾತ್ಮಜನನವನೀಶ
ತಪ್ಪಿತದು ಗದೆ ತನುವ ರಕುತದ
ದರ್ಪಣದ ರಹಿಯಾಯ್ತು ಗದೆ ಮಾ
ರಪ್ಪಿತರಸನನೆನಲು ಹೊಯ್ದನು ಭಾಳದಲಿ ಭೀಮ ॥21॥

೦೨೨ ವಟ್ಟಿ ಮುರಿದುದು ...{Loading}...

ವಟ್ಟಿ ಮುರಿದುದು ಸೀಸಕದ ಗದೆ
ನಟ್ಟುದರಸನ ನೊಸಲ ರುಧಿರದ
ಕಟ್ಟೆಯೊಡೆದಂದದಲಿ ಕವಿದುದು ನೃಪನ ತನು ನನೆಯೆ
ಕೊಟ್ಟ ಘಾಯಕೆ ಬಳಲಿ ಮರವೆಗೆ
ಬಿಟ್ಟು ಮನವನು ನಿಮಿಷದಲಿ ಜಗ
ಜಟ್ಟಿ ಕೌರವರಾಯ ಕೊಂಡನು ನಿಜಗದಾಯುಧವ ॥22॥

೦೨೩ ಘಾಯಗತಿ ಲೇಸಾಯ್ತು ...{Loading}...

ಘಾಯಗತಿ ಲೇಸಾಯ್ತು ಪೂತುರೆ
ವಾಯುಸುತ ದಿಟ ಸೈರಿಸೆನ್ನಯ
ಘಾಯವನು ಘೋರಪ್ರಹಾರಸಹಿಷ್ಣು ಗಡ ನೀನು
ಕಾಯಲಾಪಡೆ ಫಲುಗುಣನನಬು
ಜಾಯತಾಕ್ಷನ ಕರೆಯೆನುತ ಕುರು
ರಾಯನೆರಗಿದನನಿಲಜನ ಕರ್ಣಪ್ರದೇಶದಲಿ ॥23॥

೦೨೪ ಎಡದ ದಣ್ಡೆಯೊಳೊತ್ತಿ ...{Loading}...

ಎಡದ ದಂಡೆಯೊಳೊತ್ತಿ ಹೊಯ್ಗುಳ
ಕಡುಹ ತಪ್ಪಿಸಿ ಕೌರವೇಂದ್ರನ
ಮುಡುಹ ಹೊಯ್ದನು ಭೀಮ ಮಝ ಭಾಪೆನೆ ಸುರಸ್ತೋಮ
ತಡೆದನಾ ಘಾಯವನು ಗದೆಯಲಿ
ನಡುವನಪ್ಪಳಿಸಿದನು ಭೀಮನ
ಮಿಡುಕು ನಿಂದುದು ನಗುವ ಪಾಂಡವ ಬಲದ ತಲೆ ಮಣಿಯೆ ॥24॥

೦೨೫ ಒಲೆದು ಬಿದ್ದನು ...{Loading}...

ಒಲೆದು ಬಿದ್ದನು ಭೀಮ ಕುಲಗಿರಿ
ಮಲಗುವಂದದಲೇರಬಾಯಿಂ
ದಿಳಿವ ಶೋಣಿತಧಾರೆ ಮಗ್ಗುಲ ಮುಸುಕಿತವನಿಯಲಿ
ಎಲೆ ಮಹಾದೇವಾ ವೃಕೋದರ
ನಳಿದನೇ ಹಾ ಭೀಮ ಹಾಯೆಂ
ದಳಲಿದುದು ಪರಿವಾರ ಸಾತ್ಯಕಿ ಸೃಂಜಯಾದಿಗಳು ॥25॥

೦೨೬ ಮೈಮರೆದನರೆಗಳಿಗೆ ಮಾತ್ರಕೆ ...{Loading}...

ಮೈಮರೆದನರೆಗಳಿಗೆ ಮಾತ್ರಕೆ
ವೈಮನಸ್ಯದ ಜಾಡ್ಯರೇಖೆಯ
ಸುಯ್ ಮಹಾದ್ಭುತವಾಯ್ತು ಪರಿಣತ ಪಾರವಶ್ಯದಲಿ
ಹಾ ಮಹಾದೇವೆನುತ ಹಗೆವನ
ಕೈಮೆಯನು ಬಣ್ಣಿಸುತಲೆದ್ದನ
ಲೈ ಮರುತ್ಸುತ ಸೂಸಿ ಹಾರಿದ ಗದೆಯ ತಡವರಿಸಿ ॥26॥

೦೨೭ ಕಾದುಕೊಳು ಕೌರವ ...{Loading}...

ಕಾದುಕೊಳು ಕೌರವ ಗದಾಸಂ
ಭೇದದಭ್ಯಾಸಿಗಳಿಗಿದೆ ದು
ರ್ಭೇದ ನೋಡಾ ಹೊಯ್ಲಿಗಿದು ಮರೆವೊಗು ಮಹೇಶ್ವರನ
ಹೋದೆ ಹೋಗಿನ್ನೆನುತ ಜಡಿದು ವಿ
ಷಾದಭರದಲಿ ಮುಂದುಗಾಣದೆ
ಕೈದಣಿಯಲಪ್ಪಳಿಸಿದನು ಕಲಿಭೀಮ ಕುರುಪತಿಯ ॥27॥

೦೨೮ ಹಾರಿತೊನ್ದೆಸೆಗಾಗಿ ಗದೆ ...{Loading}...

ಹಾರಿತೊಂದೆಸೆಗಾಗಿ ಗದೆ ಮೈ
ಹೇರಿತುರು ಘಾಯವನು ಮೊಳಕಾ
ಲೂರಿ ಬಿದ್ದನು ವದನದಲಿ ವೆಂಠಣಿಸೆ ರಣಧೂಳಿ
ಕಾರಿದನು ರಕುತವನು ಕೌರವ
ನೇರು ಬಲುಹೋ ಹೋದನೆನುತವೆ
ಚೀರಿತಾ ಪರಿವಾರ ಸುಮ್ಮಾನದ ಸಘಾಡದಲಿ ॥28॥

೦೨೯ ಭಾಪು ಮಝರೇ ...{Loading}...

ಭಾಪು ಮಝರೇ ಭೀಮ ಕೌರವ
ಭೂಪವಿಲಯಕೃತಾಂತ ಕುರುಕುಲ
ದೀಪಚಂಡಸಮೀರ ಕುರುನೃಪತಿಮಿರಮಾರ್ತಾಂಡ
ಕೋಪನಪ್ರತಿಪಕ್ಷಕುಲನಿ
ರ್ವಾಪಣೈಕಸಮರ್ಥ ಎನುತಭಿ
ರೂಪನನು ಹೊಗಳಿದರು ವಂದಿಗಳಬುಧಿ ಘೋಷದಲಿ ॥29॥

೦೩೦ ಜಾಳಿಸಿದ ವೇದನೆಯ ...{Loading}...

ಜಾಳಿಸಿದ ವೇದನೆಯ ಝೊಮ್ಮಿನ
ಜಾಳಿಗೆಯ ಜವ ಹರಿದುದೆಚ್ಚರ
ಮೇಲುಮರವೆಯ ಮುಸುಕು ಜಾರಿತು ಹಾರಿತತಿಭೀತಿ
ಬೇಳುವೆಯ ಕರಣೇಂದ್ರಿಯದ ವೈ
ಹಾಳಿ ನಿಂದುದು ಬಿಗಿದ ಬಳಲಿಕೆ
ಯೂಳಿಗದ ಮೊನೆ ಮುರಿಯೆ ಸಂತೈಸಿದನು ಕುರುರಾಯ ॥30॥

೦೩೧ ಒರೆವ ರಕುತವ ...{Loading}...

ಒರೆವ ರಕುತವ ಧೂಳಿನಿಂದವೆ
ಹೊರಗ ತೊಡೆತೊಡೆದೌಕಿ ಕೋಪದ
ಹೊರಿಗೆ ಝಳಪಿಸೆ ಕಂಗಳಲಿ ಹುಬ್ಬಿನಲಿ ಸುಯ್ಲಿನಲಿ
ಮುರುಕಿಸುವ ರಿಪುಭಟನನೋರೆಯೊ
ಳೆರಗಿ ನೋಡುತ ಸಾರಸತ್ವದ
ನೆರವಣಿಗೆ ಕೈಗೂಡಲೆದ್ದನು ಗದೆಯ ಕೈನೀಡಿ ॥31॥

೦೩೨ ಹಾನಿಯೆಮಗಾಯ್ತೆನ್ದು ಕಡುಸು ...{Loading}...

ಹಾನಿಯೆಮಗಾಯ್ತೆಂದು ಕಡುಸು
ಮ್ಮಾನವುಕ್ಕಿತೆ ನಿಮಿಷದಲಿ ದು
ಮ್ಮಾನ ಶರಧಿಯೊಳದ್ದುವೆನು ತಿದ್ದುವೆನು ನಿನ್ನವರ
ಈ ನಗೆಯನೀ ಬಗೆಯನೀ ವಿಜ
ಯಾನುರಾಗವ ನಿಲಿಸುವೆನು ಯಮ
ಸೂನು ಸೈರಿಸೆನುತ್ತ ಜರೆದನು ವಾಮಹಸ್ತದಲಿ ॥32॥

೦೩೩ ಎಲವೊ ಭೀಮ ...{Loading}...

ಎಲವೊ ಭೀಮ ವಿಘಾತಿಗಳ ಕೈ
ದೊಳಸಿನಲಿ ತೆರಹಾಯ್ತು ನೀನಿ
ಟ್ಟಳಿಸುವಡೆ ನಿನಗಾದುದಾಕಸ್ಮಿಕವದಭ್ಯುದಯ
ಛಲವ ಬಿಡಿಸುವಡೇಳು ನೀ ಮನ
ವಳಕುವಡೆ ನಿನ್ನವರ ಕರೆ ಹೊ
ಯ್ಲೊಳಗಿದೊಂದೇ ಹೊಯ್ಲೆನುತ ಹೊಕ್ಕನು ಮಹೀಪಾಲ ॥33॥

೦೩೪ ಹೊಯ್ದು ತೋರಾ ...{Loading}...

ಹೊಯ್ದು ತೋರಾ ಬಂಜೆ ನುಡಿಯಲಿ
ಬಯ್ದಡಧಿಕನೆ ಬಾಹುವಿಂ ಹೊರ
ಹಾಯ್ದವನೊ ಮೇಣ್ ಮುಖದಲೋ ನೀನಾರು ಜಾತಿಯಲಿ
ಕಯ್ದು ನಿನಗಿದೆ ಲಕ್ಷ ್ಯಪಣ ನಮ
ಗೆಯ್ದುವಡೆ ಗುಪ್ತಪ್ರತಾಪವ
ನೆಯ್ದೆ ಪ್ರಕಟಿಸೆನುತ್ತ ತಿವಿದನು ಭೀಮ ಕುರುಪತಿಯ ॥34॥

೦೩೫ ಅವನಿಪತಿ ಕೇಳ್ ...{Loading}...

ಅವನಿಪತಿ ಕೇಳ್ ಭೀಮಸೇನನ
ತಿವಿಗುಳನು ತಪ್ಪಿಸಿ ಸುಯೋಧನ
ಕವಿದು ನಾಭಿಗೆ ತೋರಿ ಜಂಘೆಗೆ ಹೂಡಿ ಝಳಪದಲಿ
ಲವಣಿಯಲಿ ಲಳಿಯೆದ್ದು ಹೊಯ್ದನು
ಪವನಜನ ಭುಜಶಿರವ ಸೀಸಕ
ಕವಚವಜಿಗಿಜಿಯಾಗೆ ಬೀಳೆನುತರಸ ಬೊಬ್ಬಿರಿದ ॥35॥

೦೩೬ ಮತ್ತೆ ಹೊಯ್ದನು ...{Loading}...

ಮತ್ತೆ ಹೊಯ್ದನು ಭೀಮಸೇನನ
ನೆತ್ತಿಯನು ನಿಪ್ಪಸರದಲಿ ಕಳೆ
ಹತ್ತಿ ಝೋಂಪಿಸಿ ತಿರುಗಿ ಬಿದ್ದನು ಬಿಗಿದ ಮೂರ್ಛೆಯಲಿ
ಕೆತ್ತ ಕಂಗಳ ಸುಯ್ಲ ಲಹರಿಯ
ಸುತ್ತಲೊಗುವರುಣಾಂಬುಗಳ ಕೆಲ
ದತ್ತ ಸಿಡಿದಿಹ ಗದೆಯ ಭಟನೊರಗಿದನು ಮರವೆಯಲಿ ॥36॥

೦೩೭ ಮಡಿದವನ ಹೊಯ್ಯೆನು ...{Loading}...

ಮಡಿದವನ ಹೊಯ್ಯೆನು ಧನಂಜಯ
ತೊಡು ಮಹಾಸ್ತ್ರವನವನಿಪತಿ ಬಿಲು
ದುಡುಕು ಯಮಳರು ಕೈದುಗೊಳಿ ಸಾತ್ಯಕಿ ಶರಾಸನವ
ಹಿಡಿ ಶಿಖಂಡಿ ದ್ರುಪದಸುತರವ
ಗಡಿಸಿರೈ ನಿಮ್ಮವನ ಹರಿಬಕೆ
ಮಿಡುಕುವಡೆ ಬಹುದೆನುತ ತೂಗಿದನವನಿಪತಿ ಗದೆಯ ॥37॥

೦೩೮ ಮೇಲೆ ಕಳವಳವಾಯ್ತು ...{Loading}...

ಮೇಲೆ ಕಳವಳವಾಯ್ತು ದಿಕ್ಕಿನ
ಮೂಲೆ ಬಿರಿಯೆ ಪಿಶಾಚರಾಕ್ಷಸ
ಜಾಲ ವಿದ್ಯಾಧರ ಮಹೋರಗ ಯಕ್ಷ ಕಿನ್ನರರು
ಆಳು ನೀನಹೆ ನಳ ನಹುಷ ಭೂ
ಪಾಲಕುಲದಲಭಂಗನಾದೆ ಕ
ರಾಳಭುಜಬಲ ನೀನೆನುತ ಕೊಂಡಾಡಿತಮರಗಣ ॥38॥

೦೩೯ ಅರಸ ಕೇಳಾಶ್ಚರಿಯವನು ...{Loading}...

ಅರಸ ಕೇಳಾಶ್ಚರಿಯವನು ನಿ
ಮ್ಮರಸನಾಹವ ಸಫಲ ಸುರಕುಲ
ವರಳ ಮಳೆಗರೆದುದು ಕಣಾ ಕುರುಪತಿಯ ಸಿರಿಮುಡಿಗೆ
ಅರಿನೃಪರು ತಲೆಗುತ್ತಿದರು ಮುರ
ಹರ ಯುಧಿಷ್ಠಿರ ಪಾರ್ಥ ಯಮಳರು
ಬೆರಳ ಮೂಗಿನಲಿದ್ದು ಸುಯ್ದರು ಬಯ್ದು ದುಷ್ಕೃತವ ॥39॥

೦೪೦ ಮಿಡಿದನರ್ಜುನ ಧನುವ ...{Loading}...

ಮಿಡಿದನರ್ಜುನ ಧನುವ ಯಮಳರು
ತುಡುಕಿದರು ಕಯ್ದುಗಳ ಸಾತ್ಯಕಿ
ಮಿಡುಕಿದನು ಮರುಗಿದರು ಪಂಚದ್ರೌಪದೀಸುತರು
ಒಡೆಯನಳಿವಿನಲೆಲ್ಲಿಯದು ನೃಪ
ನುಡಿದ ನುಡಿಯೆನುತನಿಲತನುಜನ
ಪಡೆ ಗಜಾಶ್ವವ ಬಿಗಿಯೆ ಗಜಬಜಿಸಿತು ಭಟಸ್ತೋಮ ॥40॥

೦೪೧ ದುಗುಡದಲಿ ಹರಿ ...{Loading}...

ದುಗುಡದಲಿ ಹರಿ ರೌಹಿಣೇಯನ
ಮೊಗವ ನೋಡಿದಡಾತನಿದು ಕಾ
ಳೆಗವಲೇ ಕೃತಸಮಯರಾದಿರಿ ಪೂರ್ವಕಾಲದಲಿ
ಹಗೆಯ ಬಿಡಿ ಕುರುಪತಿಯ ಸಂಧಿಗೆ
ಸೊಗಸಿ ನಿಲಲಿ ಯುಧಿಷ್ಠಿರನ ಮಾ
ತುಗಳ ಕೆಡಿಸದಿರೆಂದನಾ ಕೃಷ್ಣಂಗೆ ಬಲರಾಮ ॥41॥

೦೪೨ ಅರಸ ಕೇಳೈ ...{Loading}...

ಅರಸ ಕೇಳೈ ಬಿದ್ದ ಭೀಮನ
ಹೊರೆಗೆ ಬಂದರ್ಜುನನು ಮೋರೆಗೆ
ಬೆರಳನೊಡ್ಡಿ ಸಮೀರನಂದನನುಸುರನಾರೈದು
ಮರಳಿದನು ಮುರಹರನನೆಕ್ಕಟಿ
ಗರೆದು ಸಪ್ರಾಣನು ಗದಾನಿ
ರ್ಭರಪರಿಶ್ರಮ ಭೀಮ ಬಳಲಿದನೆಂದನಾ ಪಾರ್ಥ ॥42॥

೦೪೩ ದೇವ ಬೆಸಸಿನ್ನನಿಲಸೂನು ...{Loading}...

ದೇವ ಬೆಸಸಿನ್ನನಿಲಸೂನು ಸ
ಜೀವನಹಿತನಿಬರ್ಹಣ ಪ್ರ
ಸ್ತಾವವನು ಕರುಣಿಸುವುದಾತನ ಧರ್ಮವಿಕೃತಿಗಳ
ನೀವು ಕಂಡಿರೆ ನಾಭಿ ಜಂಘೆಗೆ
ಡಾವರಿಸಿದನು ಹಲವು ಬಾರಿ ಜ
ಯಾವಲಂಬನವೆಂತು ಕೃಪೆಮಾಡೆಂದನಾ ಪಾರ್ಥ ॥43॥

೦೪೪ ನೀವು ಮೊದಲಲಿ ...{Loading}...

ನೀವು ಮೊದಲಲಿ ಬೆಸಸಿದಿರಿ ಮಾ
ಯಾವಿಗಳ ಮಾಯೆಯಲಿ ಗೆಲುವುದು
ದೈವಕೃತಿಯಿದು ರಾಜಮಂತ್ರದ ಸಾರತರವೆಂದು
ಈ ವಿರೋಧಿಯ ಧರ್ಮಗತಿ ಸಂ
ಭಾವವನು ಕರ್ತವ್ಯಭಾವವ
ನೀವು ಬಲ್ಲಿರಿಯೆಂದನರ್ಜುನದೇವ ವಿನಯದಲಿ ॥44॥

೦೪೫ ಧಾತುಗೆಟ್ಟನು ಭೀಮ ...{Loading}...

ಧಾತುಗೆಟ್ಟನು ಭೀಮ ಮುಸುಕಿತು
ಭೀತಿ ನಮ್ಮೆಲ್ಲರನು ದೈವ
ವ್ರಾತವಾತನ ಕೊಂಡು ಕೊನರಿತು ಹೊಯ್ದು ಹೂಮಳೆಯ
ಪಾತಕಕೆ ಪಡವಾಗದಮಳ
ಖ್ಯಾತಿ ನೋಯದೆ ವಿಜಯಸಿರಿ ರಾ
ಗಾತಿಶಯದಲಿ ನಮ್ಮ ರಮಿಸುವ ದೆಸೆಯ ಬೆಸಸೆಂದ ॥45॥

೦೪೬ ಅನಿಲಸುತ ಸಪ್ರಾಣಿಸಲಿ ...{Loading}...

ಅನಿಲಸುತ ಸಪ್ರಾಣಿಸಲಿ ರಿಪು
ಜನಪನೂರುವಿಭಂಗವೇ ಮು
ನ್ನಿನ ಪ್ರತಿಜ್ಞೆಯಲಾ ಸಭಾಮಧ್ಯದಲಿ ಕುರುಪತಿಯ
ನೆನಸಿಕೊಡಿ ಸಾಕಿನ್ನು ಬೇರೊಂ
ದನುನಯವು ತಾನೇನು ವಿಜಯಾಂ
ಗನೆಗೆ ದ್ರುಪದಕುಮಾರಿ ತಪ್ಪದೆ ಸವತಿಯಹಳೆಂದ ॥46॥

೦೪೭ ಅರಸ ಕೇಳಾಕ್ಷಣದೊಳನಿಲ ...{Loading}...

ಅರಸ ಕೇಳಾಕ್ಷಣದೊಳನಿಲ
ಸ್ಮರಣೆಯನು ಹರಿ ಮಾಡಿದನು ಸಂ
ಚರಿಸಿದನು ತತ್ತನುಜನಂಗೋಪಾಂಗವೀಥಿಯಲಿ
ತರತರದ ನಾಡಿಗಳೊಳಗೆ ವಿ
ಸ್ತರಿಸಿ ಮೂಲಾಧಾರದಲಿ ಚೇ
ತರಿಸಿ ಸರ್ವಾಂಗದಲಿ ಜೀವಸಮೀರ ಪಸರಿಸಿದ ॥47॥

೦೪೮ ತ್ರಾಣವಿಮ್ಮಡಿಯಾಯ್ತು ...{Loading}...

ತ್ರಾಣವಿಮ್ಮಡಿಯಾಯ್ತು ತಿರುಗಿದ
ಗೋಣು ಮರಳಿತು ರೋಷವಹ್ನಿಗೆ
ಸಾಣೆವಿಡಿದವೊಲಾಯ್ತು ಕಣ್ಣುಗುಳಿದುವು ಕೇಸುರಿಯ
ಠಾಣವೆಡಹಿದ ಗದೆಯ ರಣಬಿ
ನ್ನಾಣ ಮಸುಳಿದ ಮಾನಮರ್ದನ
ದೂಣೆಯದ ಸವ್ಯಥೆಯ ಭಟ ಸಂತೈಸಿದನು ತನುವ ॥48॥

೦೪೯ ಕೊಡಹಿದನು ತನುಧೂಳಿಯನು ...{Loading}...

ಕೊಡಹಿದನು ತನುಧೂಳಿಯನು ಧಾ
ರಿಡುವ ರುಧಿರವ ಸೆರಗಿನಲಿ ಸಲೆ
ತೊಡೆತೊಡೆದು ಕರ್ಪುರದ ಕವಳವನಣಲೊಳಳವಡಿಸಿ
ತೊಡೆಯ ಹೊಯ್ದಾರುವ ಮುರಾರಿಯ
ನೆಡೆಯುಡುಗದೀಕ್ಷಿಸುತ ದೂರಕೆ
ಸಿಡಿದ ಗದೆಯನು ತುಡುಕಿ ನೃಪತಿಯ ತೊಡೆಗೆ ಲಾಗಿಸಿದ ॥49॥

೦೫೦ ಭಾಷೆಗಳುಪರು ಪಾಣ್ಡುಸುತರೆಂ ...{Loading}...

ಭಾಷೆಗಳುಪರು ಪಾಂಡುಸುತರೆಂ
ಬಾಸೆಯಲಿ ನಿನ್ನಾತ ಮೈಮರೆ
ದೋಸರಿಸದಿದಿರಾದನೂರುದ್ವಯವ ವಂಚಿಸದೆ
ಶ್ವಾಸ ಮರಳಿತೆ ನಿನಗೆ ಯೋಗಾ
ಭ್ಯಾಸಿಯಹೆಯೋ ಭೀಮ ಸೈರಣೆ
ಲೇಸು ಮೆಚ್ಚಿದೆನೆನುತ ನೃಪನೆರಗಿದನು ಪವನಜನ ॥50॥

೦೫೧ ಹೊಯ್ದು ಲಳಿಯಲಿ ...{Loading}...

ಹೊಯ್ದು ಲಳಿಯಲಿ ಕರಣಗತಿಯಲಿ
ಹಾಯ್ದು ನಭಕುಪ್ಪರಿಸಿ ಮರಳಿದು
ಹೊಯ್ದು ಹಿಂಗುವ ನೃಪನ ತೊಡೆಗಳನಿಟ್ಟನಾ ಭೀಮ
ಹಾಯ್ದು ಗದೆ ಹೆದ್ದೊಡೆಗಳನು ಮುರಿ
ದಯ್ದಿತವನಿಯನರುಣಜಲದಲಿ
ತೊಯ್ದು ಧೊಪ್ಪನೆ ಕೆಡೆದನಿಳೆಯಲಿ ಕೌರವರ ರಾಯ ॥51॥

೦೫೨ ಹಾರ ಹರಿದುದು ...{Loading}...

ಹಾರ ಹರಿದುದು ಕರ್ಣಪೂರದ
ಚಾರು ಮೌಕ್ತಿಕನಿಕರ ಸಿಡಿದವು
ಧಾರಿಡುವ ರಕುತಾಂಬು ಮಡುಗಟ್ಟಿದುದು ಮಗ್ಗುಲಲಿ
ವೀರ ಭೀಮಾ ಮಝ ಎನುತ ಬಲ
ವಾರಿದುದು ನಿಸ್ಸಾಳ ಸೂಳಿನ
ವೀರಪಣಹದ ಲಗ್ಗೆ ಮಸಗಿತು ಪರರ ಥಟ್ಟಿನಲಿ ॥52॥

೦೫೩ ಬಿದ್ದನೈ ನಿನ್ನಾತನಿನ್ನೇ ...{Loading}...

ಬಿದ್ದನೈ ನಿನ್ನಾತನಿನ್ನೇ
ನೆದ್ದರೈ ದಾಯಿಗರು ಜೂಜನು
ಗೆದ್ದುದಕೆ ಫಲ ಬಂದುದೇ ಸಂಧಾನದಲಿ ಛಲವ
ಹೊದ್ದಿತಕೆ ಹುಲಿಸಾಯ್ತೆ ಬಲುವಗೆ
ಬಿದ್ದನೆಂದುಳುಹಿದನೆ ಪವನಜ
ನುದ್ದುರುಟುತನಕೇನನೆಂಬೆನು ಭೂಪ ಕೇಳ್ ಎಂದ ॥53॥

೦೫೪ ಏಕೆ ಸಞ್ಜಯ ...{Loading}...

ಏಕೆ ಸಂಜಯ ಕೌರವೇಂದ್ರನ
ಸಾಕಿತಕೆ ಫಲವಾಯ್ತು ನೀ ಬರಿ
ದೇಕೆ ಚುಚ್ಚುವೆ ಕಾಸಿ ಬಾದಣಗೊರೆದ ಘಾಯದಲಿ
ನೂಕಿದರೆ ಬಲಭದ್ರನನು ಮೇ
ಲೇಕೆ ಪವನಜ ಮುನಿದನವರ
ವ್ಯಾಕುಳರಲೇ ವೀರನಾರಾಯಣನ ಕರುಣದಲಿ ॥54॥

+೦೭ ...{Loading}...